ಹಾಸನ: ಸರಣಿ ಅಪಘಾತ, ನಾಲ್ವರು ಮಕ್ಕಳು ಸೇರಿದಂತೆ 9 ಜನರ ದುರ್ಮರಣ
ಸರ್ಕಾರಿ ಬಸ್, ಟೆಂಪೋ ಟ್ರಾವೆಲರ್, ಟ್ಯಾಂಕರ್ ನಡುವೆ ಡಿಕ್ಕಿ ಸಂಭವಿಸಿ ನಾಲ್ವರು ಮಕ್ಕಳು ಸೇರಿದಂತೆ 9 ಜನರು ದುರ್ಮರಣ ಹೊಂದಿರುವ ಘಟನೆ ಅರಸೀಕೆರೆ ತಾಲೂಕಿನ ಗಾಂಧಿನಗರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 69ರಲ್ಲಿ ಶನಿವಾರ ರಾತ್ರಿ ಸಂಭವಿಸಿದೆ.

ಹಾಸನ: ಸರ್ಕಾರಿ ಬಸ್, ಟೆಂಪೋ ಟ್ರಾವೆಲರ್, ಟ್ಯಾಂಕರ್ ನಡುವೆ ಡಿಕ್ಕಿ ಸಂಭವಿಸಿ ನಾಲ್ವರು ಮಕ್ಕಳು ಸೇರಿದಂತೆ 9 ಜನರು ದುರ್ಮರಣ ಹೊಂದಿರುವ ಘಟನೆ ಅರಸೀಕೆರೆ ತಾಲೂಕಿನ ಗಾಂಧಿನಗರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 69ರಲ್ಲಿ ಶನಿವಾರ ರಾತ್ರಿ ಸಂಭವಿಸಿದೆ.
ಸರ್ಕಾರಿ ಬಸ್ ಮತ್ತು ಟ್ಯಾಂಕರ್ ನಡುವೆ ಸಿಲುಕಿದ ಟೆಂಪೋ ಟ್ರಾವೆಲರ್ ನಜ್ಜು ಗುಜ್ಜಾಗಿದ್ದು, ಸ್ಥಳದಲ್ಲಿಯೇ ಐವರು ಮೃತಪಟ್ಟಿದ್ದಾರೆ. ಉಳಿದ ನಾಲ್ವರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಸಾವನ್ನಪ್ಪಿದ್ದಾರೆ. ಮೃತರೆಲ್ಲರೂ ಅರಸೀಕೆರೆ ತಾಲೂಕಿನ ಬಾಣವಾರ ಗ್ರಾಮದವರು ಎನ್ನಲಾಗಿದೆ.
ಟೆಂಪೋ ಟ್ರಾವೆಲರ್ ನಲ್ಲಿದ್ದವರು ಧರ್ಮಸ್ಥಳಕ್ಕೆ ಹೋಗಿ ತಮ್ಮೂರಿಗೆ ಹಿಂತಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಇನ್ನೂ ಐದಾರು ಕಿಲೋಮೀಟರ್ ಕ್ರಮಿಸಿದ್ದರೆ ಊರು ತಲುಪುತ್ತಿದ್ದರು ಅಷ್ಟರಲ್ಲಿ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಮೃತರಲ್ಲಿ ನಾಲ್ವರು ಮಕ್ಕಳು ಕೂಡಾ ಸೇರಿದ್ದಾರೆ.
ಸಾವಿನ ಸಂಖ್ಯೆ ಮತ್ತಷ್ಟ ಹೆಚ್ಟಾಗುವ ಸಾಧ್ಯತೆಯಿದೆ. ಗಾಯಾಳುಗಳನ್ನು ಹಾಸನ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಬಾಣಾವರ ಠಾಣೆ ಪೊಲೀಸರ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


