ರಾಜ್ಯ

ಕೆಸಿಇಟಿ: ಕೆಇಎ ಕೌನ್ಸೆಲಿಂಗ್ ದಿನಾಂಕ ಪ್ರಕಟ

ಹಲವಾರು ವಿಳಂಬಗಳ ನಂತರ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ(ಕೆಸಿಇಟಿ)ಯ ಕೌನ್ಸೆಲಿಂಗ್ ವೇಳಾಪಟ್ಟಿಯನ್ನು ಗುರುವಾರ ಬಿಡುಗಡೆ ಮಾಡಿದೆ.

ಕೆಸಿಇಟಿ: ಕೆಇಎ ಕೌನ್ಸೆಲಿಂಗ್ ದಿನಾಂಕ ಪ್ರಕಟ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಹಲವಾರು ವಿಳಂಬಗಳ ನಂತರ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ(ಕೆಸಿಇಟಿ)ಯ ಕೌನ್ಸೆಲಿಂಗ್ ವೇಳಾಪಟ್ಟಿಯನ್ನು ಗುರುವಾರ ಬಿಡುಗಡೆ ಮಾಡಿದೆ.

ವೇಳಾಪಟ್ಟಿಯ ಪ್ರಕಾರ, ಕೆಇಎ ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ಪ್ರಕ್ರಿಯೆಯು ಅಕ್ಟೋಬರ್ 7 ರಂದು ಪ್ರಾರಂಭವಾಗಲಿದೆ ಮತ್ತು ಅಕ್ಟೋಬರ್ 8 ರಂದು ಕೊನೆಗೊಳ್ಳಲಿದೆ.

ಅಕ್ಟೋಬರ್ 7 ರಂದು ಕೆಇಎ ವೆಬ್‌ಸೈಟ್‌ನಲ್ಲಿ ಸೀಟ್ ಮ್ಯಾಟ್ರಿಕ್ಸ್ ಮತ್ತು ಶುಲ್ಕದ ವಿವರವನ್ನು ಪ್ರದರ್ಶಿಸುವ ವ್ಯವಸ್ಥೆ ಮಾಡಲಾಗಿದೆ. ಅಭ್ಯರ್ಥಿಗಳು ಅಕ್ಟೋಬರ್ 7 ರಿಂದ 10 ರ ನಡುವೆ ವೆಬ್‌ಸೈಟ್‌ನಿಂದ ಪರಿಶೀಲನೆ ಸ್ಲಿಪ್‌ಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ದಾಖಲೆಗಳ ಪರಿಶೀಲನೆ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದಾದ ಅಭ್ಯರ್ಥಿಗಳ ಹೆಸರನ್ನು ಇಂದು ಮಧ್ಯಾಹ್ನ 1 ಗಂಟೆಯ ನಂತರ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು ಎಂದು ತಿಳಿಸಲಾಗಿದೆ.

ನೈಜ ಸೀಟು ಹಂಚಿಕೆ ಫಲಿತಾಂಶವನ್ನು ಅಕ್ಟೋಬರ್ 17 ರಂದು ಮಧ್ಯಾಹ್ನ 2 ಗಂಟೆಯ ನಂತರ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು. ಅಭ್ಯರ್ಥಿಗಳು ತಾವು ಆಯ್ಕೆಮಾಡಿದ ಕಾಲೇಜುಗಳಿಗೆ ವರದಿ ಮಾಡಿಕೊಳ್ಳಲು ಅಕ್ಟೋಬರ್ 22 ಕೊನೆಯ ದಿನವಾಗಿದೆ.

ಹೆಚ್ಚಿನ ವಿವರಗಳಿಗಾಗಿ ಕೆಇಎ ವೆಬ್‌ಸೈಟ್ ಪರಿಶೀಲಿಸಿ: http://kea.kar.nic.in/

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.