ಮೈಸೂರು: ‘ದಸರಾ ವಿದ್ಯುತ್ ದೀಪಾಲಂಕಾರ’ ಎರಡು ದಿನ ಮುಂದುವರಿಕೆ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ನಗರದ ಪ್ರಮುಖ ರಸ್ತೆಗಳು ಮತ್ತು ವೃತ್ತಗಳಿಗೆ ಮಾಡಿರುವ ವಿದ್ಯುತ್ ದೀಪಲಂಕಾರವನ್ನು ಅಕ್ಟೋಬರ್ 12 ರವರೆಗೆ ಮುಂದುವರೆಸಲು ನಿರ್ಧರಿಸಲಾಗಿದೆ...

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ನಗರದ ಪ್ರಮುಖ ರಸ್ತೆಗಳು ಮತ್ತು ವೃತ್ತಗಳಿಗೆ ಮಾಡಿರುವ ವಿದ್ಯುತ್ ದೀಪಲಂಕಾರವನ್ನು ಅಕ್ಟೋಬರ್ 12 ರವರೆಗೆ ಮುಂದುವರೆಸಲು ನಿರ್ಧರಿಸಲಾಗಿದೆ ಎಂದು ಸೆಸ್ಕ್ ನಿರ್ದೇಶಕ ಜಯವಿಭವಸ್ವಾಮಿ ಹಾಗೂ ದಸರಾ ವಿದ್ಯುತ್ ದೀಪಾಲಂಕಾರ ಉಪ ಸಮಿತಿ ಅಧ್ಯಕ್ಷ ಟಿ. ರಮೇಶ್ ಅವರು ಸೋಮವಾರ ತಿಳಿಸಿದ್ದಾರೆ.
ಅಕ್ಟೋಬರ್ 12 ರವರೆಗೆ ಮೈಸೂರು ದಸರಾ ವಿದ್ಯುತ್ ದೀಪಾಲಂಕಾರ ಮುಂದುವರೆಯಲಿದೆ. ದಸರಾ ಹಿನ್ನೆಲೆ ಮೈಸೂರಿನ ಪ್ರಮುಖ ರಸ್ತೆಗಳಲ್ಲಿ ವಿದ್ಯುತ್ ದೀಪ, ಬಣ್ಣ ಬಣ್ಣದ ಲೈಂಟಿಗ್ಸ್ ಹಾಕಲಾಗಿತ್ತು. ಇದರಿಂದ ಮೈಸೂರು ನಗರ ಝಗಮಗಿಸುತ್ತಿತ್ತು. ಲಕ್ಷಾಂತರ ಮಂದಿ ಪ್ರವಾಸಿಗರು ಇದನ್ನು ಕಣ್ತುಂಬಿಕೊಂಡಿದ್ದರು.
ಇದೀಗ ಎರಡು ದಿನ ದಸರಾ ವಿದ್ಯುತ್ ದೀಪಾಲಂಕಾರ ವಿಸ್ತರಣೆ ಮಾಡಲಾಗಿದ್ದು, ಈ ಮೂಲಕ ಪ್ರವಾಸಿಗರು, ಮೈಸೂರಿನ ಜನತೆ ಇನ್ನೂ ಎರಡು ದಿನ ಮೈಸೂರು ವಿದ್ಯುತ್ ದೀಪಾಲಂಕಾರದ ಸೊಬಗನ್ನು ಕಣ್ತುಂಬಿಕೊಳ್ಳಬಹುದಾಗಿದೆ.
ದಸರಾ ದೀಪಾಲಂಕಾರವನ್ನು ಮುಂದುವರಿಸುವಂತೆ ಬೇಡಿಕೆ ಬಂದಿರುವುದರಿಂದ ಸೆಸ್ಕ್ ಸ್ಪಂದಿಸಿದೆ. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ನಿರ್ದೇಶನದಂತೆ ಮತ್ತೆ ಎರಡು ದಿನ ಮುಂದುವರೆಸಲಾಗಿದೆ ಎಂದು ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


