ನಾನು ಮೋದಿ ಭಕ್ತ, ಬಹಿರಂಗವಾಗಿ ಹೇಳಿಕೊಳ್ಳಲು ನನಗೆ ಯಾವುದೇ ಸಂಕೋಚವಿಲ್ಲ: ಅನಂತ್ ನಾಗ್
ಪ್ರಧಾನಿ ನರೇಂದ್ರ ಮೋದಿ ಎಂಟೂವರೆ ವರ್ಷಗಳಲ್ಲಿ ಒಂದು ದಿನವೂ ರಜೆ ತಗೆದುಕೊಳ್ಳದೇ ಕೆಲಸ ಮಾಡುತ್ತಿದ್ದಾರೆ. ಅವರ ಕೆಲಸಗಳಿಗೆ ನಾನು ಮನಸೋತಿದ್ದೇನೆ. ಹಾಗಾಗಿ ನಾನು ಮೋದಿ ಭಕ್ತ ಎಂದು ಹೇಳಿಕೊಳ್ಳಲು ಯಾವುದೇ ಸಂಕೋಚವಿಲ್ಲ’

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಎಂಟೂವರೆ ವರ್ಷಗಳಲ್ಲಿ ಒಂದು ದಿನವೂ ರಜೆ ತಗೆದುಕೊಳ್ಳದೇ ಕೆಲಸ ಮಾಡುತ್ತಿದ್ದಾರೆ. ಅವರ ಕೆಲಸಗಳಿಗೆ ನಾನು ಮನಸೋತಿದ್ದೇನೆ. ಹಾಗಾಗಿ ನಾನು ಮೋದಿ ಭಕ್ತ ಎಂದು ಹೇಳಿಕೊಳ್ಳಲು ಯಾವುದೇ ಸಂಕೋಚವಿಲ್ಲ’ ಎಂದು ನಟ ಅನಂತ್ ನಾಗ್ ಬಹಿರಂಗವಾಗಿ ಘೋಷಿಸಿದ್ದಾರೆ.
ಕರ್ನಾಟಕ ಮಾಧ್ಯಮ ಅಕಾಡೆಮಿ ಬೆಂಗಳೂರು ಇವರ ಆಶ್ರಯದಲ್ಲಿ ‘ರಾಷ್ಟ್ರೀಯ ಪತ್ರಿಕಾ ದಿನಾಚರಣೆ’ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಪ್ರಧಾನಿ ಮೋದಿ ಅವರನ್ನು ಹಾಡಿ ಹೊಗಳಿದ್ದಾರೆ.
ಹದಿನಾಲ್ಕು ವರ್ಷ ಮುಖ್ಯಮಂತ್ರಿಯಾಗಿ, ಎಂಟೂವರೆ ವರ್ಷಗಳಿಂದ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಮಾಡಿರುವ ಕೆಲಸ ಕಾರ್ಯಗಳು ನನಗೆ ಇಷ್ಟ. ಪ್ರತಿನಿತ್ಯ ವೇಳಾಪಟ್ಟಿಯಂತೆ ಅವರು ಬದ್ಧತೆಯಿಂದ ಕೆಲಸ ಮಾಡುತ್ತಾರೆ. ಹೀಗಾಗಿ ಪ್ರಧಾನಿ ಮೋದಿ ಅವರ ಭಕ್ತ ಎಂದು ಹಿರಿಯ ನಟ ಅನಂತ್ ನಾಗ್ ಹೇಳಿದ್ದಾರೆ.
ರಾಷ್ಟ್ರದ ನಿರ್ಮಾಣದಲ್ಲಿ ಮಾಧ್ಯಮಗಳ ಪಾತ್ರ ಎಂಬ ವಿಚಾರ ಸಂಕಿರಣಕ್ಕೆ ಆಹ್ವಾನ ನೀಡಿದಾಗ ನಾನು ಯೋಚಿಸಿದೆ. ಇದು ಮೋದಿ ಸರ್ಕಾರ ಆರಂಭ ಮಾಡಿತೇ ಎಂಬ ಪ್ರಶ್ನೆ ಮೂಡಿತು. ನಂತರ ಈ ಪತ್ರಿಕಾ ದಿನಾಚರಣೆ ಮೊದಲಿನಿಂದಲೇ ಇತ್ತು ಎಂಬುದಾಗಿ ತಿಳಿದುಬಂತು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


