ರಾಜ್ಯ

ಮೀನುಗಾರರ ಹಿತರಕ್ಷಣೆಗೆ ರಾಜ್ಯ ಸರ್ಕಾರ ಸಂಪೂರ್ಣ ಬದ್ಧ: ಸಚಿವ ಎಸ್. ಅಂಗಾರ

ಮೀನುಗಾರರ ಹಿತರಕ್ಷಣೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ಸಂಪೂರ್ಣ ಬದ್ಧವಾಗಿದೆ ಎಂದು ಬಂದರು, ಮೀನುಗಾರಿಕೆ, ಒಳನಾಡು ಜಲಸಾರಿಗೆ ಸಚಿವ ಎಸ್‌. ಅಂಗಾರ ತಿಳಿಸಿದ್ದಾರೆ.

ಮೀನುಗಾರರ ಹಿತರಕ್ಷಣೆಗೆ ರಾಜ್ಯ ಸರ್ಕಾರ ಸಂಪೂರ್ಣ ಬದ್ಧ: ಸಚಿವ ಎಸ್. ಅಂಗಾರ
ಸಚಿವ ಎನ್.ಅಂಗಾರ
Published On :

ಬೆಂಗಳೂರು: ಮೀನುಗಾರರ ಹಿತರಕ್ಷಣೆಗೆ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ಸಂಪೂರ್ಣ ಬದ್ಧವಾಗಿದೆ ಎಂದು ಬಂದರು, ಮೀನುಗಾರಿಕೆ, ಒಳನಾಡು ಜಲಸಾರಿಗೆ ಸಚಿವ ಎಸ್‌. ಅಂಗಾರ ತಿಳಿಸಿದ್ದಾರೆ.

ಮೀನುಗಾರರಿಗೆ ವಸತಿ ಸೌಲಭ್ಯ, ಸಹಾಯ ಧನ ಹಾಗೂ ಮೀನುಗಾರಿಕೆ ರಫ್ತು ಹೆಚ್ಚಳಕ್ಕೆ ಕ್ರಮ ವಹಿಸುವ ಜತೆ ವಿದ್ಯಾನಿಧಿ ಯೋಜನೆಯಡಿ ಮೀನುಗಾರರ ಮಕ್ಕಳ ಶಿಕ್ಷಣವನ್ನು ಪ್ರೋತ್ಸಾಹಿಸಲು ಸೂಕ್ತ ಕ್ರಮ ವಹಿಸಲಾಗುತ್ತಿದೆ ಎಂದು ಅವರು ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ರೈತರ ಮಕ್ಕಳಿಗೆ ವಿದ್ಯಾನಿಧಿ ಯೋಜನೆಯನ್ನು ಮೀನುಗಾರರ ಮಕ್ಕಳಿಗೂ ಸಹ ವಿಸ್ತರಿಸಲಾಗಿದ್ದು, ಈ ವರ್ಷ 1 ಲಕ್ಷ ಮೀನುಗಾರರ ಮಕ್ಕಳಿಗೆ ರೈತ ವಿದ್ಯಾನಿಧಿ ವಿತರಿಸುವ ಗುರಿ ಹೊಂದಲಾಗಿದೆ. ಮೀನುಗಾರರಿಗೆ ಸೂಕ್ತ ವಸತಿ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ 5000ಮನೆಗಳನ್ನು ಮಂಜೂರು ಮಾಡಲಾಗಿದ್ದು, ಶೀಘ್ರದಲ್ಲೇ ವಿತರಿಸಲಾಗುವುದು ಎಂದು ಅವರು ಹೇಳಿದ್ದಾರೆ.
 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.