ಬೆಂಗಳೂರು: ಕಬ್ಬಿಣದ ಪೆಟ್ಟಿಗೆಗಳಲ್ಲಿ ಬಚ್ಚಿಟ್ಟಿದ್ದ ಕೋಟ್ಯಾಂತರ ಮೌಲ್ಯದ ಚಿನ್ನ ವಶಕ್ಕೆ!
ಬೆಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಮಂಗಳವಾರ ಚೆಕ್-ಇನ್ ಲಗೇಜ್‌ನಲ್ಲಿ ಎರಡು ಎಲೆಕ್ಟ್ರಿಕ್ ಐರನ್ ಬಾಕ್ಸ್‌ಗಳಲ್ಲಿ ಬಚ್ಚಿಟ್ಟು ಕಳ್ಳಸಾಗಣೆ ಮಾಡಲಾಗುತ್ತಿದ್ದ ಸುಮಾರು 3 ಕೆಜಿ ಚಿನ್ನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಬೆಂಗಳೂರು: ಬೆಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಮಂಗಳವಾರ ಚೆಕ್-ಇನ್ ಲಗೇಜ್‌ನಲ್ಲಿ ಎರಡು ಎಲೆಕ್ಟ್ರಿಕ್ ಐರನ್ ಬಾಕ್ಸ್‌ಗಳಲ್ಲಿ ಬಚ್ಚಿಟ್ಟು ಕಳ್ಳಸಾಗಣೆ ಮಾಡಲಾಗುತ್ತಿದ್ದ ಸುಮಾರು 3 ಕೆಜಿ ಚಿನ್ನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
22 ವರ್ಷದ ಯುವಕನೊಬ್ಬ ರೂ.1.62 ಕೋಟಿ ಮೌಲ್ಯದ ಚಿನ್ನವನ್ನು ದುಬೈನಿಂದ ಎಮಿರೇಟ್ಸ್ ವಿಮಾನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಎಂದು ಮೂಲಗಳು ತಿಳಿಸಿವೆ.
ವಿಶ್ವದ ಅತಿದೊಡ್ಡ ಪ್ರಯಾಣಿಕ ವಿಮಾನವಾದ ಏರ್‌ಬಸ್ ಎ 380 ನಲ್ಲಿ ಇಂತಹ ಬೆಳವಣಿಗೆ ಕಂಡುಬಂದಿರುವುದು ಇದೇ ಮೊದಲು.
ಇಕೆ-568 ವಿಮಾನವು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು 2.30ಕ್ಕೆ ತಲುಪಿತ್ತು.“ಬಾಕ್ಸ್‌ಗಳ ಸೋಪ್ಲೇಟ್‌ನಲ್ಲಿ (ಬಟ್ಟೆ ಒತ್ತಲು ಬಳಸುವ ಉಕ್ಕಿನ ಭಾಗ) ಚಿನ್ನವನ್ನು ಬಚ್ಚಿಡಲಾಗಿತ್ತು. ಅದನ್ನು ಕರಗಿಸಿ ಅದರ ಮೇಲೆ ಪೇಸ್ಟ್ ಅನ್ನು ಹಾಕಲಾಗಿತ್ತು, ಇದರಿಂದ ಚಿನ್ನವನ್ನು ಸುಲಭವಾಗಿ ಬಚ್ಚಿಡಬಹುದಾಗಿದೆ. ಕಸ್ಟಮ್ಸ್ ಅಧಿಕಾರಿಗಳು ಎಕ್ಸ್-ರೇ ಸ್ಕ್ಯಾನರ್ ಮೂಲಕ ಬ್ಯಾಗ್ ಅನ್ನು ಪರಿಶೀಲಿಸಿದಾಗ, ಸೌಮ್ಯವಾದ ಕಪ್ಪು ಕಲೆಯೊಂದು ಕಂಡು ಬಂದಿತ್ತು.
“ಅನುಮಾನದ ಆಧಾರದ ಮೇಲೆ, ಅದನ್ನು ಅತ್ಯಾಧುನಿಕ ಸ್ಕ್ಯಾನರ್ ಮೂಲಕ ತಪಾಸಣೆ ನಡೆಸಲಾಯಿತು. ಈ ವೇಳೆ ವಸ್ತುಗಳಿರುವುದು ದೃಢವಾಗಿತ್ತು, ಬಳಿಕ ಕಬ್ಬಿಣದ ಪೆಟ್ಟಿಗೆಗಳನ್ನು ಒಡೆದು ಚಿನ್ನವನ್ನು ವಶಪಡಿಸಿಕೊಳ್ಳಲಾಯಿತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


