ಗುಂಬಜ್ ಮಾದರಿ ಬಸ್ ನಿಲ್ದಾಣ ವಿವಾದ: ಬಿಜೆಪಿಗೆ ಮುಜುಗರ ತಂದ ರಾಮದಾಸ್ v/s ಪ್ರತಾಪ್‌ಸಿಂಹ ಹಗ್ಗಜಗ್ಗಾಟ!
ಮೈಸೂರಿನ ಕೃಷ್ಣರಾಜ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗಳಲ್ಲಿ ಬರುವ ಕೆಲವು ಪ್ರಯಾಣಿಕರ ತಂಗುದಾಣದ ಮೇಲೆ ಗುಂಬಜ್ ನಿರ್ಮಿಸಿರುವ ವಿಚಾರ ಈಗ ರಾಜಕೀಯ ಕೆಸರು ಎರಚಾಟಕ್ಕೆ ಕಾರಣವಾಗಿದೆ.

ಮೈಸೂರು; ಮೈಸೂರಿನ ಕೃಷ್ಣರಾಜ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗಳಲ್ಲಿ ಬರುವ ಕೆಲವು ಪ್ರಯಾಣಿಕರ ತಂಗುದಾಣದ ಮೇಲೆ ಗುಂಬಜ್ ನಿರ್ಮಿಸಿರುವ ವಿಚಾರ ಈಗ ರಾಜಕೀಯ ಕೆಸರು ಎರಚಾಟಕ್ಕೆ ಕಾರಣವಾಗಿದೆ.
ಸಿಂಹ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾಗಿದ್ದರೆ, ರಾಮದಾಸ್ ಜಿಲ್ಲೆಯ ಕೆಆರ್ ನಗರ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಗುಂಬಜ್ ಮಾದರಿ ಬಸ್ ನಿಲ್ದಾಣ ವಿವಾದ ಇಬ್ಬರ ನಡುವೆ ಹಗ್ಗಜಗ್ಗಾಟಕ್ಕೆ ಕಾರಣವಾಗಿದೆ.
ಪ್ರಯಾಣಿಕರ ತಂಗುದಾಣದ ಬಗೆಗೆ ಆ ಕ್ಷೇತ್ರದ ಶಾಸಕ ಎಸ್. ಎ. ರಾಮದಾಸ್ ಅವರಿಂದ ಮಾಹಿತಿ ಪಡೆಯದೆ ಮಾತನಾಡಿದ ಸಂಸದ ಪ್ರತಾಪ್ ಸಿಂಹ ಅವರು, ಪ್ರಯಾಣಿಕರ ತಂಗುದಾಣದ ಮೇಲಿನ ಗುಂಬಜ್ ಗಳನ್ನು ತೆರವು ಗೊಳಿಸದಿದ್ದರೆ ಜೆಸಿಬಿ ತಂದು ಒಡೆದು ಹಾಕುವುದಾಗಿ ಆಕ್ರೋಶ ವ್ಯಕ್ತಪಡಿಸಿದ್ದರು.
ಮಸೀದಿಯನ್ನು ಹೋಲುವ ಗುಮ್ಮಟದಂತಹ ರಚನೆಗಳನ್ನು ಹೊಂದಿರುವ ಬಸ್ ನಿಲ್ದಾಣವನ್ನು ಕೆಡವುವುದಾಗಿ ಪ್ರತಾಪ್ ಸಿಂಹ ಅವರು ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ವಿವಾದ ಆರಂಭವಾಗಿತ್ತು. ಆದರೆ, ಮೈಸೂರು ಅರಮನೆಯಂತೆ ಕಾಣುವಂತೆ ಮಾಡುವುದೇ ಈ ವಿನ್ಯಾಸದ ಹಿಂದಿನ ಉದ್ದೇಶ ಎಂದು ರಾಮದಾಸ್ ಸ್ಪಷ್ಟಪಡಿಸಿದರು.
ವಿವಾದ ಭುಗಿಲೇಳುತ್ತಿದ್ದಂತೆ ಸ್ಥಳೀಯ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿ ಬಸ್ ನಿಲ್ದಾಣದ ಮೇಲೆ ಪ್ರಧಾನಿ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಮತ್ತು ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಅವರ ಚಿತ್ರಗಳನ್ನು ಒಳಗೊಂಡ ಫ್ಲೆಕ್ಸ್ ಅನ್ನು ಹಾಕಿದರು.
ನೂತನವಾಗಿ ನೇಮಕಗೊಂಡ ಪೊಲೀಸ್ ಕಮಿಷನರ್ ಬಿ.ರಮೇಶ್ ಹಾಗೂ ಡಿಸಿಪಿ ಪ್ರದೀಪ್ ಗುಂಟಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬುಧವಾರ ಬಸ್ ನಿಲ್ದಾಣದ ಸುತ್ತಮುತ್ತ ಭದ್ರತೆ ಹೆಚ್ಚಿಸಿದರು. ಕಾಮಗಾರಿ ಸ್ಥಗಿತಗೊಳಿಸಿದ ಎನ್‌ಎಚ್‌ಎಐ ಅಧಿಕಾರಿಗಳು ಮತ್ತು ಕೆಆರ್‌ಡಿಐಎಲ್ ಅಧಿಕಾರಿಗಳೊಂದಿಗೆ ಪ್ರದೀಪ್ ಗುಂಟಿ ಮಾತಕತೆ ನಡೆಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


