ಬೆಂಗಳೂರು: ಬೈಕಿನಿಂದ ಸ್ಕಿಡ್ ಆಗಿ ಬಿದ್ದ ಸವಾರ, ರಸ್ತೆಗುಂಡಿಯಲ್ಲಿ ಕುಳಿತು ಪ್ರತಿಭಟನೆ
ನವೆಂಬರ್ 11 ರಂದು ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಯ ಬ್ಯುಸಿಯಲ್ಲಿ ಮಹಾನಗರ ಪಾಲಿಕೆ ಕಾರ್ಯನಿರತವಾಗಿದ್ದರೆ ಹಲಸೂರಿನ ಆದರ್ಶ ಥಿಯೇಟರ್ ಬಳಿ ರಸ್ತೆಯ ಹೊಂಡಗುಂಡಿಯಿಂದ ಬೈಕ್ ಸವಾರ ಜಾರಿ ಬಿದ್ದು ಪ್ರಾಣಾಪಾಯದಿಂದ ಪಾರಾದ ಘಟನೆ ನಡೆದಿದೆ.

ಬೆಂಗಳೂರು: ನವೆಂಬರ್ 11 ರಂದು ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಯ ಬ್ಯುಸಿಯಲ್ಲಿ ಮಹಾನಗರ ಪಾಲಿಕೆ ಕಾರ್ಯನಿರತವಾಗಿದ್ದರೆ ಹಲಸೂರಿನ ಆದರ್ಶ ಥಿಯೇಟರ್ ಬಳಿ ರಸ್ತೆಯ ಹೊಂಡಗುಂಡಿಯಿಂದ ಬೈಕ್ ಸವಾರ ಜಾರಿ ಬಿದ್ದು ಪ್ರಾಣಾಪಾಯದಿಂದ ಪಾರಾದ ಘಟನೆ ನಡೆದಿದೆ.
ಇದರಿಂದ ಕೋಪಗೊಂಡ ಬೈಕ್ ಸವಾರ ರಸ್ತೆ ಗುಂಡಿಯ ಮೇಲೆ ಕುಳಿತು ಪ್ರತಿಭಟನೆ ನಡೆಸಿದರು. ಶುಕ್ರವಾರ ಮುಂಜಾನೆ ಈ ಘಟನೆ ನಡೆದಿದೆ. ದಾರಿಹೋಕರು ಸೆರೆಹಿಡಿದ ಘಟನೆಯ ವೀಡಿಯೊ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಬಿಬಿಎಂಪಿ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಸ್ಥಳೀಯ ಶಾಸಕ ಎಸ್ ರಘು ಅವರ ಸಿವಿ ರಾಮನ್ ನಗರ ವಿಧಾನಸಭಾ ಕ್ಷೇತ್ರ, ಶಾಂತಿನಗರ ಮತ್ತು ಶಿವಾಜಿನಗರದ ಗಡಿಭಾಗದಲ್ಲಿ ಇದೆ. ಗಣ್ಯ ವ್ಯಕ್ತಿಗಳ ಭೇಟಿ, ಹೊಂಡಗುಂಡಿಗಳಿಗೆ ಯಾರಾದರೂ ಬಿದ್ದಾಗ ಮಾತ್ರ ಬಿಬಿಎಂಪಿ ಎಚ್ಚೆತ್ತುಕೊಳ್ಳುತ್ತದೆ ಎನ್ನುತ್ತಾರೆ.
ಘಟನೆಯ ವಿಡಿಯೋ ವೈರಲ್ ಆದ ಬಳಿಕ ಪಾಲಿಕೆ ಅಧಿಕಾರಿಗಳು ಗುಂಡಿ ಸರಿಪಡಿಸುವ ಕಾರ್ಯ ಆರಂಭಿಸಿದ್ದಾರೆ. ಒಂದು ತಿಂಗಳ ಹಿಂದೆಯೇ ಕಾಮಗಾರಿ ಕೈಗೆತ್ತಿಕೊಂಡಿದ್ದೆವು, ಆದರೆ ಮಳೆಯಿಂದಾಗಿ ಟಾರಿಂಗ್ ವಿಳಂಬವಾಗಿದೆ ಎಂದು ಬಿಬಿಎಂಪಿಯ ಪ್ರಮುಖ ರಸ್ತೆಗಳ ಸಹಾಯಕ ಎಂಜಿನಿಯರ್ ಸಿದ್ದೇಶ್ ಹೇಳಿದ್ದಾರೆ.
ಪ್ರತಿಪಕ್ಷ ಕಾಂಗ್ರೆಸ್ ಆಡಳಿತಾರೂಢ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಸರಕಾರದ ಬಳಿ ಅಭಿವೃದ್ಧಿಗೆ ಯಾವುದೇ ಯೋಜನೆ ಇಲ್ಲ. ತಮ್ಮ ಮೊದಲ ಅವಧಿಯಲ್ಲಿ ಬೆಂಗಳೂರನ್ನು ಕಸದ ನಗರವನ್ನಾಗಿ ಬಿಜೆಪಿ ಮಾಡಿತು. ಎರಡನೇ ಹಂತದಲ್ಲಿ ಐಟಿ ರಾಜಧಾನಿಯನ್ನು ಗುಂಡಿಗಳ ಜಂಕ್ಷನ್ ಆಗಿ ಪರಿವರ್ತಿಸಿದ್ದಾರೆ ಎಂದು ಬೆಂಗಳೂರು ಮಾಜಿ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ ಟೀಕಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


