ಉಡುಪಿ: ಕಡಿಮೆ ಅಂಕ ಬಂದಿದ್ದಕ್ಕೆ ಫೈನ್ ಹಾಕುವ ಬೆದರಿಕೆ; ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು
ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದ ಬಗ್ಗೆ ಮಾನಸಿಕವಾಗಿ ನೊಂದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪೆರ್ಡೂರು ಎಂಬಲ್ಲಿ ನಡೆದಿದೆ.

ಹೆಬ್ರಿ: ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದ ಬಗ್ಗೆ ಮಾನಸಿಕವಾಗಿ ನೊಂದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪೆರ್ಡೂರು ಎಂಬಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿನಿಯನ್ನು ಹೆಬ್ರಿಯ ಎಸ್‌ಆರ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ, ಪೆರ್ಡೂರು ನಿವಾಸಿ ತೃಪ್ತಿ (17) ಎಂದು ಗುರುತಿಸಲಾಗಿದೆ. ಉತ್ತಮವಾಗಿ ಓದುತ್ತಿದ್ದ ತೃಪ್ತಿ, ಇತ್ತೀಚಿಗೆ ನಡೆದ ಪರೀಕ್ಷೆಯಲ್ಲಿ ಸ್ವಲ್ಪ ಕಡಿಮೆ ಅಂಕ ಬಂದಿರುವ ಬಗ್ಗೆ ನೊಂದಿದ್ದಾರೆ ಎನ್ನಲಾಗಿದೆ.
ಇದೇ ಕಾರಣಕ್ಕೆ ಮನನೊಂದ ಅವರು ಮನೆಯ ಮಲಗುವ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನು ಘಟನೆ ಸಂಬಂಧ ದೀಪ್ತಿ ತಂದೆ ಪ್ರತಿಕ್ರಿಯೆ ನೀಡಿದ್ದಾರೆ. ಎಲ್ಲಾ ವಿದ್ಯಾರ್ಥಿಗಳ ಮುಂದೆ ನನ್ನ ಮಗಳನ್ನು ನಿಂದಿಸಿದ್ದಾರೆ. ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿದ್ದಾಳೆಂದು ತಂದೆ ಸುರೇಶ್ ಮೆಂಡನ್ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


