ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಬೆದರಿಕೆ ಪ್ರಕರಣ: ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ಕಾರು ಅಡ್ಡಗಟ್ಟಿ ಬೆದರಿಕೆ ಹಾಕಿದ ಪ್ರಕರಣ ಭಾರೀ ಚರ್ಚೆಗೆ ಕಾರಣವಾಗಿದೆ. ಕರ್ನಾಟಕ ಸರ್ಕಾರ ಪ್ರಕರಣದ ತನಿಖೆಯನ್ನು ಸಿಐಡಿ ತನಿಖೆಗೆ ವಹಿಸಿ ಆದೇಶ ಹೊರಡಿಸಿದೆ.

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ಕಾರು ಅಡ್ಡಗಟ್ಟಿ ಬೆದರಿಕೆ ಹಾಕಿದ ಪ್ರಕರಣ ಭಾರೀ ಚರ್ಚೆಗೆ ಕಾರಣವಾಗಿದೆ. ಕರ್ನಾಟಕ ಸರ್ಕಾರ ಪ್ರಕರಣದ ತನಿಖೆಯನ್ನು ಸಿಐಡಿ ತನಿಖೆಗೆ ವಹಿಸಿ ಆದೇಶ ಹೊರಡಿಸಿದೆ.
ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಕಾರ್ ಅಡ್ಡಗಟ್ಟಿ ಜೀವ ಬೆದರಿಕೆ ಹಾಕಿದ ಪ್ರಕರಣದ ತನಿಖೆ ಹೊಣೆಯನ್ನು ಸಿಐಡಿಗೆ ವಹಿಸಿ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ. ಜಿಲ್ಲೆಯ ಫರಂಗಿಪೇಟೆ ಬಳಿ ಕಾರು ಅಡ್ಡಗಟ್ಟಿ ಶಾಸಕರಿಗೆ ಬೆದರಿಕೆ ಹಾಕಿದ್ದ ಬಗ್ಗೆ ಶಾಸಕರ ಕಾರು ಚಾಲಕ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಈ ಸಂಬಂಧ ಆರೋಪಿ ರಿಯಾಜ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ನಂತರ ಇದು ಕೊಲೆ ಯತ್ನ ಪ್ರಕರಣವಲ್ಲ. ಕಾರು ಹಿಂದಿಕ್ಕುವಾಗ ಈ ಘಟನೆ ನಡೆದಿದೆ ಎಂದು ಎಸ್ಪಿ ಸ್ಪಷ್ಟನೆ ನೀಡಿದ್ದರು. ಇದೀಗ ರಾಜ್ಯ ಸರ್ಕಾರವು ಪ್ರಕರಣದ ತನಿಖೆ ಹೊಣೆಯನ್ನು ಸಿಐಡಿಗೆ ವಹಿಸಿ ಆದೇಶ ಹೊರಡಿಸಿದೆ.
ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ. ತನಿಖಾಧಿಕಾರಿ ಕಚೇರಿಯಲ್ಲಿರುವ ದಾಖಲೆಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯೇ ಸಿಐಡಿ ಕಚೇರಿಗೆ ಹಸ್ತಾಂತರಿಸಬೇಕು ಎಂದು ಡಿಜಿಪಿ ಪರವಾಗಿ ಆದೇಶ ಹೊರಡಿಸಿರುವ ಆರ್.ಹಿತೇಂದ್ರ ಆದೇಶದಲ್ಲಿ ಹೇಳಿದ್ದಾರೆ.
ಬೆಂಗಳೂರಿನಿಂದ ಮಂಗಳೂರಿಗೆ ಕಳೆದ ಅ 13ರ ರಾತ್ರಿ ವಿಮಾನದಲ್ಲಿ ಬಂದಿದ್ದ ಶಾಸಕರು ರಾತ್ರಿ 11.15 ಸಮಯದಲ್ಲಿ ಮನೆಗೆ ತೆರಳುವ ವೇಳೆ ಆರೋಪಿಗಳು ಫರಂಗಿಪೇಟೆ ಬಳಿ ಕಾರು ಅಡ್ಡಗಟ್ಟಿದ್ದರು. ಮಾರಕಾಸ್ತ್ರ ಝಳಪಿಸಿ ಜೀವ ಬೆದರಿಕೆ ಹಾಕಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


