ಬೆಂಗಳೂರು: ಕಟ್ಟಡದ ಸೀಲಿಂಗ್ ಕುಸಿದು ಇಬ್ಬರ ಸಾವು, 3 ಕಾರ್ಮಿಕರಿಗೆ ಗಾಯ
ಕಟ್ಟಡವೊಂದರ ಸೀಲಿಂಗ್ ಕುಸಿದ ಪರಿಣಾಮ ಇಬ್ಬರು ಸಾವನ್ನಪ್ಪಿ ಮೂರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನಲ್ಲಿ ಮಂಗಳವಾರ ನಡೆದಿದೆ.

ಬೆಂಗಳೂರು: ಕಟ್ಟಡವೊಂದರ ಸೀಲಿಂಗ್ ಕುಸಿದ ಪರಿಣಾಮ ಇಬ್ಬರು ಸಾವನ್ನಪ್ಪಿ ಮೂರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನಲ್ಲಿ ಮಂಗಳವಾರ ನಡೆದಿದೆ.
ಬೆಂಗಳೂರಿನ ಮಹದೇವಪುರದ ಹೂಡಿ ಬಳಿ ಮಂಗಳವಾರ ಬೆಳಗ್ಗೆ ತೆರವು ಮಾಡುತ್ತಿದ್ದ ಕಟ್ಟಡದ ಸೀಲಿಂಗ್ ಕುಸಿದು ಬಿದ್ದ ಪರಿಣಾಮ ಇಬ್ಬರು ಕೂಲಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಂತೆಯೇ ಮೂರು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತ ಕೂಲಿ ಕಾರ್ಮಿಕರನ್ನು 27 ವರ್ಷದ ಅರ್ಮಾನ್ ಮತ್ತು 38 ವರ್ಷದ ಜೈನುದ್ದೀನ್ ಎಂದು ಗುರುತಿಸಲಾಗಿದ್ದು, ಮೃತ ಕಾರ್ಮಿಕರಿಬ್ಬರೂ ಬಿಹಾರ ಮೂಲದವರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಮಹದೇವಪುರದ ಗ್ರಾಫೈಟ್ ಇಂಡಿಯಾ ಬಳಿ ಖಾಸಗಿ ಕಂಪನಿಗೆ ಸೇರಿದ ಕಟ್ಟಡ ತೆರವು ಹಂತದಲ್ಲಿತ್ತು. ತೆರವು ಕಾರ್ಯಕ್ಕೆ ನಿಯೋಜನೆಗೊಂಡಿದ್ದ ಅರ್ಮಾನ್, ಜೈನುದ್ದೀನ್ ಸೇರಿದಂತೆ ಐವರು ಕಾರ್ಮಿಕರು ಕಟ್ಟಡದಲ್ಲಿ ಮಲಗಿದ್ದರು. ರಾತ್ರಿ ಮಳೆ ಬಂದಿದ್ದರಿಂದ ಕೆಳ ಅಂತಸ್ತಿನಲ್ಲಿ ಎಲ್ಲರೂ ಮಲಗಿದ್ದರು. ಮುಂಜಾನೆ 5 ಗಂಟೆ ಸುಮಾರಿಗೆ ಕಟ್ಟಡದ ಚಾವಣಿ ಏಕಾಏಕಿ ಕುಸಿದಿದ್ದು, ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ದುರ್ಘಟನೆ ತಿಳಿದ ತಕ್ಷಣ ಕಟ್ಟಡಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಇತರ ಮೂವರು ಕಾರ್ಮಿಕರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಹದೇವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


