ಮೈಸೂರು ದಸರಾ ಮಾದರಿಯಲ್ಲಿ ಹಾಸನಾಂಬ ದೇಗುಲದ ಹಬ್ಬ!
ಗುರುವಾರದಿಂದ ಹಾಸನಾಂಬ ದೇವಾಲಯ ಸಾರ್ವಜನಿಕರಿಗೆ ಮುಕ್ತವಾಗಲಿದ್ದು, ಜಿಲ್ಲಾಡಳಿತ ಸಕಲ ಸಿದ್ಧತೆಗಳೂ ನಡೆಸಿವೆ.

ಹಾಸನ: ಗುರುವಾರದಿಂದ ಹಾಸನಾಂಬ ದೇವಾಲಯ ಸಾರ್ವಜನಿಕರಿಗೆ ಮುಕ್ತವಾಗಲಿದ್ದು, ಜಿಲ್ಲಾಡಳಿತ ಸಕಲ ಸಿದ್ಧತೆಗಳೂ ನಡೆಸಿವೆ. ಹಾಸನಾಂಬ ದೇವಾಲಯದಲ್ಲಿ ಹಬ್ಬದ ಆಚರಣೆಗಳು 13 ದಿನಗಳು ನಡೆಯಲಿದ್ದು, ಅ.26 ರಂದು ದೇವಾಲಯ ಬಂದ್ ಆಗಲಿದೆ.
ಹಾಸನ ಸಹಾಯಕ ಆಯುಕ್ತ ಜಗದೀಶ್ ಅವರ ನೇತೃತ್ವದ ದೇವಾಲಯ ನಿರ್ವಹಣಾ ಸಮಿತಿ ದೇವಾಲಯಕ್ಕೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಭೇಟಿ ನೀಡುವ ಭಕ್ತಾದಿಗಳಿಗೆ ಸಕಲ ರೀತಿಯ ವ್ಯವಸ್ಥೆಗಳನ್ನೂ ಮಾಡಿದೆ. ದೇವಾಲಯಕ್ಕೆ ಭೇಟಿ ನೀಡಿದ ಬಳಿಕ ಜಿಲ್ಲಾಧಿಕಾರಿ ಎಂಎಸ್ ಅರ್ಚನ ಹಿರಿಯ ಅಧಿಕಾರಿಗಳ ಸಭೆ ನಡೆಸಿದ್ದು, ಇದೇ ಮೊದಲ ಬಾರಿಗೆ ದಸರಾ ಮಾದರಿಯಲ್ಲಿ 11 ದಿನಗಳ ಕಾಲ ಹಾಸನಾಂಬ ಹಬ್ಬವನ್ನು ಆಚರಿಸಲು ಜಿಲ್ಲಾಡಳಿತ ನಿರ್ಧರಿಸಿದೆ.
ನಗರದ ಪ್ರಮುಖ ವೃತ್ತಗಳು, ಬಡಾವಣೆಗಳಿಗೆ ದೀಪಾಲಂಕಾರ ಇರಲಿದ್ದು, ಆನೆ, ಕುದುರೆ, ಸಿಂಹಗಳ ಪ್ರತಿಕೃತಿಗಳನ್ನು ಸ್ಥಾಪಿಸಲಾಗುತ್ತದೆ. ಕಳೆದ ಎರಡು ವರ್ಷಗಳ ಕಾಲ ಜಿಲ್ಲಾಡಳಿತ ಹಾಸನಾಂಬ ಹಬ್ಬವನ್ನು ಸರಳವಾಗಿ ಆಚರಿಸಿತ್ತು. ಈ ವರ್ಷ ಹಾಸನಾಂಬ ದೇವಾಲಯಕ್ಕೆ ಬೃಹತ್ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸುವ ಸಾಧ್ಯತೆ ಇದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


