ಬೆಳ್ತಂಗಡಿ: ವಿಷಕಾರಿ ಅಣಬೆ ಖಾದ್ಯ ಸೇವಿಸಿ ತಂದೆ-ಮಗ ಸಾವು
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಪುದುವೆಟ್ಟು ಗ್ರಾಮದಲ್ಲಿ ಮಂಗಳವಾರ ವಿಷಪೂರಿತ ಅಣಬೆ ಸೇವಿಸಿದ ಪರಿಣಾಮದಿಂದ ಇಬ್ಬರು ಸಾವನ್ನಪ್ಪಿದ್ದಾರೆ.

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಪುದುವೆಟ್ಟು ಗ್ರಾಮದಲ್ಲಿ ಮಂಗಳವಾರ ವಿಷಪೂರಿತ ಅಣಬೆ ಸೇವಿಸಿದ ಪರಿಣಾಮದಿಂದ ಇಬ್ಬರು ಸಾವನ್ನಪ್ಪಿದ್ದಾರೆ.
ಪುದುವೆಟ್ಟು ಗ್ರಾಮದ ಮಿಯಾರುಪಾದೆ ಕೇರಿಮಾರು ನಿವಾಸಿಗಳಾದ ಗುರುವ (75) ಮತ್ತು ಆತನ ಮಗ ಓಡಿ (45) ಸಾವನ್ನಪ್ಪಿದವರು.
ತೀರಾ ಬಡವನಾದ ಗುರುವ ತನ್ನ ಇಬ್ಬರು ಮಕ್ಕಳೊಂದಿಗೆ ಮನೆಯಲ್ಲಿ ವಾಸ್ತವ್ಯ ಇದ್ದರು. ಮಂಗಳವಾರ ಮುಂಜಾನೆ ಗುರುವ ಮತ್ತು ಮಗ ಓಡಿಯ ಮೃತ ದೇಹ ಮನೆಯ ಅಂಗಳದಲ್ಲಿದ್ದವು. ಸೋಮವಾರ ರಾತ್ರಿ ಕಾಡಿನ ವಿಷಪೂರಿತ ಅಣಬೆಯನ್ನು ಅಡುಗೆ ಮಾಡಿ ಸೇವಿಸಿರುವುದರಿಂದ ಅವರು ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಮತ್ತೊಬ್ಬ ಮಗ ಮನೆಯಲ್ಲಿ ಇಲ್ಲವಾದುದರಿಂದ ಆತ ಸಾವಿನಿಂದ ಪಾರಾಗಿದ್ದಾನೆ.
ರಾತ್ರಿ ಅಪ್ಪ-ಮಗ ಹೊರತುಪಡಿಸಿ ಮನೆಯಲ್ಲಿ ಯಾರು ಇಲ್ಲದ ಕಾರಣ ಆಸ್ಪತ್ರೆಗೂ ಹೋಗಲು ಆಗಿಲ್ಲ, ಹೀಗಾಗಿ ನರಳಾಡಿಯೇ ಮೃತಪಟ್ಟಿದ್ದಾರೆ. ಗುರುವ ಅವರ ಮತ್ತೊಬ್ಬ ಮಗ ಕರ್ತ ಕುಡಿತದ ಚಟ ಅಂಟಿಸಿಕೊಂಡಿದ್ದು, ಇಂದು ಮುಂಜಾನೆ ಮನೆಗೆ ಬಂದಿದ್ದಾನೆ. ಅಷ್ಟರಲ್ಲಿ ಅವರಿಬ್ಬರೂ ಮೃತಪಟ್ಟಿದ್ದರು. ಧರ್ಮಸ್ಥಳದ ಠಾಣೆ ಪೊಲೀಸರು ಸ್ಥಳಕ್ಜೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


