ಬೆಂಗಳೂರು: ಟೆಸ್ಟ್ ರೈಡ್ ನೆಪದಲ್ಲಿ 19 ದ್ವಿಚಕ್ರ ವಾಹನಗಳ ಕದ್ದಿದ್ದ ಇಬ್ಬರು ಯುವಕರ ಬಂಧನ
ಟೆಸ್ಟ್ ರೈಡ್ ನೆಪದಲ್ಲಿ 19 ದ್ವಿಚಕ್ರ ವಾಹನಗಳನ್ನು ಕಳವು ಮಾಡಿದ್ದ ಇಬ್ಬರು ಯುವಕರನ್ನು ಈಶಾನ್ಯ ವಿಭಾಗದ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಬೆಂಗಳೂರು: ಟೆಸ್ಟ್ ರೈಡ್ ನೆಪದಲ್ಲಿ 19 ದ್ವಿಚಕ್ರ ವಾಹನಗಳನ್ನು ಕಳವು ಮಾಡಿದ್ದ ಇಬ್ಬರು ಯುವಕರನ್ನು ಈಶಾನ್ಯ ವಿಭಾಗದ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.
ಡಿಜೆ ಹಳ್ಳಿಯ ನಿವಾಸಿಗಳಾದ ಯಾಸಿನ್ ಬೇಗ್ (22) ಮತ್ತು ಇಮ್ರಾನ್ ಖಾನ್ (24) ಬಂಧಿತ ಆರೋಪಿಗಳಾಗಿದ್ದಾರೆ.
ಆನ್‌ಲೈನ್‌ನಲ್ಲಿ ಜಾಹೀರಾತು ಹಾಕುವ ಮೂಲಕ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಲು ಬಯಸುವ ವಾಹನ ಮಾಲೀಕರನ್ನು ಆರೋಪಿಗಳು ಗುರಿಯಾಗಿರಿಸಿಕೊಳ್ಳುತ್ತಿದ್ದರು. ಬೈಕ್ ಖರೀದಿಸುವ ನೆಪದಲ್ಲಿ ಆರೋಪಿಗಳು ಮಾಲಿಕರ ಬಳಿ ಬಂದು ಪರೀಕ್ಷಾರ್ಥ ಸವಾರಿಯ ನೆಪದಲ್ಲಿ ವಾಹನಗಳ ಕದ್ದು ಪರಾರಿಯಾಗುತ್ತಿದ್ದರು.
ಇದೀಗ ಈ ಇಬ್ಬರಿಂದ ಸುಮಾರು 15 ಲಕ್ಷ ರೂಪಾಯಿ ಮೌಲ್ಯದ ಕದ್ದ ದ್ವಿಚಕ್ರ ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಆರೋಪಿಗಳು ಯಲಹಂಕ, ಬಾಣಸವಾಡಿ, ಯಶವಂತಪುರ, ಮಹದೇವಪುರ, ಕೊತ್ತನೂರು, ಇಂದಿರಾನಗರ, ಗೋವಿಂದಪುರ, ವಿವಿ ಪುರಂ, ಎಚ್‌ಎಸ್‌ಆರ್ ಲೇಔಟ್ ಮತ್ತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನಗಳನ್ನು ಕಳವು ಮಾಡಿದ್ದಾರೆ. ಇಬ್ಬರಿಂದ 19 ದ್ವಿಚಕ್ರ ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ಇದೀಗ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


