ಬಿಬಿಎಂಪಿ ಎಂಜಿನಿಯರ್‌ಗಳು ಯೋಜನೆಗಳನ್ನು ಸರಿಯಾಗಿ ನಿರ್ವಹಿಸಬೇಕು: ತುಷಾರ್ ಗಿರಿನಾಥ್
ಜನರಿಗೆ ಅನುಕೂಲವಾಗುವಂತೆ ರಸ್ತೆಗಳ ಸ್ಥಿತಿಯನ್ನು ಸುಧಾರಿಸಲು, ಕಾಮಗಾರಿಯನ್ನು ಗುಣಮಟ್ಟದಿಂದ ನಡೆಸುವಂತೆ ಎಂಜಿನಿಯರ್‌ಗಳಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಶನಿವಾರ ಸೂಚನೆ ನೀಡಿದರು.

ಬೆಂಗಳೂರು: ಜನರಿಗೆ ಅನುಕೂಲವಾಗುವಂತೆ ರಸ್ತೆಗಳ ಸ್ಥಿತಿಯನ್ನು ಸುಧಾರಿಸಲು, ಕಾಮಗಾರಿಯನ್ನು ಗುಣಮಟ್ಟದಿಂದ ನಡೆಸುವಂತೆ ಎಂಜಿನಿಯರ್‌ಗಳಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಶನಿವಾರ ಸೂಚನೆ ನೀಡಿದರು.
ರಸ್ತೆ ಗುಂಡಿಯಿಂದಾಗಿ ನಗರದಲ್ಲಿ ಅವಾಂತರುಗಳು ಸಂಭವಿಸಿದ ಹಿನ್ನೆಲೆಯಲ್ಲಿ ‘ಬಿಬಿಎಂಪಿ ನಗರ ಮೂಲಸೌಕರ್ಯ ಯೋಜನೆಗಳ ನಿರ್ಮಾಣ, ನಿರ್ವಹಣೆ ಮತ್ತು ಯೋಜನಾ ನಿರ್ವಹಣೆ' ಕುರಿತು ಎಂಜಿನಿಯರ್ ಗಳಿಗೆ ಬಿಬಿಎಂಪಿ ಶನಿವಾರ ಟೌನ್ ಹಾಲ್ ನಲ್ಲಿ ಕಾರ್ಯಾಗಾರ ನಡೆಸಿದು. ಕಾರ್ಯಾಗಾರದಲ್ಲಿ ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್, ಸಂಚಾರ ವಿಭಾಗದ ವಿಶೇಷ ಆಯುಕ್ತರಾದ ಎಂಎ. ಸಲೀಂ ಅವರು ಭಾಗವಹಿಸಿದ್ದರು.
ಕಾರ್ಯಾಗಾರದಲ್ಲಿ ಮಾತನಾಡಿದ ತುಷಾರ್ ಗಿರಿನಾಥ್ ಅವರು, "ನಾವು ದಿನನಿತ್ಯದ ಆಧಾರದ ಮೇಲೆ ಕೆಲಸ ಮಾಡುವ ವಿಧಾನವನ್ನು ಸುಧಾರಿಸಬೇಕು, ಯೋಜನೆಗಳನ್ನು ಸರಿಯಾಗಿ ನಿರ್ವಹಿಸುವ ಮೂಲಕ ಸರ್ಕಾರಕ್ಕೆ ಗೌರವವನ್ನು ತರುವಂತೆ ಮಾಡಬೇಕೆಂದು ಎಂಜಿನಿಯರ್‌ಗಳಿಗೆ ಹೇಳಿದರು.
ಬಿಬಿಎಂಪಿ ಮತ್ತು ಸರಕಾರ ಕೈಗೊಳ್ಳುವ ಯೋಜನೆಗಳಿಗೆ ಎಂಜಿನಿಯರ್‌ಗಳು ಕೇಂದ್ರಬಿಂದುವಾಗಿದ್ದಾರೆ. ಹೀಗಾಗಿ ನಿರ್ಮಾಣ ಮತ್ತು ನಿರ್ವಹಣೆಯನ್ನು ಗಂಭೀರವಾಗಿ ಪರಿಗಣಿಸಿ ಅನುಷ್ಠಾನಗೊಳಿಸಬೇಕು ಎಂದು ತಿಳಿಸಿದರು.
ಸಲೀಂ ಅವರು ಮಾತನಾಡಿ, ರಸ್ತೆಗಳನ್ನು ಸರಿಯಾಗಿ ನಿರ್ವಹಣೆ ಮಾಡಿದರೆ ಸಂಚಾರ ದಟ್ಟಣೆ ಸಮಸ್ಯೆಯಾಗದು. ನಗರದಲ್ಲಿ ಬಿಬಿಎಂಪಿ, ಬಿಡಬ್ಲ್ಯುಎಸ್‌ಎಸ್‌ಬಿ ಮತ್ತಿತರ ಸಂಸ್ಥೆಗಳ ಎಂಜಿನಿಯರ್‌ಗಳು ರಸ್ತೆಗಳನ್ನು ಸರಿಯಾಗಿ ನಿರ್ವಹಣೆ ಮಾಡಿದರೆ ಟ್ರಾಫಿಕ್ ಸಮಸ್ಯೆ ಉಂಟಾಗುವುದಿಲ್ಲ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


