ಮಂಗಳೂರು ಆಟೋ ಸ್ಫೋಟ: ಉಗ್ರ ಪ್ರಕರಣದಲ್ಲಿ ಈ ಹಿಂದೆಯೂ ಬಂಧನಕ್ಕೊಳಗಾಗಿದ್ದ ಪ್ರಯಾಣಿಕ ಶಾರೀಕ್
ಮಂಗಳೂರಿನಲ್ಲಿ ಆಟೋ ಸ್ಫೋಟಗೊಂಡಾಗ ಅದರಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯನ್ನು ಮೊಹಮ್ಮದ್ ಶಾರೀಕ್ (24) ಎಂದು ಗುರುತಿಸಲಾಗಿದ್ದು, ಈ ಹಿಂದೆಯೂ ಆತ ಭಯೋತ್ಪಾದನೆ ಪ್ರಕರಣವೊಂದರಲ್ಲಿ ಬಂಧನಕ್ಕೊಳಗಾಗಿದ್ದ ಎಂದು ತಿಳಿದುಬಂದಿದೆ.

ಮಂಗಳೂರು: ಮಂಗಳೂರಿನಲ್ಲಿ ಆಟೋ ಸ್ಫೋಟಗೊಂಡಾಗ ಅದರಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯನ್ನು ಮೊಹಮ್ಮದ್ ಶಾರೀಕ್ (24) ಎಂದು ಗುರುತಿಸಲಾಗಿದ್ದು, ಈ ಹಿಂದೆಯೂ ಆತ ಭಯೋತ್ಪಾದನೆ ಪ್ರಕರಣವೊಂದರಲ್ಲಿ ಬಂಧನಕ್ಕೊಳಗಾಗಿದ್ದ ಎಂದು ತಿಳಿದುಬಂದಿದೆ.
ಗೋಡೆಯ ಮೇಲೆ ಭಯೋತ್ಪಾದಕ ಬರಹ ಬರೆದಿದ್ದ ಪ್ರಕರಣದಲ್ಲಿ ಶರೀಕ್ ನ್ನು 2020 ರ ನವೆಂಬರ್ ನಲ್ಲಿ ಬಂಧಿಸಲಾಗಿತ್ತು. ಆತ ಇತ್ತೀಚೆಗಷ್ಟೇ ಜಾಮೀನು ಪಡೆದು ಹೊರಬಂದಿದ್ದ.
ತೀರ್ಥಹಳ್ಳಿಯವನಾದ ಶಾರೀಕ್ ಪ್ರೇಮ್ ರಾಜ್ ಎಂಬ ಹೆಸರಿನಲ್ಲಿ ತನಗೆ ನಕಲಿ ಗುರುತಿನ ಚೀಟಿ ಮಾಡಿಸಿಕೊಂಡು ಆಟೋದಲ್ಲಿ ಕುಕ್ಕರ್ ಐಇಡಿಯೊಂದಿಗೆ ತೆರಳುತ್ತಿದ್ದ. ಈ ವೇಳೆ ಸ್ಫೋಟ ಸಂಭವಿಸಿದ್ದು, ಆಟೋ ಚಾಲಕ ಪುರುಷೋತ್ತಮ್ ಗೂ ತೀವ್ರ ಗಾಯಗಳಾಗಿದೆ.
ಮಂಗಳೂರಿನಲ್ಲಿ ಕಂಕನಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಡಿಜಿಪಿ ಹಾಗೂ ಐಜಿಪಿ ಪ್ರವೀಣ್ ಸೂದ್ ಈ ಬಗ್ಗೆ ಮಾಹಿತಿ ನೀಡಿದ್ದು, ಇದು ಆಕಸ್ಮಿಕವಲ್ಲ, ಭಯೋತ್ಪಾದನೆಯ ಕೃತ್ಯ ಎಂದು ಹೇಳಿದ್ದರು.
ಪ್ರಾಥಮಿಕ ವರದಿಗಳ ಪ್ರಕಾರ ಆರೋಪಿ ಶಾರೀಕ್ ಐಇಡಿಯನ್ನು ನಿರ್ದಿಷ್ಟ ಗುರಿಯೊಂದಿಗೆ ಅಳವಡಿಸಲು ಉದ್ದೇಶಿಸಿದ್ದ. ಆದರೆ ಆಟೋ ರಿಕ್ಷಾದಲ್ಲೇ ಸ್ಫೋಟಗೊಂಡಿದೆ. ವಿಧಿವಿಜ್ಞಾನ ತಂಡ ತನಿಖೆ ಪ್ರಾರಂಭಿಸಿದ್ದು, ಪ್ರೆಷರ್ ಕುಕ್ಕರ್ ನ ಒಳಗೆ ಸರ್ಕ್ಯೂಟ್ ಮತ್ತು ಟೈಮರ್ ಪತ್ತೆಯಾಗಿತ್ತು ಎಂದು ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


