ಒಕ್ಕಲಿಗರ ಮೀಸಲಾತಿ ಬೇಡಿಕೆ ಈಡೇರಿಕೆಗಾಗಿ ನಾವು ಬೀದಿಗಿಳಿಯಲು ಸಿದ್ಧ; ಇದು ದಾನವಲ್ಲ ನಮ್ಮ ಕಾನೂನುಬದ್ಧ ಹಕ್ಕು: ಡಿವಿಎಸ್
ಒಕ್ಕಲಿಗ ಉಪ ಪಂಗಡಗಳನ್ನು ಒಳಗೊಂಡ ರಾಜ್ಯದ ಇತರ ಹಿಂದುಳಿದ ವರ್ಗಗಳ ‘ಪ್ರವರ್ಗ–3ಎ’ಗೆ ನೀಡಲಾಗಿರುವ ಮೀಸಲಾತಿ ಪ್ರಮಾಣವನ್ನು ಮುಂಬರುವ ಜನವರಿ 23ರ ಒಳಗೆ ಶೇ 4 ರಿಂದ ಶೇ 12ಕ್ಕೆ ಹೆಚ್ಚಿಸ ಬೇಕು’ ಎಂದು ಒಕ್ಕಲಿಗರ ಮೀಸಲಾತಿ ಹೋರಾಟ ಸಮಿತಿ ಪಟ್ಟು ಹಿಡಿದಿದೆ

ಬೆಂಗಳೂರು: ‘ಒಕ್ಕಲಿಗ ಉಪ ಪಂಗಡಗಳನ್ನು ಒಳಗೊಂಡ ರಾಜ್ಯದ ಇತರ ಹಿಂದುಳಿದ ವರ್ಗಗಳ ‘ಪ್ರವರ್ಗ–3ಎ’ಗೆ ನೀಡಲಾಗಿರುವ ಮೀಸಲಾತಿ ಪ್ರಮಾಣವನ್ನು ಮುಂಬರುವ ಜನವರಿ 23ರ ಒಳಗೆ ಶೇ 4 ರಿಂದ ಶೇ 12ಕ್ಕೆ ಹೆಚ್ಚಿಸ ಬೇಕು’ ಎಂದು ಒಕ್ಕಲಿಗರ ಮೀಸಲಾತಿ ಹೋರಾಟ ಸಮಿತಿ ಪಟ್ಟು ಹಿಡಿದಿದೆ. ಗಡುವಿನೊಳಗೆ ಬೇಡಿಕೆ ಈಡೇರಿಸದಿದ್ದರೆ ರಾಜ್ಯವ್ಯಾಪಿ ಹೋರಾಟ ತೀವ್ರಗೊಳಿಸುವ ಬೆದರಿಕೆಯನ್ನೂ ಒಡ್ಡಿದೆ.
ಒಕ್ಕಲಿಗರ ಸಂಘದ ಆವರಣ ದಲ್ಲಿರುವ ಕುವೆಂಪು ಕಲಾಕ್ಷೇತ್ರದಲ್ಲಿ ಆದಿಚುಂಚನಗಿರಿ ಸಂಸ್ಥಾನದ ನಿರ್ಮಲಾನಂದನಾಥ ಸ್ವಾಮೀಜಿ, ಪಟ್ಟನಾಯಕನಹಳ್ಳಿ ಮಠದ ನಂಜಾವಧೂತ ಸ್ವಾಮೀಜಿ, ವಿಶ್ವ ಒಕ್ಕಲಿಗರ ಮಹಾಸಂಸ್ಥಾನದ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ಉಪಸ್ಥಿತಿಯಲ್ಲಿ ಭಾನುವಾರ ನಡೆದ ಸಭೆಯಲ್ಲಿ ಒಕ್ಕಲಿಗ ನಾಯಕರು ಒಕ್ಕೊರಲಿನಿಂದ ಈ ಬೇಡಿಕೆ ಇಟ್ಟಿದ್ದಾರೆ.
‘ನಮ್ಮ ಸಮುದಾಯದ ಜನಸಂಖ್ಯೆಯ ಗಣತಿ ಮಾಡಬೇಕು. ಹಿಂದುಳಿದ ವರ್ಗಗಳ ಆಯೋಗ ಸಿದ್ಧಪಡಿಸಿದ್ದ ವರದಿಯಲ್ಲಿ ನಮ್ಮ ಜನಸಂಖ್ಯೆಯನ್ನು ತಿರುಚಲಾಗಿದೆ. ಒಕ್ಕಲಿಗರಿಗೆ ಜನಸಂಖ್ಯೆಗೆ ಅನುಗುಣವಾಗಿ ಕನಿಷ್ಠ ಶೇ 12ರಷ್ಟು ಮೀಸಲಾತಿ ಹೆಚ್ಚಿಸಬೇಕು. ಇದು ಭಿಕ್ಷೆ ಅಲ್ಲ. ನ್ಯಾಯಯುತ ಹಕ್ಕು. ಆರ್ಥಿಕವಾಗಿ ಹಿಂದುಳಿದವರಿಗೆ ಕೇಂದ್ರಸರ್ಕಾರ ಘೋಷಿಸಿರುವ ಶೇ 10 ಮೀಸಲಾತಿ ನಮ್ಮ ಸಮುದಾಯಕ್ಕೆ ಸಿಗದೇ ಅನ್ಯಾಯ ಆಗಿದೆ ಎಂದರು.
ನಮ್ಮ ಬೇಡಿಕೆ ಈಡೇರಿಕೆಗಾಗಿ ನಾವು ಬೀದಿಗಿಳಿಯಲು ಸಿದ್ಧರಿದ್ದೇವೆ ಎಂದು ಹೇಳಿದ ಸದಾನಂದಗೌಡ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಇತ್ತೀಚೆಗೆ ನಿರ್ಧಾರ ಕೈಗೊಂಡಿತ್ತು. ನಮ್ಮ ಬೇಡಿಕೆ ದಾನವಲ್ಲ ಆದರೆ ನಮ್ಮ ಕಾನೂನುಬದ್ಧ ಹಕ್ಕು" ಎಂದು ಗೌಡ ಪ್ರತಿಪಾದಿಸಿದರು.
ನಾನು ಆಡಳಿತ ಪಕ್ಷದವನಾಗಿದ್ದು, ಸಾರ್ವಜನಿಕವಾಗಿ ಎಲ್ಲವನ್ನು ಹೇಳದಂತೆ ತಡೆಯುತ್ತಿದೆ. ಆದರೆ ನಾನು ಈ ವಿಷಯವನ್ನು ಪ್ರಸ್ತಾಪಿಸುತ್ತೇನೆ ಎಂದು ಭರವಸೆ ನೀಡುತ್ತೇನೆ. 2012ರಲ್ಲಿ ನಾನು ಸಿಎಂ ಆಗಿದ್ದಾಗ ನಿರ್ಮಲಾನಂದನಾಥ ಸ್ವಾಮೀಜಿ ಒಕ್ಕಲಿಗ ಸಮುದಾಯದವರೊಬ್ಬರು ಸಿಎಂ ಸ್ಥಾನದಿಂದ ಕೆಳಗಿಳಿಯದಂತೆ ಹೋರಾಟ ನಡೆಸಿದ್ದರು ಎಂದು ಸ್ಮರಿಸಿದರು.
ಡಿಸೆಂಬರ್ 9 ರಿಂದ ಆರಂಭವಾಗಲಿರುವ ಸಂಸತ್ ಅಧಿವೇಶನದಲ್ಲಿ ದೇವೇಗೌಡರ ನೇತೃತ್ವದಲ್ಲಿ, ನಮ್ಮ ಸಮುದಾಯಕ್ಕೆ ಮೀಸಲಾತಿ ಹೆಚ್ಚಿಸುವಂತೆ ಕೇಂದ್ರದ ಮೇಲೆ ಒತ್ತಡ ಹಾಕುತ್ತೇವೆ’ ಎಂದು ಸಂಸದ ಡಿ.ವಿ. ಸದಾನಂದಗೌಡ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


