ರಾಜ್ಯ

ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿಂದು ಸರ್ವಪಕ್ಷ ಸಭೆ: ನ್ಯಾ.ನಾಗಮೋಹನ್ ದಾಸ್ ಆಯೋಗದ ವರದಿ ಕುರಿತು ಚರ್ಚೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಶುಕ್ರವಾರ ಸರ್ವಪಕ್ಷ ಸಭೆ ಕರೆಯಲಾಗಿದೆ. ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿಂದು ಸಭೆ ನಡೆಯಲಿದೆ.

ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿಂದು ಸರ್ವಪಕ್ಷ ಸಭೆ: ನ್ಯಾ.ನಾಗಮೋಹನ್ ದಾಸ್ ಆಯೋಗದ ವರದಿ ಕುರಿತು ಚರ್ಚೆ
ಸಿಎಂ ಬೊಮ್ಮಾಯಿ
Published On :

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಶುಕ್ರವಾರ ಸರ್ವಪಕ್ಷ ಸಭೆ ಕರೆಯಲಾಗಿದೆ. ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿಂದು ಸಭೆ ನಡೆಯಲಿದೆ. ಕಾಂಗ್ರೆಸ್ ನಿಂದ ಭಾರತ್ ಜೋಡೋ ಯಾತ್ರೆ, ಬಿಜೆಪಿಯಿಂದ ಮುಂದಿನ ವಾರ ಆರಂಭವಾಗಲಿರುವ ರಾಜ್ಯಾದ್ಯಂತ ರ್ಯಾಲಿ, ವಿಧಾನಸಭೆ ಚುನಾವಣೆ ಸನ್ನಿಹಿತ ಗಳಿಗೆಯಲ್ಲಿ ಸರ್ವಪಕ್ಷ ಸಭೆ ಮಹತ್ವ ಪಡೆದಿದೆ.

ಜನಸಂಖ್ಯೆಗೆ ಅನುಗುಣವಾಗಿ ಪರಿಶಿಷ್ಟ ಸಮುದಾಯಗಳ ಮೀಸಲಾತಿ ಹೆಚ್ಚಿಸಬೇಕೆಂಬ ಹೋರಾಟದ ಹಿನ್ನೆಲೆಯಲ್ಲಿ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗದ ವರದಿ ಕುರಿತು ಚರ್ಚೆ ನಡೆಯಲಿದೆ. ನಿನ್ನೆ ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ, ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗದ ವರದಿ ಶಿಫಾರಸುಗಳ ಜಾರಿಗೆ ಸರ್ವಪಕ್ಷ ಸಭೆಯಲ್ಲಿ ಒತ್ತಾಯಿಸಲಾಗುವುದು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.