ಸಂಚಾರ ದಟ್ಟಣೆ ಸಮಸ್ಯೆ: ಹೆಬ್ಬಾಳ-ಕೆಂಪಾಪುರ ಜಂಕ್ಷನ್'ಗೆ ವಿಶೇಷ ಆಯುಕ್ತ ಭೇಟಿ, ಪರಿಶೀಲನೆ
ಮಂಗಳವಾರ ಅಧಿಕಾರ ಸ್ವೀಕರಿಸಿದ ವಿಶೇಷ ಆಯುಕ್ತ (ಸಂಚಾರ) ಎಂ.ಎ.ಸಲೀಂ ಅವರು ಬುಧವಾರ ಜನನಿಬಿಡ ಪ್ರದೇಶವಾಗಿರುವ ಹೆಬ್ಬಾಳ ಮೇಲ್ಸೇತುವೆ ಮತ್ತು ಕೆಂಪಾಪುರ ಜಂಕ್ಷನ್‌ಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಬೆಂಗಳೂರು: ಮಂಗಳವಾರ ಅಧಿಕಾರ ಸ್ವೀಕರಿಸಿದ ವಿಶೇಷ ಆಯುಕ್ತ (ಸಂಚಾರ) ಎಂ.ಎ.ಸಲೀಂ ಅವರು ಬುಧವಾರ ಜನನಿಬಿಡ ಪ್ರದೇಶವಾಗಿರುವ ಹೆಬ್ಬಾಳ ಮೇಲ್ಸೇತುವೆ ಮತ್ತು ಕೆಂಪಾಪುರ ಜಂಕ್ಷನ್‌ಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಎಡಿಜಿಪಿ ಸಲೀಂ, ಡಿಸಿಪಿ (ಸಂಚಾರ-ಉತ್ತರ) ಸವಿತಾ ಎಸ್ ಮತ್ತು ಇತರ ಹಿರಿಯ ಅಧಿಕಾರಿಗಳೊಂದಿಗೆ ರಸ್ತೆಯಲ್ಲಿ ಸಂಚಾರ ದಟ್ಟಣೆಯನ್ನು ವೀಕ್ಷಿಸಿದರು. ಈ ವೇಳೆ ವಾಹನಗಳ ಸಾಂದ್ರತೆ ಮತ್ತು ಸಂಚಾರ ದಟ್ಟಣೆಯ ಕುರಿತು ಅಧಿಕಾರಿಗಳಿಂದ ವಿವರಗಳನ್ನು ಪಡೆದುಕೊಂಡರು.
ಜಂಕ್ಷನ್‌ಗಳಲ್ಲಿ ಕಾಯುವ ಸಮಯವನ್ನು ಕಡಿಮೆ ಮಾಡುವ ಅಗತ್ಯವಿದೆ ಎಂದು ಹೇಳಿದ ವಿಶೇಷ ಆಯುಕ್ತರು ಸಂಚಾರ ದಟ್ಟಣೆ ಕಡಿಮೆ ಮಾಡಲು ಪರಿಹಾರಗಳನ್ನು ಸೂಚಿಸುವಂತೆ ರಸ್ತೆ ಬಳಕೆದಾರರಿಗೆ ಮನವಿ ಮಾಡಿದರು. addlcptrafficbcp@gmail.comಗೆ ಪರಿಹಾರಗಳ ಕುರಿತು ತಿಳಿಸುವಂತೆ ಮನವಿ ಮಾಡಿಕೊಂಡರು.
ವಿಶೇಷ ಆಯುಕ್ತರು ಇನ್ನೂ ಒಂದೆರಡು ದಿನ ಜನನಿಬಿಡ ರಸ್ತೆಗಳು ಮತ್ತು ಜಂಕ್ಷನ್‌ಗಳಿಗೆ ಭೇಟಿ ನೀಡಲಿದ್ದು, ಸಂಚಾರ ದಟ್ಟಣೆಯನ್ನು ಪರಿಶೀಲನೆ ನಡೆಸಲಿದ್ದಾರೆಂದು ತಿಳಿದುಬಂದಿದೆ.
‘ಸಿಲಿಕಾನ್ ಸಿಟಿ’ಯಲ್ಲಿ ವಾಹನಗಳ ಸುಗಮ ಸಂಚಾರ ಹಾಗೂ ಸಂಚಾರ ನಿಯಮಗಳ ಜಾರಿಗೆ ಹೊಸ ಪ್ರಯೋಗಕ್ಕೆ ಮುಂದಾಗಿದ್ದ ಸರ್ಕಾರ, ವಿಶೇಷ ಕಮಿಷನರ್ ಹುದ್ದೆ ಸೃಷ್ಟಿಸಿತ್ತು. ಇದರಂತೆ ಹುದ್ದೆಗೆ ಎಡಿಜಿಪಿ ದರ್ಜೆಯ ಎಂ. ಅಬ್ದುಲ್ ಸಲೀಂ ಅವರನ್ನು ನೇಮಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


