ಪಿಂಚಣಿದಾರ ವೃದ್ಧ ಮಹಿಳೆಯ ಅಕೌಂಟ್ ಬ್ಲಾಕ್: ಬ್ಯಾಂಕ್ ವಿರುದ್ಧ ಹೈಕೋರ್ಟ್ ಚಾಟಿ
ವೃದ್ಧೆಯೊಬ್ಬರ ಬ್ಯಾಂಕ್ ಖಾತೆಗೆ ಹೆಚ್ಚಿನ ಪಿಂಚಣಿ ಪಾವತಿಸಿದ ನಂತರ ಖಾತೆಯನ್ನು ಸ್ಥಗಿತಗೊಳಿಸಿದ ಬ್ಯಾಂಕ್ವೊಂದರ ಕ್ರಮವನ್ನು ಹೈಕೋರ್ಟ್ ತೀವ್ರವಾಗಿ ಆಕ್ಷೇಪಿಸಿದೆ.

ಬೆಂಗಳೂರು: ವೃದ್ಧೆಯೊಬ್ಬರ ಬ್ಯಾಂಕ್ ಖಾತೆಗೆ ಹೆಚ್ಚಿನ ಪಿಂಚಣಿ ಪಾವತಿಸಿದ ನಂತರ ಖಾತೆಯನ್ನು ಸ್ಥಗಿತಗೊಳಿಸಿದ ಬ್ಯಾಂಕ್ವೊಂದರ ಕ್ರಮವನ್ನು ಹೈಕೋರ್ಟ್ ತೀವ್ರವಾಗಿ ಆಕ್ಷೇಪಿಸಿದೆ.
ಖಾತೆಯನ್ನು ಸ್ಥಗಿತಗೊಳಿಸಿದ ಬ್ಯಾಂಕ್ ಕ್ರಮವನ್ನು ಪ್ರಶ್ನಿಸಿ ಬೆಂಗಳೂರಿನ ವಿಜಯನಗರದ ನಿವಾಸಿಯಾದ ವೃದ್ಧೆ ನಳಿನಿ ದೇವಿ ಅವರು ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ನ್ಯಾಯಪೀಠ, ಬ್ಯಾಂಕ್ ಕ್ರಮಕ್ಕೆ ಅಸಮಾಧಾನ ವ್ಯಕ್ತಪಡಿಸಿತು.
ಅಲ್ಲದೆ, ಹೆಚ್ಚುವರಿಯಾಗಿ ಪಾವತಿಸಿದ ಪಿಂಚಣಿ ಮೊತ್ತವನ್ನು ಸಂಬಂಧಪಟ್ಟ ಬ್ಯಾಂಕ್ ಅಧಿಕಾರಿಗಳಿಂದ ವಸೂಲಿಗೆ ಮಾಡಬೇಕು. ಪಿಂಚಣಿದಾರ ಮಹಿಳೆಯಿಂದ ಹಣ ವಸೂಲು ಮಾಡಬಾರದು ಎಂದು ನಿರ್ದೇಶಿಸಿದೆ.
ಈ ಹಿನ್ನೆಲೆಯಲ್ಲಿ ಅರ್ಜಿದಾರರು ಬ್ಯಾಂಕಿಗೆ ತೆರಳಿ, ಹೆಚ್ಚುವರಿ ಪಾವತಿಯಾದ ಪಿಂಚಣಿ ಹಿಂಪಡೆಯುವಂತೆ ಕೋರಿದರೂ ಸಿಬ್ಬಂದಿ ಸ್ಪಂದಿಸಿರಲಿಲ್ಲ. ಬಳಿಕ ವರ್ಷಗಳು ಉರುಳಿದಂತೆ ಒಟ್ಟು 2,34,158 ರು. ಹೆಚ್ಚುವರಿಯಾಗಿ ಪಾವತಿ ಮಾಡಿದ್ದಾರೆ. ಆದರೆ, ಬ್ಯಾಂಕ್ ಖಾತೆ ಮೇಲೆ ಹೇರಿದ ನಿರ್ಬಂಧವನ್ನು ಮಾತ್ರ ತೆರವುಗೊಳಿಸಿರಲಿಲ್ಲ. ಇದರಿಂದ ನಳಿನಿ ದೇವಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಅರ್ಜಿದಾರರು ವೃದ್ಧೆಯಾಗಿದ್ದಾರೆ. 2016ರಲ್ಲಿ ಖಾತೆ ಸ್ಥಗಿತಗೊಳಿಸಲಾಗಿದೆ. ಅಂದಿನಿಂದ ಬ್ಯಾಂಕ್ ಕಚೇರಿಗೆ ಪದೇ ಪದೇ ಅಲೆದರೂ ಸಮಸ್ಯೆ ಬಗೆಹರಿದಿಲ್ಲ. ಪಿಂಚಣಿದಾರರ ಧ್ವನಿಗೆ ಸರ್ಕಾರ ಹಾಗೂ ಬ್ಯಾಂಕ್ಗಳು ಕಿವುಡಾಗಬಾರದು. ಹಿರಿಯ ನಾಗರಿಕರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಬೇಕು ಎಂದು ಅಭಿಪ್ರಾಯಪಟ್ಟಿತು.
ಕೂಡಲೇ ಅರ್ಜಿದಾರರ ಬ್ಯಾಂಕ್ ಖಾತೆ ಮೇಲೆ ಹೇರಿರುವ ನಿರ್ಬಂಧವನ್ನು ತೆರವುಗೊಳಿಸಬೇಕು. ಹೆಚ್ಚುವರಿ ಪಾವತಿಯಾದ ಹಣವನ್ನು ಅದಕ್ಕೆ ಕಾರಣರಾದ ಬ್ಯಾಂಕ್ ಅಧಿಕಾರಿಗಳಿಂದಲೇ ವಸೂಲಿ ಮಾಡಬೇಕು ಹಾಗೂ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಅರ್ಜಿದಾರರಿಗೆ ಪಿಂಚಣಿ ಪಾವತಿಗೆ ಬ್ಯಾಂಕ್ ಯಾವುದೇ ಅಡಚಣೆ ಉಂಟು ಮಾಡುವಂತಿಲ್ಲ ಎಂದು ನಿರ್ದೇಶಿಸಿದೆ.
ಅರ್ಜಿದಾರರ ಪತಿ ಸರ್ಕಾರಿ ನೌಕರರಾಗಿದ್ದು, 22 ವರ್ಷ ಸೇವೆ ಸಲ್ಲಿಸಿ 2014ರಲ್ಲಿ ಸಾವನ್ನಪ್ಪಿದ್ದರು. ನಂತರ ಅರ್ಜಿದಾರರಿಗೆ ಕುಟುಂಬ ಪಿಂಚಣಿ ಹಣವನ್ನು ಬ್ಯಾಂಕಿನ ಮೂಲಕ ಪಾವತಿಸಲಾಗುತ್ತಿತ್ತು. ಪಿಂಚಣಿದಾರೆಯಾಗಿರುವ ಅರ್ಜಿದಾರರ ಖಾತೆಗೆ 2016ರಲ್ಲಿ ಹೆಚ್ಚುವರಿಯಾಗಿ ರೂ.50 ಸಾವಿರ ಹಣವನ್ನು ರಾಷ್ಟ್ರೀಕೃತ ಬ್ಯಾಂಕೊಂದರ ಅಧಿಕಾರಿಗಳು ಪಾವತಿ ಮಾಡಿದ್ದರು. ನಂತರ ಅಧಿಕಾರಿಗಳು ಅರ್ಜಿದಾರರ ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


