ರಾಜ್ಯ

ಬಿಬಿಎಂಪಿ ಕಸದ ಲಾರಿ ಡಿಕ್ಕಿಯಾಗಿ ಇಬ್ಬರು ಯುವಕರು ಸಾವು: ಸರ್ಕಾರದಿಂದ 25 ಲಕ್ಷ ರೂ. ಪರಿಹಾರ ಘೋಷಣೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(BBMP) ಕಸದ ಲಾರಿ ಹಾಗೂ ಬೈಕ್‌ ನಡುವೆ ಅಪಘಾತವಾಗಿ ಬೈಕ್‌ನಲ್ಲಿದ್ದ ಮೃತಪಟ್ಟ ಇಬ್ಬರು ಯುವಕರ ಕುಟುಂಬಕ್ಕೆ ಸರ್ಕಾರ 25 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.

ಬಿಬಿಎಂಪಿ ಕಸದ ಲಾರಿ ಡಿಕ್ಕಿಯಾಗಿ ಇಬ್ಬರು ಯುವಕರು ಸಾವು: ಸರ್ಕಾರದಿಂದ 25 ಲಕ್ಷ ರೂ. ಪರಿಹಾರ ಘೋಷಣೆ
ಸಾಂದರ್ಭಿಕ ಚಿತ್ರ
Published On :

ದೊಡ್ಡಬಳ್ಳಾಪುರ: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(BBMP) ಕಸದ ಲಾರಿ ಹಾಗೂ ಬೈಕ್‌ ನಡುವೆ ಅಪಘಾತವಾಗಿ ಬೈಕ್‌ನಲ್ಲಿದ್ದ ಮೃತಪಟ್ಟ ಇಬ್ಬರು ಯುವಕರ ಕುಟುಂಬಕ್ಕೆ ಸರ್ಕಾರ 25 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.

ತುಮಕೂರು-ದಾಬಸ್‌ ಪೇಟೆ ಹೆದ್ದಾರಿಯ ಹುಲಿಕುಂಟೆ ಗ್ರಾಮದ ಬಳಿ ಪ್ರಕರಣ ನಿನ್ನೆ ನಡೆದಿತ್ತು. ದೊಡ್ಡಬೆಳವಂಗಲ ಹೋಬಳಿಯ ಮರಳುಕುಂಟೆ ಗ್ರಾಮದ ಯುವಕರಾದ ಮಾರುತಿ (28) ಮತ್ತು ಮಹೇಶ್‌(30) ಮೃತಪಟ್ಟ ಯುವಕರಾಗಿದ್ದಾರೆ.

ತಾಲೂಕಿನ ಚಿಗರೇನಹಳ್ಳಿ ಬಳಿಯಿರುವ ಬಿಬಿಎಂಪಿ ಕಸದ ಡಂಪ್‌ ಯಾರ್ಡ್‌ ಎಂಎಸ್‌ ಜಿಪಿ ಘಟಕಕ್ಕೆ ಕಸವನ್ನು ಹಾಕಿ ವಾಪಸ್ ಹೋಗುತ್ತಿದ್ದ ಲಾರಿ ಮತ್ತು ಬೈಕ್‌ ಮಧ್ಯೆ ಅಪಘಾತ ಸಂಭವಿಸಿದೆ. ಮಧುರೆಯಲ್ಲಿ ಶನಿಮಹಾತ್ಮ ಸ್ವಾಮಿಯ ದರ್ಶನ ಮುಗಿಸಿ ಮುಡಿಕೊಟ್ಟ ಯುವಕರು ವಾಪಸ್‌ ಸ್ವಗ್ರಾಮಕ್ಕೆ ಬರುವಾಗ ದುರ್ಘಟನೆ ನಡೆದಿದೆ.

ಸ್ಥಳಕ್ಕೆ ನಿನ್ನೆ ಶಾಸಕ ವೆಂಕಟರಮಣಯ್ಯ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ತಿಳಿಸಿದ್ದರು. ಬಿಬಿಎಂಪಿ ಕಸದ ಘಟಕವನ್ನು ಮುಚ್ಚುವಂತೆ ಹಲವು ಬಾರಿ ಸರಕಾರಕ್ಕೆ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಪದೇ ಪದೇ ಕಸದ ಘಟಕದಿಂದ ತಾಲೂಕಿನ ಜನ ಪ್ರಾಣ ತೆತ್ತುತ್ತಿದ್ದಾರೆ. ಕಸದ ಘಟಕದಿಂದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪರಿಸರವೂ ಹದಗೆಟ್ಟಿದೆ. ನೀರಿನ ಮೂಲವು ಸಂಪೂರ್ಣ ಕಲುಷಿತಗೊಂಡಿದೆ. ಅಪಘಾತ ಪ್ರಕರಣಗಳಿಂದ ತಾಲೂಕಿನ ಜನತೆ ಬೇಸತ್ತಿದ್ದಾರೆ. ಬಿಬಿಎಂಪಿ ಅಧಿಕಾರಿಗಳು, ಸರಕಾರ ಶೀಘ್ರವಾಗಿ ಕಸದ ಘಟಕವನ್ನು ಮುಚ್ಚುವಂತೆ ಆಗ್ರಹಿಸಿದ್ದಾರೆ. 

ಮೂರು ತಿಂಗಳ ಹಿಂದಷ್ಟೇ ಮೂಗಿನೇಹಳ್ಳಿ ಕ್ರಾಸ್‌ ಬಳಿ ಬಿಬಿಎಂಪಿ ಕಸದ ಲಾರಿಗೆ ಒಬ್ಬ ಯುವಕ ಬಲಿಯಾಗಿದ್ದ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.