ರಾಜ್ಯ

ತುಳಿತಕ್ಕೊಳಗಾದವರಿಗೆ ಸಮಾನ ಅವಕಾಶ, ಸ್ವಾಭಿಮಾನದ ಬದುಕು ಕಲ್ಪಿಸಲು ಸರ್ಕಾರ ಬದ್ಧ- ಮುಖ್ಯಮಂತ್ರಿ ಬೊಮ್ಮಾಯಿ

ತುಳಿತಕ್ಕೆ ಒಳಪಟ್ಟ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಆತ್ಮಗೌರವ , ಆತ್ಮಸನ್ಮಾನ , ಸಮಾನ ಅವಕಾಶ ಹಾಗೂ ಸ್ವಾಭಿಮಾನದ ಬದುಕು ಕಲ್ಪಿಸಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ತುಳಿತಕ್ಕೊಳಗಾದವರಿಗೆ ಸಮಾನ ಅವಕಾಶ, ಸ್ವಾಭಿಮಾನದ ಬದುಕು ಕಲ್ಪಿಸಲು ಸರ್ಕಾರ ಬದ್ಧ- ಮುಖ್ಯಮಂತ್ರಿ ಬೊಮ್ಮಾಯಿ
ವಾಲ್ಮೀಕಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ ಮತ್ತಿತರರು
Published On :

ಬೆಂಗಳೂರು: ತುಳಿತಕ್ಕೆ ಒಳಪಟ್ಟ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ  ಆತ್ಮಗೌರವ ,  ಆತ್ಮಸನ್ಮಾನ , ಸಮಾನ ಅವಕಾಶ ಹಾಗೂ ಸ್ವಾಭಿಮಾನದ ಬದುಕು ಕಲ್ಪಿಸಲು ಸರ್ಕಾರ  ಬದ್ಧವಾಗಿದೆ ಎಂದು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ವಾಲ್ಮೀಕಿ ಜಯಂತಿಯ ಅಂಗವಾಗಿ ಇಂದು ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪರಿವರ್ತನೆಯ ಹರಿಕಾರ, ಶ್ರೇಷ್ಠ ಮಾನವತಾವಾದಿ, ರಾಮಾಯಣದ ರಚನಕಾರ, ಇಡೀ ಜಗತ್ತಿಗೆ ದಾರಿದೀಪವಾಗಿರುವ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅತ್ಯಂತ ವಿಜೃಂಭಣೆಯಿಂದ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ. ಮಹರ್ಷಿ ವಾಲ್ಮೀಕಿ ಅವರ ತತ್ವ ಆದರ್ಶಗಳನ್ನು ಸರ್ಕಾರ, ಸಮಾಜ ಪ್ರತಿಯೊಬ್ಬರೂ ಅಳವಡಿಸಿಕೊಳ್ಳಲು ಅಗತ್ಯವಿರುವ ಕಾರ್ಯಕ್ರಮಗಳನ್ನು  ರೂಪಿಸುತ್ತಿದ್ದೇವೆ ಎಂದು ತಿಳಿಸಿದರು.

ಮಹರ್ಷಿ ವಾಲ್ಮೀಕಿ ಅವರ ರಾಮಾಯಣ ವಿಶ್ವದ ಹತ್ತು ಶ್ರೇಷ್ಠ ಗ್ರಂಥಗಳಲ್ಲಿ ಒಂದಾಗಿದೆ.  ರಾಮಾಯಣ ರಚಿಸಿ ಜೀವನದ ಮಾರ್ಗ ಮತ್ತು ಸಾರವನ್ನು ವಾಲ್ಮೀಕಿ ಕೊಟ್ಟಿದ್ದಾರೆ. ರಾಮಾಯಣದ ಎಲ್ಲಾ ಪ್ರಸಂಗಗಳು ಅನುಕರಣೀಯ. ಮುಖ್ಯಮಂತ್ರಿಯಾಗಿ ಮಹರ್ಷಿ ವಾಲ್ಮೀಕಿಯವರ ತತ್ವ, ಆದರ್ಶಗಳನ್ನು ಆಡಳಿತದಲ್ಲಿ ಅಳವಡಿಸಿಕೊಳ್ಳುತ್ತೇವೆ ಎಂದರು.

ಈ ಸಂದರ್ಭದಲ್ಲಿ ಸಚಿವರಾದ ಗೋವಿಂದ ಕಾರಜೋಳ, ಬಿ‌. ಶ್ರೀರಾಮುಲು, ವಾಲ್ಮೀಕಿ ಗುರು ಪೀಠದ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿ, ಭೋವಿ ಪೀಠದ  ಸಿದ್ದರಾಮೇಶ್ವರ ಸ್ವಾಮೀಜಿ ಮತ್ತಿತರರು ಹಾಜರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.