ಟ್ಯಾಕ್ಸಿ ಕಂಪನಿಗಳು ಸರ್ಕಾರ ನಿಗದಿಪಡಿಸಿದ ದರದ ಮೇಲೆ ಶೇ. 10 ಹೆಚ್ಚುವರಿ ಹಾಗೂ ಜಿಎಸ್ ಟಿ ವಿಧಿಸಲು ಹೈಕೋರ್ಟ್ ಅಸ್ತು
ಆಪ್ ಆಧಾರಿತ ಆಟೋರಿಕ್ಷಾ ಸೇವೆಗಳಿಗೆ ದರ ನಿಗದಿಪಡಿಸುವ ಕುರಿತು ರಾಜ್ಯ ಸರ್ಕಾರ ನಡೆಸಿದ ಹೊಸ ಸುತ್ತಿನ ಮಾತುಕತೆಯಲ್ಲಿ ಯಾವುದೇ ಒಮ್ಮತದ ನಿರ್ಧಾರಕ್ಕೆ ಬರದ ಕಾರಣ, ಹೈಕೋರ್ಟ್ ಶುಕ್ರವಾರ ಟ್ಯಾಕ್ಸಿ ಸಂಸ್ಥೆಗಳು ಆಟೋರಿಕ್ಷಾ...

ಬೆಂಗಳೂರು: ಆಪ್ ಆಧಾರಿತ ಆಟೋರಿಕ್ಷಾ ಸೇವೆಗಳಿಗೆ ದರ ನಿಗದಿಪಡಿಸುವ ಕುರಿತು ರಾಜ್ಯ ಸರ್ಕಾರ ನಡೆಸಿದ ಹೊಸ ಸುತ್ತಿನ ಮಾತುಕತೆಯಲ್ಲಿ ಯಾವುದೇ ಒಮ್ಮತದ ನಿರ್ಧಾರಕ್ಕೆ ಬರದ ಕಾರಣ, ಹೈಕೋರ್ಟ್ ಶುಕ್ರವಾರ ಟ್ಯಾಕ್ಸಿ ಸಂಸ್ಥೆಗಳು ಆಟೋರಿಕ್ಷಾ ಸೇವೆಗೆ ಸರ್ಕಾರ ನಿಗದಿಪಡಿಸಿದ ದರದ ಮೇಲೆ ಶೇ. 10 ಹೆಚ್ಚುವರಿ ಹಾಗೂ ಜಿಎಸ್ ಟಿ ವಿಧಿಸಲು ಅನುಮತಿ ನೀಡಿದೆ.
ಆಪ್ ಆಧಾರಿತ ಆಟೋರಿಕ್ಷಾ ಸೇವೆಗಳಿಗೆ ದರ ನಿಗದಿ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ನ್ಯಾಯಮೂರ್ತಿ ಎಂಜಿಎಸ್ ಕಮಲ್ ಅವರು ಇಂದು ಮಧ್ಯಂತರ ಆದೇಶ ಹೊರಡಿಸಿದ್ದು, 15 ದಿನಗಳಲ್ಲಿ ದರ ನಿಗದಿಪಡಿಸುವಂತೆ ಮತ್ತು ಓಲಾ, ಉಬರ್ ಕಂಪನಿಗಳಿಗೆ ಅನುಕೂಲಕರ ದರವನ್ನು ವಿಧಿಸಬೇಕು ಎಂದು ಹೈಕೋರ್ಟ್ ಸರ್ಕಾರಕ್ಕೆ ಸೂಚಿಸಿದೆ.
ಈ ಕಂಪನಿಗಳ ವಿರುದ್ಧ ರಾಜ್ಯ ಸರ್ಕಾರ ಯಾವುದೇ ಬಲವಂತದ ಕ್ರಮ ಕೈಗೊಳ್ಳುವಂತೆ ಇಲ್ಲ ಮತ್ತು ಕಂಪನಿಗಳ ಪರವಾನಿಗೆ ಕಾಲಾವಕಾಶ ವಿಸ್ತರಿಸುವಂತೆ ಆದೇಶಿಸಿ ಈ ಪ್ರಕರಣದ ವಿಚಾರಣೆಯನ್ನು ನವೆಂಬರ್ 7ಕ್ಕೆ ಮುಂದೂಡಿದೆ.
ಇದಕ್ಕೂ ಮುನ್ನ ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ ನಾವಡಗಿ ಅವರು ಗುರುವಾರ ನಡೆದ ಸಭೆಯಲ್ಲಿ ವಿಧಿಸಬೇಕಾದ ದರದ ಕುರಿತು ಯಾವುದೇ ಒಮ್ಮತಕ್ಕೆ ಬರಲಿಲ್ಲ ಮತ್ತು ಸಮಸ್ಯೆಯನ್ನು ಪರಿಹರಿಸಲು ಸರ್ಕಾರಕ್ಕೆ ಗರಿಷ್ಠ 15 ದಿನಗಳ ಕಾಲಾವಕಾಶ ಬೇಕಾಗುತ್ತದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು.
ನಾಳೆಯಿಂದ ಸುಮಾರು ಎರಡು ಕಿ.ಮೀ.ಯವರೆಗಿನ ಆಪ್ ಆಧಾರಿತ ಆಟೋ ಪ್ರಯಾಣಕ್ಕೆ 30 ರೂಪಾಯಿ ದರದ ಜತೆಗೆ, ಶೇಕಡ 10 ರಷ್ಟು ಹೆಚ್ಚುವರಿ ಹಾಗೂ ಜಿಎಸ್‌ಟಿಯೂ ಇರಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


