ಮಂಗಳೂರು ಸ್ಫೋಟ ಪ್ರಕರಣ: ಆಟೋ ಚಾಲಕನ ಆರೋಗ್ಯದಲ್ಲಿ ಚೇತರಿಕೆ, ಜಿಲ್ಲಾಧಿಕಾರಿಗಳಿಂದ ಪರಿಹಾರ ಭರವಸೆ
ಇತ್ತೀಚೆಗೆ ನಡೆದ ಮಂಗಳೂರು ಸ್ಫೋಟ ಪ್ರಕರಣದಲ್ಲಿ ಗಾಯಗೊಂಡಿದ್ದ ಆಟೋರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಚೇತರಿಸಿಕೊಳ್ಳುತ್ತಿದ್ದಾರೆಂದು ತಿಳಿದುಬಂದಿದ್ದು, ಸಂತ್ರಸ್ತನಿಗೆ ಜಿಲ್ಲಾಧಿಕಾರಿಗಳು ಪರಿಹಾರ ಭರವಸೆ ನೀಡಿದ್ದಾರೆ.

ಮಂಗಳೂರು: ಇತ್ತೀಚೆಗೆ ನಡೆದ ಮಂಗಳೂರು ಸ್ಫೋಟ ಪ್ರಕರಣದಲ್ಲಿ ಗಾಯಗೊಂಡಿದ್ದ ಆಟೋರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಚೇತರಿಸಿಕೊಳ್ಳುತ್ತಿದ್ದಾರೆಂದು ತಿಳಿದುಬಂದಿದ್ದು, ಸಂತ್ರಸ್ತನಿಗೆ ಜಿಲ್ಲಾಧಿಕಾರಿಗಳು ಪರಿಹಾರ ಭರವಸೆ ನೀಡಿದ್ದಾರೆ.
ಮಂಗಳೂರಿನ ನಾಗೂರಿನಲ್ಲಿ ಆಟೋರಿಕ್ಷಾದಲ್ಲಿ ಸಂಭವಿಸಿದ ಕಡಿಮೆ ತೀವ್ರತೆಯ ಸ್ಫೋಟದಲ್ಲಿ ಪೂಜಾರಿಯವರಿಗೆ ಸುಮಾರು ಶೇ.20 ಸುಟ್ಟ ಗಾಯಗಳಾಗಿವೆ. ಮನೆಗೆ ಪೂಜಾರಿಯವರೇ ಆದಾಯದ ಮೂಲವಾಗಿದ್ದರು. 2023ರ ಮೇ ತಿಂಗಿನಲ್ಲಿ ಪೂಜಾರಿಯವರ ಪುತ್ರಿಯ ವಿವಾಹ ನಿಶ್ಚಯಿಸಲಾಗಿದ್ದು, ಮದುವೆಗೆ ಅಗತ್ಯವಿರುವ ಹಣವನ್ನು ಪೂಜಾರಿಯವರು ಹೊಂದಿಸುತ್ತಿದ್ದರು. ಈ ನಡುವೆ ಪೂಜಾರಿಯವರು ಹೃದಯ ಸಂಬಂಧಿ ಕಾಯಿಲೆಗೆ ಬೈಪಾಸ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು ಎಂದು ಅವರ ಕುಟುಂಬ ತಿಳಿಸಿದೆ.
ಕಳೆದ 15 ವರ್ಷಗಳಿಂದ ಆಟೋ ಓಡಿಸುತ್ತಿದ್ದಾರೆ. ಘಟನೆಯಿಂದ ಕುಟುಂಬ ಆಘಾತಕ್ಕೊಳಗಾಗಿದೆ. ಅವರ ಪತ್ನಿ ಮತ್ತು ಇಬ್ಬರು ಹೆಣ್ಣು ಮಕ್ಕಳು ಇಡೀ ದಿನ ಆಸ್ಪತ್ರೆಯಲ್ಲಿ ಕಣ್ಣೀರಿಡುತ್ತಿದ್ದಾರೆ. ಇದು ಕುಟುಂಬಕ್ಕೆ ಅತ್ಯಂತ ಕಷ್ಟಕರ ಸಮಯವಾಗಿದೆ ಎಂದು ಪೂಜಾರಿ ಸಂಬಂಧಿಕರೊಬ್ಬರು ಹೇಳಿದರು.
ಪೂಜಾರಿಯವರು ಶೀಘ್ರವೇ ಚೇತರಿಸಿಕೊಂಡರೂ ಆಟೊ ರಿಕ್ಷಾ ಓಡಿಸಲು ಸಾಧ್ಯವಿಲ್ಲ, ಏಕೆಂದರೆ ಆಟೋವನ್ನು ಪೊಲೀಸರು ತನಿಖೆಗೊಳಪಡಿಸಿದ್ದಾರೆ.
ಈ ನಡುವೆ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರು ಆಟೊರಿಕ್ಷಾ ನೀಡುವುದಾಗಿ ಹಾಗೂ ಪೂಜಾರಿ ಅವರ ಚಿಕಿತ್ಸಾ ವೆಚ್ಚವನ್ನು ಭರಿಸುವುದಾಗಿ ಭರವಸೆ ಹೇಳಿದ್ದಾರೆ.
ಏತನ್ಮಧ್ಯೆ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಎಂಆರ್ ಅವರು ಪೂಜಾರಿ ಅವರ ಕುಟುಂಬಕ್ಕೆ ಎಲ್ಲಾ ರೀತಿಯ ಬೆಂಬಲವನ್ನು ನೀಡುವುದಾಗಿ ತಿಳಿಸಿದ್ದಾರೆ.ಪೂಜಾರಿ ಅವರಿಗೆ ಪರಿಹಾರ ಬಿಡುಗಡೆ ಮಾಡುವಂತೆ ಸರಕಾರಕ್ಕೆ ಶಿಫಾರಸು ಮಾಡುವುದಾಗಿ ಹೇಳಿದ್ದಾರೆ.
ಭಯೋತ್ಪಾದನೆ ಪ್ರಕರಣಗಳಲ್ಲಿ ಸಂತ್ರಸ್ತರಿಗೆ ಪರಿಹಾರ ನೀಡಲು ಅವಕಾಶವಿರುವುದರಿಂದ ಎಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಅಲೋಕ್ ಕುಮಾರ್ ಅವರು ಈ ಹಿಂದೆ ಪೂಜಾರಿಗೆ ಪರಿಹಾರದ ಭರವಸೆ ನೀಡಿದ್ದರು.
ಘಟನೆ ಕುರಿತು ಸ್ಥಳೀಯರು ಮಾತನಾಡಿ, ಸ್ಫೋಟ ಸಂಭವಿಸಿದ ಸ್ಥಳಕ್ಕೆ ಸಮೀಪವಿರುವ ಗರೋಡಿಯಲ್ಲಿ ಕೊರಗಜ್ಜ ದೈವದ (ಚೇತನ) ಭಕ್ತರು ದೇವರ ಆಶೀರ್ವಾದದಿಂದಾಗಿ ದೊಡ್ಡ ಅನಾಹುತವನ್ನು ತಪ್ಪಿಸಲಾಗಿದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


