ಬೆಂಗಳೂರು: ಹಿರಿಯ ನಟಿ ವಿನಯಾ ಪ್ರಸಾದ್ ಮನೆಯಲ್ಲಿ ಕಳ್ಳತನ, ಇಬ್ಬರು ಆರೋಪಿಗಳ ಬಂಧನ
ಹಿರಿಯ ನಟಿ ವಿನಯಾ ಪ್ರಸಾದ್ ಮನೆಯಲ್ಲಿ ಕಳ್ಳತನ ಮಾಡಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ನಂದಿನಿ ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಹಿರಿಯ ನಟಿ ವಿನಯಾ ಪ್ರಸಾದ್ ಮನೆಯಲ್ಲಿ ಕಳ್ಳತನ ಮಾಡಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ನಂದಿನಿ ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಅಯ್ಯಪ್ಪ ಅಲಿಯಾಸ್ ಮುರುಗೇಶ್ (36) ಹಾಗೂ ರವಿ (26) ಬಂಧಿತರು. ಇವರಿಬ್ಬರು ಠಾಣೆ ವ್ಯಾಪ್ತಿಯ 5 ಕಡೆಗಳಲ್ಲಿ ಕಳ್ಳತನ ಎಸಗಿರುವುದು ತನಿಖೆಯಿಂದ ಗೊತ್ತಾಗಿದೆ. ಆರೋಪಿಗಳಿಂದ 13.53 ಲಕ್ಷ ರು. ಮೌಲ್ಯದ 261 ಗ್ರಾಂ ಚಿನ್ನಾಭರಣ ಹಾಗೂ 500 ಗ್ರಾಂ ಬೆಳ್ಳಿ ಸಾಮಗ್ರಿ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.
ನಂದಿನಿ ಲೇಔಟ್ 4ನೇ ಹಂತದ ರೈಲ್ವೆ ಮೆನ್ಸ್ ಕಾಲೊನಿಯಲ್ಲಿ ಪತಿ ಜೊತೆ ವಿನಯಾ ಪ್ರಸಾದ್ ವಾಸವಿದ್ದಾರೆ. ಕುಟುಂಬದವರೆಲ್ಲ ಅಕ್ಟೋಬರ್ 22ರಂದು ಉಡುಪಿಗೆ ಹೋಗಿದ್ದರು. ಅ. 26ರಂದು ಸಂಜೆ ಮನೆಗೆ ವಾಪಸ್ ಬಂದು ನೋಡಿದಾಗ, ವಸ್ತುಗಳು ಚೆಲ್ಲಾಪಿಲ್ಲಿ ಆಗಿ ಬಿದ್ದಿದ್ದವು. ಪರಿಶೀಲಿಸಿದಾಗ 7 ಸಾವಿರ ರು. ನಗದು ಕಳ್ಳತನವಾಗಿದ್ದು ಗೊತ್ತಾಗಿತ್ತು. ಠಾಣೆಗೆ ದೂರು ನೀಡಿದ್ದರು.
ವಿನಯಾ ಪ್ರಸಾದ್ ಮನೆಯಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿದ್ದ ಆರೋಪಿಗಳು, ಬಾಗಿಲು ಮೀಟಿ ಒಳನುಗ್ಗಿ ಕಳ್ಳತನ ಮಾಡಿದ್ದರು. ಆದರೆ, ಅವರಿಗೆ 7 ಸಾವಿರ ರು. ಮಾತ್ರ ಸಿಕ್ಕಿತ್ತು’ ಎಂದು ಪೊಲೀಸರು ತಿಳಿಸಿದ್ದಾರೆ.
‘ಚನ್ನರಾಯಪಟ್ಟಣದಿಂದ ಆಗಾಗ ನಗರಕ್ಕೆ ಬರುತ್ತಿದ್ದ ಆರೋಪಿಗಳು, ಬೀಗ ಹಾಕಿರುತ್ತಿದ್ದ ಮನೆಗಳನ್ನು ಗುರುತಿಸಿ ಕಳ್ಳತನ ಮಾಡಿಕೊಂಡು ಪರಾರಿಯಾಗುತ್ತಿದ್ದರು. ಕದ್ದ ವಸ್ತುಗಳನ್ನು ಮಾರಾಟ ಮಾಡಿ, ಬಂದ ಹಣವನ್ನು ಹಂಚಿಕೊಳ್ಳುತ್ತಿದ್ದರು’ ಎಂದರು.
ಬಂಧಿತ ಆರೋಪಿಗಳು, ಅಪರಾಧ ಹಿನ್ನೆಲೆಯುಳ್ಳವರು. ಆರೋಪಿ ಅಯ್ಯಪ್ಪ ವಿರುದ್ಧ 17 ಪ್ರಕರಣ ಹಾಗೂ ರವಿ ವಿರುದ್ಧ 9 ಪ್ರಕರಣಗಳು ವಿವಿಧ ಠಾಣೆಗಳಲ್ಲಿ ದಾಖಲಾಗಿವೆ’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


