ವೋಟರ್ ಐಡಿ ಅಕ್ರಮ: ಚಿಲುಮೆ ಸಂಸ್ಥೆ ಮೇಲೆ ಪೊಲೀಸರ ದಾಳಿ, ನಾಲ್ವರು ಸಿಬ್ಬಂದಿ ಬಂಧನ!
ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿನ ಅಕ್ರಮ ಸಂಬಂಧ ಮಲ್ಲೇಶ್ವರಂ ಚಿಲುಮೆ ಸಂಸ್ಥೆಯ ಮೇಲೆ ಹಲಸೂರು ಗೇಟ್ ಪೊಲೀಸರು ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರು: ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿನ ಅಕ್ರಮ ಸಂಬಂಧ ಮಲ್ಲೇಶ್ವರಂ ಚಿಲುಮೆ ಸಂಸ್ಥೆಯ ಮೇಲೆ ಹಲಸೂರು ಗೇಟ್ ಪೊಲೀಸರು ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಈ ಸಂಬಂಧ ಚಿಲುಮೆ ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಗೆ ಸೇರಿದ ರೇಣುಕಾಪ್ರಸಾದ್, ಧರ್ಮೇಶ್, ಸುಧಾಕರ್ ಮತ್ತು ರಕ್ಷಿತ್ ಎನ್ನುವರನ್ನು ವಶಕ್ಕೆ ಪಡೆದುಕೊಂಡಿದ್ದು ತೀವ್ರ ವಿಚಾರಣೆ ನಡೆಸಿದ್ದಾರೆ. ಚಿಲುಮೆ ಸಂಸ್ಥೆಗೆ ಐಡಿ ಕಾರ್ಡ್ ನೀಡಿದ್ದ ಮಹದೇವಪುರ ವಲಯದ ಆರ್ ಒ ಚಂದ್ರಶೇಖರ್ ರನ್ನು ಸಸ್ಪೆಂಡ್ ಮಾಡಲಾಗಿದೆ.
ಬೆಂಗಳೂರಿನ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಕ್ರಮ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಈ ಬಗ್ಗೆ ವರದಿ ನೀಡುವಂತೆ ಬಿಬಿಎಂಪಿಗೆ ಚುನಾವಣಾ ಆಯೋಗ ಹೇಳಿತ್ತು. ಅದರಂತೆ ಇದೀಗ ಬಿಬಿಎಂಪಿ ಚುನಾವಣಾ ಆಯೋಗಕ್ಕೆ ವರದಿ ನೀಡಿದೆ. ಅದರಲ್ಲಿ ಚಿಲುಮೆ ಸಂಸ್ಥೆಗೆ ವೋಟರ್ ಐಡಿ, ಆಧಾರ್ ಲಿಂಕ್ ಮಾಡುವ ಹೊಣೆ ನೀಡಲಾಗಿತ್ತು. ಉಚಿತವಾಗಿ ಜೋಡಣೆ ಮಾಡುವುದಾಗಿ ಚಿಲುಮೆ ಅರ್ಜಿ ಸಲ್ಲಿಸಿತ್ತು. ಈ ಹಿನ್ನೆಲೆಯಲ್ಲಿ ಈ ಜವಾಬ್ದಾರಿಯನ್ನು ನೀಡಲಾಗಿತ್ತು ಎಂದು ತಿಳಿದುಬಂದಿದೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಪ್ರತಿಯೊಂದು ಮನೆಗಳಿಗೆ ಭೇಟಿ ನೀಡಿ ಅನ್ ಲೈನ್ ಅಥವಾ VHA(Voter Helpline App) ಮುಖೇನಾ ಅರ್ಜಿಗಳನ್ನು ಸಲ್ಲಿಸಲು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯವನ್ನು ನಿರ್ವಹಿಸಲು ಚಿಲುಮೆ ಸಂಸ್ಥೆಗೆ ಅನುಮತಿ ನೀಡಲಾಗಿತ್ತು. ಆದರೆ, ಸದರಿ ಸಂಸ್ಥೆಯು ಪತ್ರದಲ್ಲಿ ವಿಧಿಸಲಾಗಿದ್ದ ಷರತ್ತುಗಳನ್ನು ಉಲ್ಲಂಘಿಸಿರುವ ದೂರಿನ ಹಿನ್ನೆಲೆಯಲ್ಲಿ ಬಿಬಿಎಂಪಿ ಅನುಮತಿಯನ್ನು ರದ್ದುಪಡಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


