ಭಾರತ್ ಜೋಡೋ ಯಾತ್ರೆ: ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ; ಬಳ್ಳಾರಿಯಲ್ಲಿ ರಾಹುಲ್ ಗಾಂಧಿ ಹೇಳಿಕೆ!
ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಪ್ರತಿಪಾದಿಸಿದ್ದಾರೆ.

ಬೆಂಗಳೂರು: ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಪ್ರತಿಪಾದಿಸಿದ್ದಾರೆ.
ಇತ್ತೀಚೆಗೆ ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ಇತ್ತೀಚೆಗೆ ಅವರು ಪ್ರಾದೇಶಿಕ ಭಾಷೆ ಸಾರ್ವಭೌಮತೆ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಸಂವಾದದಲ್ಲಿ ಭಾಗವಹಿಸಿದ್ದ ಯುವತಿಯೊಬ್ಬರು ತಾನು ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ್ದೇನೆ. ಕೇಂದ್ರ ಸರ್ಕಾರದ ಹುದ್ದೆಗಳನ್ನು ನೀಡಲು ಆಯೋಜಿಸುವ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹಿಂದಿ, ಇಂಗ್ಲಿಷ್ ಮಾತ್ರವೇ ಇರುತ್ತದೆ. ಇದರಿಂದ ಕನ್ನಡದಲ್ಲಿ ಪರೀಕ್ಷೆ ಬರೆಯಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದರು.
ಈ ಮಾತಿಗೆ ಪ್ರತಿಕ್ರಿಯಿಸಿದ ರಾಹುಲ್ ಗಾಂಧಿ ಅಭ್ಯರ್ಥಿ ಕೇಳುವ ಭಾಷೆಯಲ್ಲಿಯೇ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಬೇಕು. ಇದು ಕರ್ತವ್ಯ. ನೀವು ಕನ್ನಡದಲ್ಲಿಯೇ ಸಂವಹನ ಮಾಡಲು ಬಯಸುವುದು ನಿಮ್ಮ ಹಕ್ಕು. ಭಾಷೆಯಲ್ಲಿ ಕಲ್ಪನೆಯಿದೆ. ಭರವಸೆಯಿದೆ. ಭಾಷೆಗೆ ಇತಿಹಾಸವಿದೆ. ಪ್ರತಿ ರಾಜ್ಯಕ್ಕೂ ತನ್ನ ಭಾಷೆ ಬಳಸುವ ಸ್ವಾತಂತ್ರ್ಯವಿರಬೇಕು ಎಂದು ಪ್ರತಿಪಾದಿಸಿದರು.
ಹಿಂದಿಯೇ ರಾಷ್ಟ್ರೀಯ ಸಾರ್ವಭೌಮ ಭಾಷೆ ಎನ್ನುವಂತೆ ಪ್ರತಿಪಾದಿಸುವವರ ನಡುವೆ ರಾಹುಲ್ ಗಾಂದಿ ಅವರ ನಿಲುವು ವಿಭಿನ್ನವಾಗಿರುವುದು, ಆಯಾ ರಾಜ್ಯಗಳ ಭಾಷೆಗೆ ಪ್ರಾಮುಖ್ಯತೆ ನೀಡಬೇಕು ಎನ್ನುವ ಅವರ ನಿಲುವು ಪ್ರಶಂಸೆಗೆ ಪಾತ್ರವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


