ಬೆಂಗಳೂರು: ಸೋದರ ಸಂಬಂಧಿ ಸಾವಿನಿಂದ ಮನನೊಂದು ಮಹಿಳೆ ಆತ್ಮಹತ್ಯೆ
ಸೋದರ ಸಂಬಂಧಿ ಆತ್ಮಹತ್ಯೆಯಿಂದ ಮನನೊಂದಿದ್ದ ಮಹಿಳೆಯೊಬ್ಬರು ತಾವು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಾಗಡಿ ಮುಖ್ಯರಸ್ತೆಯ ರಾಜೀವ್ ಗಾಂಧಿ ನಗರದಲ್ಲಿ ನಡೆದಿದೆ.

ಬೆಂಗಳೂರು: ಸೋದರ ಸಂಬಂಧಿ ಆತ್ಮಹತ್ಯೆಯಿಂದ ಮನನೊಂದಿದ್ದ ಮಹಿಳೆಯೊಬ್ಬರು ತಾವು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಾಗಡಿ ಮುಖ್ಯರಸ್ತೆಯ ರಾಜೀವ್ ಗಾಂಧಿ ನಗರದಲ್ಲಿ ನಡೆದಿದೆ.
ಮೃತರನ್ನು ಏಳುಮಲೈ ಅಜಿತ್ (23) ಮತ್ತು ಆತನ ಸೋದರತ್ತೆ ವನಿತಾ (32) ಎಂದು ಗುರುತಿಸಲಾಗಿದೆ. ಅಜಿತ್ ಪೋಷಕರು ತಮಿಳುನಾಡಿನ ತಿರುವಣ್ಣಾಮಲೈನಲ್ಲಿ ನೆಲೆಸಿದ್ದಾರೆ.
ಅಜಿತ್ ಬಾಲ್ಯದಿಂದಲೂ ವನಿತಾ ಅವರ ಮನೆಯಲ್ಲಿಯೇ ಇದ್ದನು. ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಆತ ಭಾನುವಾರ ಮಧ್ಯಾಹ್ನ ನೇಣು ಹಾಕಿಕೊಂಡು ಸಾವನ್ನಪ್ಪಿದ್ದ. ಮರುದಿನ ಬೆಳಗ್ಗೆ ಅಜಿತ್‌ನ ಸಾವಿನಿಂದ ಮನನೊಂದಿದ್ದ ಆಕೆ, ಮನೆಯಲ್ಲಿ ಅಂತ್ಯ ಸಂಸ್ಕಾರದ ವಿಧಿವಿಧಾನಗಳು ನಡೆಯುತ್ತಿದ್ದಾಗ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ವ್ಯಾಪ್ತಿಯ ಪೊಲೀಸರು ಅಸಹಜ ಸಾವಿನ ಪ್ರಕರಣಗಳನ್ನು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


