ಬಾಲಕನಿಂದ ಬೆತ್ತಲೆ ಪೂಜೆ: ಮೂರು ಆರೋಪಿಗಳ ಬಂಧಿಸಿದ ಕೊಪ್ಪಳ ಪೊಲೀಸ್!
ಬಾಲಕನಿಂದ ಬೆತ್ತಲೆ ಪೂಜೆ ಮಾಡಿಸಿ ಅದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದ ಆರೋಪದ ಮೇರೆಗೆ ಕೊಪ್ಪಳ ಪೊಲೀಸರು ಮೂರು ಆರೋಪಿಗಳನ್ನು ಸೋಮವಾರ ಬಂಧಿಸಿದ್ದಾರೆ.

ಕೊಪ್ಪಳ: ಬಾಲಕನಿಂದ ಬೆತ್ತಲೆ ಪೂಜೆ ಮಾಡಿಸಿ ಅದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದ ಆರೋಪದ ಮೇರೆಗೆ ಕೊಪ್ಪಳ ಪೊಲೀಸರು ಮೂರು ಆರೋಪಿಗಳನ್ನು ಸೋಮವಾರ ಬಂಧಿಸಿದ್ದಾರೆ.
‘ಅಪ್ಪನ ಸಾಲ ತೀರಬೇಕಾದರೆ ನೀನು ಬೆತ್ತಲೆ ಪೂಜೆ ಮಾಡಬೇಕು.’ ಎಂದು ಬಾಲಕನೊಬ್ಬನನ್ನು ನಂಬಿಸಿ ಆತನಿಗೆ ಬೆತ್ತಲೆ ಪೂಜೆ ಮಾಡಿದ ಘಟನೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಕೊಪ್ಪಳ ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಘಟನೆ ಕುರಿತು ಭಾನುವಾರ ರಾತ್ರಿ ಗ್ರಾಮೀಣ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಆರೋಪಿಗಳ ಪತ್ತೆಗೆ ಎರಡು ತಂಡಗಳನ್ನು ರಚಿಸಲಾಗಿತ್ತು. ಆರೋಪಿಗಳಾದ ಕೊಪ್ಪಳ ತಾಲ್ಲೂಕಿನ ಹಾಸಗಲ್ ಗ್ರಾಮದ ಶರಣಪ್ಪ ತಳವಾರ, ಗಂಗನಾಳ ಗ್ರಾಮದ ವಿರುಪನಗೌಡ ಮತ್ತು ಮೆತಗಲ್ ಗ್ರಾಮದ ಶರಣಪ್ಪ ಓಜನಹಳ್ಳಿ ಎಂಬುವವರನ್ನು ಬಂಧಿಸಲಾಗಿದೆ.
’ಘಟನೆ ಕುರಿತು ಪ್ರಕರಣ ದಾಖಲಾದ 24 ಗಂಟೆಗಳಲ್ಲಿಯೇ ಆರೋಪಿಗಳನ್ನು ಬಂಧಿಸಲಾಗಿದ್ದು, ಮುಂದಿನ ತನಿಖೆಯನ್ನು ಗ್ರಾಮೀಣ ವೃತ್ತದ ಸಿಪಿಐಗೆ ವಹಿಸಲಾಗಿದೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಶು ಗಿರಿ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


