ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಡಿಜಿಟಲ್ ಬ್ಯಾಂಕಿಂಗ್ ಘಟಕಗಳಿಗೆ ಚಾಲನೆ
ಪ್ರಧಾನಿ ನರೇಂದ್ರ ಮೋದಿ ಅವರ ಡಿಜಿಟಲ್ ಇಂಡಿಯಾ ಕನಸಿಗೆ ಪುಷ್ಟಿ ನೀಡುವ ಹಾಗೂ ಭಾರತದಲ್ಲಿ ಡಿಜಿಟಲ್ ಬ್ಯಾಂಕಿಂಗ್ ವ್ಯವಸ್ಥೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಬೆಂಗಳೂರು ಗ್ರಾಮಾಂತರ, ಮೈಸೂರು, ರಾಯಚೂರು ಹಾಗೂ ಮಂಗಳೂರು ಜಿಲ್ಲೆಗಳಲ್ಲಿ ಡಿಜಿಟಲ್ ಬ್ಯಾಂಕಿಂಗ್ ಘಟಕಗಳಿಗೆ ಭಾನುವಾರ ಚಾಲನೆ ದೊರೆಯಿತು.

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಡಿಜಿಟಲ್ ಇಂಡಿಯಾ ಕನಸಿಗೆ ಪುಷ್ಟಿ ನೀಡುವ ಹಾಗೂ ಭಾರತದಲ್ಲಿ ಡಿಜಿಟಲ್ ಬ್ಯಾಂಕಿಂಗ್ ವ್ಯವಸ್ಥೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಬೆಂಗಳೂರು ಗ್ರಾಮಾಂತರ, ಮೈಸೂರು, ರಾಯಚೂರು ಹಾಗೂ ಮಂಗಳೂರು ಜಿಲ್ಲೆಗಳಲ್ಲಿ ಡಿಜಿಟಲ್ ಬ್ಯಾಂಕಿಂಗ್ ಘಟಕಗಳಿಗೆ ಭಾನುವಾರ ಚಾಲನೆ ದೊರೆಯಿತು.
ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಕೆನರಾ ಬ್ಯಾಂಕ್ ಸ್ಥಾಪಿಸಿರುವ ಡಿಜಿಟಲ್ ಬ್ಯಾಂಕಿಂಗ್ ಘಟಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕೆನರಾ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಲಿಂಗಂ ಪ್ರಭಾಕರ್ ಮತ್ತಿತರರು ಉಪಸ್ಥಿತರಿದ್ದರು.
ತಡೆರಹಿತ ಬ್ಯಾಂಕಿಂಗ್ ಸೇವೆಗಳನ್ನು ಪಡೆಯಲು ಅನುವು ಮಾಡಿಕೊಡುವ ಸುಧಾರಿತ ಮತ್ತು ಅನುಕೂಲಕರ ಡಿಜಿಟಲ್ ಸೌಲಭ್ಯಗಳನ್ನು ಆರಂಭಿಸಲಾಗಿದ್ದು, ಜನರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಶೋಭಾ ಕರಂದ್ಲಾಜೆ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


