ಚಿಕ್ಕಮಗಳೂರು: ವಿದ್ಯಾರ್ಥಿನಿಯರಿಗೆ ಖಾಸಗಿ ಅಂಗ ತೋರಿಸಿ ಕಿರುಕುಳ: ವ್ಯಕ್ತಿಯ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು, ಪೋಕ್ಸೋ ಪ್ರಕರಣ ದಾಖಲು
ವಿದ್ಯಾರ್ಥಿನಿಯರಿಗೆ ಖಾಸಗಿ ಅಂಗ ತೋರಿಸಿ ಕಿರುಕುಳ ನೀಡುತ್ತಿದ್ದ ಆರೋಪದ ಮೇರೆಗೆ ವ್ಯಕ್ತಿಯೋರ್ವನನ್ನು ಗ್ರಾಮಸ್ಥರು ಕಂಬಕ್ಕೆ ಕಟ್ಟಿ ಥಳಿಸಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಚಿಕ್ಕಮಗಳೂರು: ವಿದ್ಯಾರ್ಥಿನಿಯರಿಗೆ ಖಾಸಗಿ ಅಂಗ ತೋರಿಸಿ ಕಿರುಕುಳ ನೀಡುತ್ತಿದ್ದ ಆರೋಪದ ಮೇರೆಗೆ ವ್ಯಕ್ತಿಯೋರ್ವನನ್ನು ಗ್ರಾಮಸ್ಥರು ಕಂಬಕ್ಕೆ ಕಟ್ಟಿ ಥಳಿಸಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಚಿಕ್ಕಮಗಳೂರಿನ ಸಕ್ಕರಾಯಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ಆರೋಪಿ ರಾಜಪ್ಪ ವಿರುದ್ಧ ಚಿಕ್ಕಮಗಳೂರಿನ ಸಕ್ಕರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ಇತರ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಸ್ಥಳೀಯರ ಪ್ರಕಾರ ಶಾಲೆಯಿಂದ ಶಿಕ್ಷಕರನ್ನು ಕರೆದುಕೊಂಡು ಬರುತ್ತಿದ್ದ ರಾಜಪ್ಪ ಅದೇ ಶಾಲೆಯ ವಿದ್ಯಾರ್ಥಿನಿಯರಿಗೆ ಖಾಸಗಿ ಅಂಗ ತೋರಿಸಿ ಅವರೊಂದಿಗೆ ಅನುಚಿತವಾಗಿ ವರ್ತಿಸಿ ಅವರ ಖಾಸಗಿ ಅಂಗಗಳನ್ನು ಮುಟ್ಟಿ ವಿಕೃತ ಆನಂದ ಪಡೆಯುತ್ತಿದ್ದ ಎನ್ನಲಾಗಿದೆ. ಈ ಕುರಿತು ವಿದ್ಯಾರ್ಥಿನಿಯರು ಪೋಷಕರಿಗೆ ಮಾಹಿತಿ ನೀಡಿದ್ದು, ಪೋಷಕರು ಗ್ರಾಮದ ಹಿರಿಯರಿಗೆ ಮಾಹಿತಿ ನೀಡಿದ್ದಾರೆ.
ಈ ವೇಳೆ ಆಕ್ರೋಶಿತ ಗ್ರಾಮಸ್ಥರು ಆರೋಪಿ ರಾಜಪ್ಪನನ್ನು ಹಿಡಿದು ವಿದ್ಯುತ್ ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಆರೋಪಿ ರಾಜಪ್ಪನನ್ನು ವಶಕ್ಕೆ ಪಡೆದು ಪೋಕ್ಟೋ ಮತ್ತು ಇತರೆ ಕಾಯ್ದೆಗಳಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


