ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ: 10 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ
ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಮುಂದುವರಿದಿದೆ. ಬೆಂಗಳೂರಿನಲ್ಲಿ ನಿನ್ನೆ ಮಧ್ಯಾಹ್ನ ಶುರುವಾದ ಮಳೆ ತಡರಾತ್ರಿವರೆಗೂ ಅಲ್ಲಲ್ಲಿ ಸುರಿಯುತ್ತಲೇ ಇತ್ತು. ಇದರಿಂದಾಗಿ ಬೆಂಗಳೂರು ಜನಜೀವನ ಅಸ್ತವ್ಯಸ್ತವಾಗಿತ್ತು.

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಮುಂದುವರಿದಿದೆ. ಬೆಂಗಳೂರಿನಲ್ಲಿ ನಿನ್ನೆ ಮಧ್ಯಾಹ್ನ ಶುರುವಾದ ಮಳೆ ತಡರಾತ್ರಿವರೆಗೂ ಅಲ್ಲಲ್ಲಿ ಸುರಿಯುತ್ತಲೇ ಇತ್ತು. ಇದರಿಂದಾಗಿ ಬೆಂಗಳೂರು ಜನಜೀವನ ಅಸ್ತವ್ಯಸ್ತವಾಗಿತ್ತು.
ಇಂದು ಕೂಡ ರಾಜಧಾನಿಯಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ತಗ್ಗು ಪ್ರದೇಶಗಳಲ್ಲಿ ನೀರು ನಿಂತ ಪರಿಣಾಮ ಜನರು ಪರದಾಡುವಂತಾಗಿದೆ. ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಬೀಸುತ್ತಿರುವುದರಿಂದ ಬೆಂಗಳೂರಿನಲ್ಲಿ ಇನ್ನೂ ಐದು ದಿನ ಮಳೆ ಆಗಲಿದೆ. ರಾಜಾಕಾಲುವೆ ಅಕ್ಕಪಕ್ಕದ ಮತ್ತು ತಗ್ಗು ಪ್ರದೇಶದ ಜನರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.
25 ಜಿಲ್ಲೆಗಳಿಗೆ ಎಚ್ಚರಿಕೆ: ರಾಜ್ಯದ 25 ಜಿಲ್ಲೆಗಳಿಗೆ ಮಳೆ ಅಲರ್ಟ್ ನೀಡಲಾಗಿದ್ದು, ಮುಂದಿನ 5 ದಿನ ರಾಜ್ಯದಲ್ಲಿ ಮಳೆ ಅಬ್ಬರ ಜೋರಾಗಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ಸೇರಿ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು, ಮೈಸೂರು, ಮಂಡ್ಯ, ಚಾಮರಾಜನಗರಮ, ರಾಮನಗರದಲ್ಲಿ ಭಾರೀ ಮಳೆಯಾಗಿದೆ. ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗದಲ್ಲೂ ಮಳೆಯಾಗಿದ್ದು, ಮಲೆನಾಡು ಜಿಲ್ಲೆಗಳಲ್ಲೂ ಮಳೆ ಸುರಿಯುತ್ತಿದೆ.
ಬೆಂಗಳೂರಿನ ಜನರು ಇನ್ನೂ 3 ದಿನಗಳ ಕಾಲ ಮಳೆ ಕಾಟವನ್ನು ಅನುಭವಿಸಬೇಕಾಗುತ್ತದೆ. ಇಂದಿನಿಂದ 3 ದಿನಗಳ ಕಾಲ ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಇಂದು ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ. ಅ. 18ರಂದು ಕರಾವಳಿಗೆ ಕೂಡ ಹಳದಿ ಅಲರ್ಟ್ ನೀಡಲಾಗಿದೆ.
ಕರ್ನಾಟಕದ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಇಂದಿನಿಂದ 3 ದಿನ ಮಳೆ ಹೆಚ್ಚಾಗುವ ಸಾಧ್ಯತೆಯಿದೆ.ಕರ್ನಾಟಕದ ಉತ್ತರ ಒಳನಾಡಿನಲ್ಲಿ ಇಂದಿನಿಂದ ಅ. 18ರವರೆಗೆ ಮಳೆ ಇರಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಭಾಗದಲ್ಲೂ ಅಧಿಕ ಮಳೆಯಾಗುವ ಸಾಧ್ಯತೆ ಇರುವುದರಿಂದ ಹಳದಿ ಅಲರ್ಟ್ ನೀಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


