ದಲಿತ ಮಹಿಳೆ ನೀರು ಕುಡಿದಿದ್ದಕ್ಕೆ ಟ್ಯಾಂಕ್ ಸ್ವಚ್ಛ ಪ್ರಕರಣ: ಆರೋಪಿ ಬಂಧನ
ತಾಲೂಕಿನ ಹೆಗ್ಗೋಠಾರ ಗ್ರಾಮದಲ್ಲಿ ದಲಿತ ಮಹಿಳೆ ನೀರು ಕುಡಿದರು ಎಂಬ ಕಾರಣಕ್ಕೆ ಟ್ಯಾಂಕ್ ಖಾಲಿ ಮಾಡಿ ಗೋಮೂತ್ರದಿಂದ ಸ್ವಚ್ಛಗೊಳಿಸಿದ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಚಾಮರಾಜನಗರ: ತಾಲೂಕಿನ ಹೆಗ್ಗೋಠಾರ ಗ್ರಾಮದಲ್ಲಿ ದಲಿತ ಮಹಿಳೆ ನೀರು ಕುಡಿದರು ಎಂಬ ಕಾರಣಕ್ಕೆ ಟ್ಯಾಂಕ್ ಖಾಲಿ ಮಾಡಿ ಗೋಮೂತ್ರದಿಂದ ಸ್ವಚ್ಛಗೊಳಿಸಿದ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.
ಆರೋಪಿಯನ್ನು ಮಹದೇವಪ್ಪ (62) ಎಂದು ಗುರ್ತಿಸಲಾಗಿದೆ. ಆರೋಪಿಯನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ ಎಂದು ತಿಳಿದುಬಂದಿದೆ.
ಆರೋಪಿಯ ಬಂಧನಕ್ಕೆ ಆಗ್ರಹಿಸಿ ನಗರದಲ್ಲಿ ಮಂಗಳವಾರ ಸಾಂಕೇತಿಕ ಪ್ರತಿಭಟನೆ ಹಮ್ಮಿಕೊಂಡಿದ್ದರು. ಆರೋಪಿಯ ಬಂಧನವಾಗಿರುವುದರಿಂದ ಇದೀಗ ಪ್ರತಿಭಟನೆಯನ್ನು ಕೈ ಬಿಟ್ಟಿದ್ದಾರೆ.
ಆದರೆ, ದಶಕಗಳಿಂದ ತಮಗೆ ಪ್ರವೇಶ ನಿರಾಕರಿಸಲಾಗಿದ್ದ ದೇವಸ್ಥಾನ, ಹೊಟೇಲ್‌ಗಳಿಗೆ ಪ್ರವೇಶ ನೀಡುವಂತೆ ಹೆಗ್ಗಾವತಾರ ಗ್ರಾಮದ ದಲಿತರು ಜಿಲ್ಲಾಧಿಕಾರಿ ಡಿ.ಎಸ್.ರಮೇಶ್ ಅವರನ್ನು ಒತ್ತಾಯಿಸಿದ್ದಾರೆ.
ಮಹದೇವಪ್ಪ ಅವರು ಟ್ಯಾಂಕ್‌ಗೆ ನೀರು ಖಾಲಿ ಮಾಡಿ, ಗೋಮೂತ್ರದಿಂದ ಸ್ವಚ್ಛಗೊಳಿಸಿದ ವಿಡಿಯೋ ವೈರಲ್ ಆಗಿತ್ತು. ಘಟನೆ ವರದಿಯಾದ ಬಳಿಕ ಚಾಮರಾಜನಗರ ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರ ತೀವ್ರ ಟೀಕೆಗೆ ಗುರಿಯಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


