ಯಶಸ್ವಿನಿ ಯೋಜನೆ ಮರು ಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶ, ನವೆಂಬರ್ 1 ರಿಂದ ನೋಂದಣಿ ಆರಂಭ
ರೈತರು ಹಾಗೂ ಬಡವರಿಗಾಗಿ ರಾಜ್ಯ ಸರ್ಕಾರ ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ಮರು ಜಾರಿಗೊಳಿಸಿ ಬುಧವಾರ ಆದೇಶ ಹೊರಡಿಸಿದ್ದು, ನವೆಂಬರ್ 1 ರಿಂದ ನೋಂದಣಿ ಆರಂಭವಾಗಲಿದೆ.

ಬೆಂಗಳೂರು: ರೈತರು ಹಾಗೂ ಬಡವರಿಗಾಗಿ ರಾಜ್ಯ ಸರ್ಕಾರ ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ಮರು ಜಾರಿಗೊಳಿಸಿ ಬುಧವಾರ ಆದೇಶ ಹೊರಡಿಸಿದ್ದು, ನವೆಂಬರ್ 1 ರಿಂದ ನೋಂದಣಿ ಆರಂಭವಾಗಲಿದೆ.
ಯಶಸ್ವಿನಿ ಯೋಜನೆಗಾಗಿ ರೈತರು ಹಾಗೂ ಸಹಕಾರಿ ಸಂಘಗಳು ಬೇಡಿಕೆ ಮುಂದಿಟ್ಟಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಯಶಸ್ವಿನಿ ಯೋಜನೆಯನ್ನು ಮರು ಜಾರಿಗೊಳಿಸಿ ಆದೇಶ ಹೊರಡಿಸಿದೆ. ಇದಕ್ಕಾಗಿ 2022-23ನೇ ಬಜೆಟ್ ನಲ್ಲಿ 300 ಕೋಟಿ ಘೋಷಣೆ ಮಾಡಲಾಗಿದೆ.
ಯಶಸ್ವಿನಿ ಯೋಜನೆ ಅಡಿ ಫಲಾನುಭವಿ ಕುಟುಂಬಕ್ಕೆ ವಾರ್ಷಿಕ ವೈದ್ಯಕೀಯ ಚಿಕಿತ್ಸೆ ವೆಚ್ಚ 5 ಲಕ್ಷ ರೂಪಾಯಿ ನಿಗದಿ ಮಾಡಲಾಗಿದೆ. 4 ಸದಸ್ಯರ ಕುಟುಂಬಕ್ಕೆ ವರ್ಷಕ್ಕೆ 500 ರೂಪಾಯಿ ವಂತಿಕೆ ಕಟ್ಟಬೇಕಾಗಿದೆ.
ನೊಂದಣಿ ಪ್ರಕ್ರಿಯೆಯನ್ನು ನವೆಂಬರ್ 1, 2022 ರಿಂದ ಪ್ರಾರಂಭವಾಗಲಿದೆ. ಯಶಸ್ವಿ ಯೋಜನೆ ಅವಧಿ 01-01-2023 ರಿಂದ 30-12-2023 ರವರೆಗೂ ಜಾರಿಯಲ್ಲಿರುತ್ತದೆ. 1650 ಖಾಯಿಲೆಗಳಿಗೆ ಈ ಯೋಜನೆ ಅಡಿ ಚಿಕಿತ್ಸೆ ನೀಡಲಾಗುತ್ತದೆ.
ಇದನ್ನು ಓದಿ: ಗುತ್ತಿಗೆ ಹಾಗೂ ಹೊರ ಗುತ್ತಿಗೆ ನೌಕರರ ವೇತನ ಪರಿಷ್ಕರಣೆಗೆ ಪ್ರಯತ್ನ, ಆರೋಗ್ಯ ವಿಮೆ ವಿಸ್ತರಣೆ: ಸಚಿವ ಸುಧಾಕರ್
ಮಾರ್ಗಸೂಚಿ ಪ್ರಕಾರ, ಸಹಕಾರ ಸಂಘಗಳ ಸದಸ್ಯರು, ಗ್ರಾಮೀಣ ಸ್ವ ಸಹಾಯ ಗುಂಪುಗಳ ಸದಸ್ಯರು ಮತ್ತು ಅವರ ಕುಟುಂಬ ವರ್ಗದವರು, ಸಹಕಾರಿ ಮೀನುಗಾರರು, ಸಹಕಾರಿ ಬೀಡಿ ಕಾರ್ಮಿಕರು, ಸಹಕಾರಿ ನೇಕಾರರಿಗೆ ಈ ಯೋಜನೆ ಅನ್ವಯವಾಗಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


