ಮೈಸೂರಿನಲ್ಲಿ ಭಾರತ್ ಜೋಡೋ ಯಾತ್ರೆ: ಚಾಮುಂಡೇಶ್ವರಿ ದೇಗುಲದಲ್ಲಿ ಪೂಜೆ ಸಲ್ಲಿಸಿದ ರಾಹುಲ್ ಗಾಂಧಿ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕರ್ನಾಟಕದಲ್ಲಿ ಪಕ್ಷದ ಭಾರತ್ ಜೋಡೋ ಯಾತ್ರೆಯ ಮೂರನೇ ದಿನವಾದ ಸೋಮವಾರ ಇಲ್ಲಿನ ಚಾಮುಂಡಿ ಬೆಟ್ಟದ ಮೇಲಿರುವ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಮೈಸೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕರ್ನಾಟಕದಲ್ಲಿ ಪಕ್ಷದ ಭಾರತ್ ಜೋಡೋ ಯಾತ್ರೆಯ ಮೂರನೇ ದಿನವಾದ ಸೋಮವಾರ ಇಲ್ಲಿನ ಚಾಮುಂಡಿ ಬೆಟ್ಟದ ಮೇಲಿರುವ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ರಾಹುಲ್ ಗಾಂಧಿ ಅವರೊಂದಿಗೆ ಬೆಂಬಲಿಗರು ಮತ್ತು ಪಕ್ಷದ ಮುಖಂಡರು ಇದ್ದರು.
ಚಾಮುಂಡೇಶ್ವರಿ ದೇವಿಯು ಮೈಸೂರು ರಾಜಮನೆತನ ಮತ್ತು ಹಲವಾರು ಶತಮಾನಗಳಿಂದ ಮೈಸೂರಿನ ಅಧಿದೇವತೆ.
ದೇವಾಲಯಕ್ಕೆ ಭೇಟಿ ನೀಡಿದ ನಂತರ ಹಿಂದಿಯಲ್ಲಿ ಟ್ವೀಟ್ ಮಾಡಿರುವ ಗಾಂಧಿ, 'ಧಾರ್ಮಿಕ ಸಾಮರಸ್ಯವು ಭಾರತದ ಶಾಂತಿಯುತ ಮತ್ತು ಪ್ರಗತಿಪರ ಭವಿಷ್ಯದ ಅಡಿಪಾಯವಾಗಿದೆ' ಎಂದು ಹೇಳಿದ್ದಾರೆ.
ರಾಹುಲ್ ಗಾಂಧಿಯವರು ತಮ್ಮ 26ನೇ ದಿನದ ಯಾತ್ರೆಯನ್ನು ಬೆಳಗಿನ ಜಾವದಲ್ಲಿಯೇ ಆರಂಭಿಸಿದರು ಮತ್ತು 10 ದಿನಗಳ ದಸರಾ ಆಚರಣೆಗಾಗಿ ಅಲಂಕೃತವಾಗಿರುವ ಹಳೆಯ ಪಟ್ಟಣದ ಬೀದಿಗಳಲ್ಲಿ ನಡೆದರು. ರಾಹುಲ್ ಅವರನ್ನು ಸ್ವಾಗತಿಸಲು ರಸ್ತೆಯ ಇಕ್ಕೆಲಗಳಲ್ಲಿ ಜನರು ಸಾಲುಗಟ್ಟಿ ನಿಂತಿದ್ದರು.
ಯಾತ್ರೆಯು ಈವರೆಗೆ ಕರ್ನಾಟಕದಲ್ಲಿ 62 ಕಿಮೀ ಹಾಗೂ ತಮಿಳುನಾಡು ಮತ್ತು ಕೇರಳದಲ್ಲಿ 532 ಕಿಮೀ ಕ್ರಮಿಸಿದೆ.
ಭಾನುವಾರ ರಾತ್ರಿ ಧಾರಾಕಾರ ಮಳೆಯ ನಡುವೆಯೇ ಇಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ರಾಹುಲ್, ತಮ್ಮ ಭಾಷಣವನ್ನು ಮುಂದುವರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


