ರಾಜ್ಯ

ಮತದಾರರ ಮಾಹಿತಿ ಕಳ್ಳತನ ಆರೋಪದ ಬಗ್ಗೆ ತನಿಖೆಗೆ ಆದೇಶ: ಮುಖ್ಯ ಚುನಾವಣಾ ಅಧಿಕಾರಿ

ಮತದಾರರ ಮಾಹಿತಿ ಕಳ್ಳತನ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆಗೆ ಆದೇಶಿಸಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರು ಹೇಳಿದ್ದಾರೆ.

ಮತದಾರರ ಮಾಹಿತಿ ಕಳ್ಳತನ ಆರೋಪದ ಬಗ್ಗೆ ತನಿಖೆಗೆ ಆದೇಶ: ಮುಖ್ಯ ಚುನಾವಣಾ ಅಧಿಕಾರಿ
ಮತದಾರರ ದತ್ತಾಂಶವನ್ನು ತಿರುಚಿರುವ ಆರೋಪದ ಬಗ್ಗೆ ನ್ಯಾಯಾಂಗ ತನಿಖೆಗೆ ಕೋರಿ ಕಾಂಗ್ರೆಸ್ ನಾಯಕರು ಶನಿವಾರ ಬೆಂಗಳೂರಿನಲ್ಲಿ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರನ್ನು ಭೇಟಿ ಮಾಡಿದರು.
Published On :

ಬೆಂಗಳೂರು: ಮತದಾರರ ಮಾಹಿತಿ ಕಳ್ಳತನ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆಗೆ ಆದೇಶಿಸಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರು ಹೇಳಿದ್ದಾರೆ.

"ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಕಮಿಷನರ್ ಅವರಿಗೆ ಈ ಬಗ್ಗೆ ಕೆಲ ಮಾಹಿತಿ ಇದೆ. ಮಾಹಿತಿ ಕಳ್ಳತನದ ಬಗ್ಗೆ ನಮಗೆ ಆತಂಕವಿದೆ ಮತ್ತು ಅದನ್ನು ವಿಚಾರಣೆಗೆ ಒಳಪಡಿಸಬೇಕಾಗಿದೆ. ಅಂತಿಮವಾಗಿ, ಪೊಲೀಸ್ ತನಿಖೆ ಮತ್ತು ನಮ್ಮ ವಿಭಾಗೀಯ ಆಯುಕ್ತರ ವಿಚಾರಣೆ ನಂತರ ಸತ್ಯಾಂಶ ಹೊರಬರಲಿದೆ" ಎಂದು ಮೀನಾ ಅವರು ಪಿಟಿಐಗೆ ತಿಳಿಸಿದ್ದಾರೆ.

ಚಿಲುಮೆ ಶೈಕ್ಷಣಿಕ ಸಾಂಸ್ಕೃತಿಕ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆ('ಚಿಲುಮೆ ಟ್ರಸ್ಟ್') ಬಿಬಿಎಂಪಿಯ ಬೂತ್ ಮಟ್ಟದ ಅಧಿಕಾರಿಗಳ(ಬಿಎಲ್‌ಒ) ಸೋಗು ಹಾಕಿ ನಕಲಿ ಗುರುತಿನ ಚೀಟಿ ನೀಡಿ, ಅನೇಕ ಖಾಸಗಿ ವ್ಯಕ್ತಿಗಳನ್ನು ನೇಮಿಸಿಕೊಂಡಿದೆ ಎಂದು ಆರೋಪಿಸಿ ಕರ್ನಾಟಕ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಮತದಾರರಲ್ಲಿ ಜಾಗೃತಿ ಮೂಡಿಸಲು ಬೆಂಗಳೂರು ನಾಗರಿಕ ಸಂಸ್ಥೆ ನಿಯೋಜಿಸಿದ ಖಾಸಗಿ ಟ್ರಸ್ಟ್ ಮತದಾರರ ಹೆಸರು, ಮಾತೃಭಾಷೆ, ಲಿಂಗ, ಧರ್ಮ, ಜಾತಿ, ಮತದಾರರ ಗುರುತಿನ ಸಂಖ್ಯೆ ಮತ್ತು ಆಧಾರ್ ಸಂಖ್ಯೆ ಮುಂತಾದ ವಿವರಗಳನ್ನು ಸಂಗ್ರಹಿಸಿದೆ ಎಂದು ವಿರೋಧ ಪಕ್ಷ ಆರೋಪಿಸಿದೆ.

ಮತದಾರರ ಮಾಹಿತಿ ಕಳ್ಳತನಕ್ಕೆ ಸಂಬಂಧಿಸಿದಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ನೀಡಿರುವ ದೂರಿನ ಬಗ್ಗೆ ಪ್ರತಿಕ್ರಿಯಿಸಲು ಮೀನಾ ನಿರಾಕರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.