ವೋಟರ್ ಐಡಿ ಹಗರಣ: ನಾಪತ್ತೆಯಾಗಿದ್ದ ಚಿಲುಮೆ ಆಡಳಿತಾಧಿಕಾರಿ ಲೋಕೇಶ್ ಬಂಧನ
ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ವೋಟರ್ ಐಡಿ ಹಗರಣ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ಚಿಲುಮೆ ಸಂಸ್ಥೆಯ ಆಡಳಿತಾಧಿಕಾರಿ ಕೆ.ಎಂ.ಲೋಕೇಶ್ ಅವರನ್ನು ಮಂಗಳವಾರ ಹಲಸೂರು...

ಬೆಂಗಳೂರು: ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ವೋಟರ್ ಐಡಿ ಹಗರಣ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ಚಿಲುಮೆ ಸಂಸ್ಥೆಯ ಆಡಳಿತಾಧಿಕಾರಿ ಕೆ.ಎಂ.ಲೋಕೇಶ್ ಅವರನ್ನು ಮಂಗಳವಾರ ಹಲಸೂರು ಗೇಟ್ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ಲೋಕೇಶ್ ನನ್ನು ಇಂದು ಸಂಜೆ ಹಲಸೂರು ಗೇಟ್ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ಪಡೆಯಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸಗೌಡ ಅವರು ತಿಳಿಸಿದ್ದಾರೆ.
ಕಾಡುಗೋಡಿ ಮತ್ತು ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎರಡು ಎಫ್ಐಆರ್ ನಲ್ಲಿ ಲೋಕೇಶ್ ಹೆಸರು ಉಲ್ಲೇಖವಾಗಿತ್ತು. ಆತನನ್ನು ಬಂಧಿಸಿ ಒಂದು ರೌಂಡ್ ವಿಚಾರಣೆ ನಡೆಸಲಾಗಿದೆ. ಹೆಚ್ಚಿನ ವಿಚಾರಣೆ ಮಾಡಲಾಗುತ್ತಿದೆ ಎಂದು ಶ್ರೀನಿವಾಸಗೌಡ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಕ್ರಮ ನಡೆದಿದ್ದು ಎಂದು ದೂರು ದಾಖಲಾಗುತ್ತಿದ್ದಂತೆಯೇ ಲೋಕೇಶ್ ತಲೆಮರೆಸಿಕೊಂಡಿದ್ದ. ಆತನ ಬಂಧನಕ್ಕಾಗಿ ವಿಶೇಷ ತಂಡ ರಚಿಸಲಾಗಿತ್ತು. ಇದೀಗ ಪ್ರಕರಣದ ಪ್ರಮುಖ ಆರೋಪಿ, ಚಿಲುಮೆ ಮುಖ್ಯಸ್ಥ ರವಿಕುಮಾರ್ ಹಾಗೂ ಅದರ ಆಡಳಿತಾಧಿಕಾರಿ ಲೋಕೇಶ್ ನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


