ರಾಜ್ಯ

ಬಾಗಲಕೋಟೆ: ಹಿಂದೂ ಸಂಘಟನೆ ಕಾರ್ಯಕರ್ತರ ಮೇಲೆ ಹಲ್ಲೆ; ಬಾದಾಮಿ ಸಿಪಿಐ ಅಮಾನತು!

ಗಣೇಶ ವಿಸರ್ಜನೆ ವೇಳೆ ನಡೆದಿದ್ದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದ ಬಾದಾಮಿ ಪೊಲೀಸ್ ಠಾಣೆಯ ಸಿಪಿಐ ಕರೆಪ್ಪ ಬನ್ನೆಯವರನ್ನು ಬಾಗಲಕೋಟೆ ಎಸ್ ಪಿ ಜಯಪ್ರಕಾಶ್ ಅಮಾನತು ಮಾಡಿದ್ದಾರೆ.

ಬಾಗಲಕೋಟೆ: ಹಿಂದೂ ಸಂಘಟನೆ ಕಾರ್ಯಕರ್ತರ ಮೇಲೆ ಹಲ್ಲೆ; ಬಾದಾಮಿ ಸಿಪಿಐ ಅಮಾನತು!
ಪೊಲೀಸ್
Published On :

ಬಾಗಲಕೋಟೆ: ಗಣೇಶ ವಿಸರ್ಜನೆ ವೇಳೆ ನಡೆದಿದ್ದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದ ಬಾದಾಮಿ ಪೊಲೀಸ್ ಠಾಣೆಯ ಸಿಪಿಐ ಕರೆಪ್ಪ ಬನ್ನೆಯವರನ್ನು ಬಾಗಲಕೋಟೆ ಎಸ್ ಪಿ ಜಯಪ್ರಕಾಶ್ ಅಮಾನತು ಮಾಡಿದ್ದಾರೆ. 

ಸೆಪ್ಟೆಂಬರ್ 6ರಂದು ಕೆರೂರಿನಲ್ಲಿ ಗಣೇಶ್ ವಿಸರ್ಜನೆ ವೇಳೆ ಘರ್ಷಣೆ ನಡೆದಿತ್ತು. ಗಲಾಟೆ ಬಳಿಕ ಪೊಲೀಸರು ಹಿಂದೂ ಸಂಘಟನೆ ಕಾರ್ಯಕರ್ತರನ್ನು ಬಂಧಿಸಿ ಪೊಲೀಸ್ ಠಾಣೆಗೆ ಕರೆತಂದು ಚಿತ್ರಹಿಂಸೆ ನೀಡಿದ್ದರು ಎನ್ನಲಾಗಿದೆ. 

ಈ ಘಟನೆ ಬಳಿಕ ಜಗದೀಶ್ ಕಾರಂತ ನೇತೃತ್ವದಲ್ಲಿ ಹಿಂದೂ ಜಾಗರಣ ವೇದಿಕೆ ಸಿಪಿಐ ವಿರುದ್ಧ ಕೆರೂರು ಚಲೋ ನಡೆಸಿದ್ದರು. ಇದರ ಬೆನ್ನಲ್ಲೇ ಬಾಗಲಕೋಟೆ ಎಸ್ ಪಿ ಜಯಪ್ರಕಾಶ್ ಸಿಬಿಐ ಅನ್ನು ಅಮಾನತುಗೊಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.