89 ವರ್ಷಗಳ ನಂತರ ವಾಣಿವಿಲಾಸ ಸಾಗರ ಜಲಾಶಯ ಭರ್ತಿ, ಸಿಎಂ ಬೊಮ್ಮಾಯಿ ಬಾಗಿನ
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ ಜಲಾಶಯ ಸುಮಾರು 89 ವರ್ಷಗಳ ನಂತರ ಭರ್ತಿಯಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಬಾಗಿನ ಅರ್ಪಿಸಿದರು.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ ಜಲಾಶಯ ಸುಮಾರು 89 ವರ್ಷಗಳ ನಂತರ ಭರ್ತಿಯಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಬಾಗಿನ ಅರ್ಪಿಸಿದರು.
ಹೂಗಳಿಂದ ಅಲಂಕಾರಗೊಂಡಿದ್ದ ವಾಣಿವಿಲಾಸ ಜಲಾಶಯಕ್ಕೆ ಸಿಎಂ ಬೊಮ್ಮಾಯಿ ಅವರು ಬಾಗಿನ ಅರ್ಪಿಸಿ, ಪುಷ್ಪಾರ್ಚನೆ ಮಾಡಿದರು. ಸಿಎಂ ಬೊಮ್ಮಾಯಿಗೆ ಮಾಜಿ ಸಿಎಂ ಯಡಿಯೂರಪ್ಪ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ಸಾಥ್ ನೀಡಿದರು.
ಬಳಿಕ ಹಿರಿಯೂರಿನಲ್ಲಿ ನಡೆದ ಜನಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ವಾಣಿವಿಲಾಸ ಜಲಾಶಯಕ್ಕೆ ಕಾಯಕಲ್ಪ ನೀಡುತ್ತೇವೆ. ಅದಕ್ಕಾಗಿ 738 ಕೋಟಿ ರೂ. ಅನುದಾನ ಮೀಸಲಿಟ್ಟಿದ್ದೇವೆ. ಜಲಾಶಯದ ಕಾಲುವೆಗಳ ಅಭಿವೃದ್ಧಿ ಮಾಡುತ್ತೇನೆ ಎಂದು ಹೇಳಿದರು.
2007-08ರಲ್ಲಿ ನೀರಾವರಿ ಯೋಜನೆಗಾಗಿ ಹೋರಾಟ ನಡೆದಿತ್ತು. ಚಿತ್ರದುರ್ಗದಲ್ಲಿ 580 ದಿನ ರೈತರು ನಿರಂತರ ಧರಣಿ ನಡೆಸಿದ್ದರು. ಆದರೆ ಹಿಂದಿನ ಸರ್ಕಾರಗಳು ನಿರ್ಲಕ್ಷ್ಯ ತೋರಿದ್ದವು. ನೀರಾವರಿ ಸಚಿವನಾಗಿದ್ದಾಗ ಧರಣಿ ಸ್ಥಳಕ್ಕೆ ಭೇಟಿ ನೀಡಿದ್ದೆ. ಆಗಿನ ಸಿಎಂ ಆಗಿದ್ದ ಬಿ.ಎಸ್ ಯಡಿಯೂರಪ್ಪ ಜೊತೆ ಚರ್ಚಿಸಿ ಯೋಜನೆ ಜಾರಿಗೆ ಕ್ರಮ ಕೈಗೊಳ್ಳಲಾಗಿತ್ತು. ಹಿರಿಯೂರಿಗೆ ಬಂದು ಹೋದ 15 ದಿನದಲ್ಲೇ ಆದೇಶ ಹೊರಡಿಸಿದ್ದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


