ಹೂಡಿಕೆದಾರರ ಓಲೈಸಲು ಬೆಂಗಳೂರಿಗೆ ಬಂದ ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್!
ಕರ್ನಾಟಕವು ಜಾಗತಿಕ ಹೂಡಿಕೆದಾರರ ಸಭೆ ಮತ್ತು ಬೆಂಗಳೂರು ಟೆಕ್ ಶೃಂಗಸಭೆಯನ್ನು ಆಯೋಜಿಸಿದ ಬೆನ್ನಲ್ಲೇ, ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಜವಳಿ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಹೂಡಿಕೆದಾರರನ್ನು ಸೆಳೆಯಲು ಬೆಂಗಳೂರಿಗೆ ಆಗಮಿಸಿದ್ದಾರೆ.

ಬೆಂಗಳೂರು: ಕರ್ನಾಟಕವು ಜಾಗತಿಕ ಹೂಡಿಕೆದಾರರ ಸಭೆ ಮತ್ತು ಬೆಂಗಳೂರು ಟೆಕ್ ಶೃಂಗಸಭೆಯನ್ನು ಆಯೋಜಿಸಿದ ಬೆನ್ನಲ್ಲೇ, ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಜವಳಿ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಹೂಡಿಕೆದಾರರನ್ನು ಸೆಳೆಯಲು ಬೆಂಗಳೂರಿಗೆ ಆಗಮಿಸಿದ್ದಾರೆ.
ಹೂಡಿಕೆದಾರರೊಂದಿಗೆ ಸುದೀರ್ಘವಾಗಿ ಮಾತನಾಡಿದ ಚೌಹಾಣ್ ಅವರು, ರಾಜ್ಯದ ಸಾಮರ್ಥ್ಯವನ್ನು ಉದ್ಯಮ ಸಂಸ್ಥೆಗಳಿಗೆ ಪ್ರದರ್ಶಿಸಿದರು.
“ನನ್ನ ಪ್ರತಿ ಸೋಮವಾರ ಹೂಡಿಕೆದಾರರಿಗೆ ಮೀಸಲಾಗಿದೆ. ನಾನು ಮತ್ತು ನನ್ನ ತಂಡವು ಯಾವಾಗಲೂ ನಿಮಗೆ ಲಭ್ಯವಿರುತ್ತೇವೆ ಎಂದು ಹೂಡಿಕೆದಾರರಿಗೆ ತಿಳಿಸಿದರು.
ಇದೇ ವೇಳೆ 2023 ರ ಜನವರಿಯಲ್ಲಿ ಮಧ್ಯಪ್ರದೇಶದ ಇಂದೋರ್‌ನಲ್ಲಿ ಜಾಗತಿಕ ಹೂಡಿಕೆದಾರರ ಶೃಂಗಸಭೆ ಆಯೋಜಿಸುವುದಾಗಿ ಘೋಷಿಸಿದರು.
ಬಳಿಕ ಬೆಂಗಳೂರಿನಲ್ಲಿ ಎಸ್‌ಸಿಎಂ ಟೆಕ್ಸ್‌ಟೈಲ್ಸ್ (ಚೆನ್ನೈ ಸಿಲ್ಕ್ಸ್) ವ್ಯವಸ್ಥಾಪಕ ನಿರ್ದೇಶಕ ಪಿಪಿಕೆ ಪರಮಶಿವಂ ಅವರನ್ನು ಭೇಟಿ ಮಾಡಿದ ಚೌಹಾಣ್ ಅವರು, ಮಧ್ಯಪ್ರದೇಶದಲ್ಲಿ ಸ್ಥಾವರವನ್ನು ಸ್ಥಾಪಿಸುವ ಕುರಿತು ಪ್ರಸ್ತಾಪಿಸಿದರು. ಇದರಿಂದ ಸುಮಾರು 2,000 ಜನರಿಗೆ ಉದ್ಯೋಗ ಸಿಗಲಿದೆ ಎಂದು ಹೇಳಿದರು.
ಟ್ರೈಡೆಂಟ್, ವರ್ಧಮಾನ್, ಎಸಿಎಲ್ ಮತ್ತು ಗೋಕುಲದಾಸ್ ಸೇರಿದಂತೆ ರಾಜ್ಯದಲ್ಲಿ ಪ್ರಸ್ತುತ ಇರುವ ದೊಡ್ಡ ಕೈಗಾರಿಕೆಗಳನ್ನು ಉಲ್ಲೇಖಿಸಿ ಮಾತನಾಡಿ, ಜವಳಿ ಉದ್ಯಮಕ್ಕೆ ಹೂಡಿಕೆಗಳನ್ನು ಸೆಳೆಯಲು ಒತ್ತು ನೀಡಿದರು.
ಕರ್ನಾಟಕದ ಕೈಗಾರಿಕೆಗಳ ಸ್ಥಾಪನೆ, ಕಾರ್ಯಾಚರಣೆ ಮತ್ತು ನಿರ್ಬಂಧಗಳಲ್ಲಿ ಯಾವುದೇ ಸಮಸ್ಯೆಗಳನ್ನು ಎದುರಿಸುವುದಿಲ್ಲ ಎಂದು ಭರವಸೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


