ಬೆಂಗಳೂರು: 112 ಪೊಲೀಸ್ ಸಹಾಯವಾಣಿಗೆ ಚಾಲನೆ
ಯಾವುದೇ ರೀತಿಯ ಅಪರಾಧ ಕೃತ್ಯಗಳು, ಕಾನೂನು ಬಾಹಿರ ಚಟುವಟಿಕೆಗಳು ನಡೆದರೆ ಕೆಲವೇ ನಿಮಿಷಗಳಲ್ಲಿ ಸ್ಥಳಕ್ಕೆ ಪೊಲೀಸರು ಧಾವಿಸಿ ಕ್ರಮ ಕೈಗೊಳ್ಳುವ 112 ಪೊಲೀಸ್ ಸಹಾಯವಾಣಿಗೆ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಇಂದು ಚಾಲನೆ ನೀಡಿದರು.

ಬೆಂಗಳೂರು: ಯಾವುದೇ ರೀತಿಯ ಅಪರಾಧ ಕೃತ್ಯಗಳು, ಕಾನೂನು ಬಾಹಿರ ಚಟುವಟಿಕೆಗಳು ನಡೆದರೆ ಕೆಲವೇ ನಿಮಿಷಗಳಲ್ಲಿ ಸ್ಥಳಕ್ಕೆ ಪೊಲೀಸರು ಧಾವಿಸಿ ಕ್ರಮ ಕೈಗೊಳ್ಳುವ 112 ಪೊಲೀಸ್ ಸಹಾಯವಾಣಿಗೆ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಇಂದು ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಸಹಾಯವಾಣಿಗೆ ಕರೆ ಮಾಡಿ ಸಮಸ್ಯೆ ವಿವರಿಸಿದರೆ, ನಗರದ ಯಾವುದೇ ಭಾಗಕ್ಕೆ 15 ನಿಮಿಷದಲ್ಲಿ ಸಿಬ್ಬಂದಿ ಭೇಟಿ ನೀಡಿ, ಸಮಸ್ಯೆ ಬಗೆಹರಿಸುತ್ತಾರೆ. ತುರ್ತು ಸಮಯದಲ್ಲಿ 112ಕ್ಕೆ ಕರೆ ಮಾಡಿ ಎಂದು ಮನವಿ ಮಾಡಿದರು.
ಸಹಾಯವಾಣಿ 112 ಜನಪ್ರಿಯವಾಗುವಂತೆ ಮಾಡಲು ಹಲವು ರೀತಿಯ ಪ್ರಚಾರ ಚಟುವಟಿಕೆ ನಡೆಸಲಾಗುವುದು, ನಗರದಲ್ಲಿ ಸಂಚರಿಸುವ ಎಲ್ಲ ಬಿಎಂಟಿಸಿ ಬಸ್ ಗಳಲ್ಲಿ 112 ಪೊಲೀಸ್ ಸಹಾಯವಾಣಿ ಬಗ್ಗೆ ಸ್ಟೀಕರ್ ಹಾಕಿ ಜಾಗೃತಿ ಮೂಡಿಸಲಾಗುವುದು ಎಂದು ಹೇಳಿದರು.
ಡಿಜಿ ಐಜಿಪಿ ಪ್ರವೀಣ್ ಸೂದ್ ಮಾತನಾಡಿ, ನಗರ ಕಮಿಷನರ್ ಆಗಿದ್ದಾಗ ಸಹಾಯವಾಣಿ ಕಾರ್ಯಕ್ಷಮತೆ ಹೆಚ್ಚಿಸಲು ಹಲವು ಕ್ರಮ ತೆಗೆದುಕೊಂಡಿದ್ದಾಗಿ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


