ಎಂ.ಪಿ. ರೇಣುಕಾಚಾರ್ಯ ಆಪ್ತ ಸಹಾಯಕನ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಅವರ ಆಪ್ತ ಸಹಾಯಕನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ಸೋಮವಾರ ರಾತ್ರಿ ಹೊನ್ನಾಳಿಯಲ್ಲಿ ನಡೆದಿದೆ.

ದಾವಣಗೆರೆ: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಅವರ ಆಪ್ತ ಸಹಾಯಕನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ಸೋಮವಾರ ರಾತ್ರಿ ಹೊನ್ನಾಳಿಯಲ್ಲಿ ನಡೆದಿದೆ.
ರೇಣುಕಾಚಾರ್ಯ ಅವರ ಆಪ್ತ ಸಹಾಯಕ ಪ್ರಜ್ವಲ್ ಎಂಬುವರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆಂದು ತಿಳಿದುಬಂದಿದೆ.
ಗಾಯಗೊಂಡಿರುವ ಪ್ರಜ್ವಲ್ ಅವರು ಹೊನ್ನಾಳಿ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಹಲ್ಲೆಗೆ ಪ್ರಮುಖ ಕಾರಣಗಳು ತಿಳಿದುಬಂದಿಲ್ಲ.
ಈ ನಡುವೆ ಎಂ.ಪಿ. ರೇಣುಕಾಚಾರ್ಯ ಅವರು, ಆಸ್ಪತ್ರೆಗೆ ಭೇಟಿ ನೀಡಿ ಪ್ರಜ್ವಲ್ ಅವರ ಆರೋಗ್ಯ ವಿಚಾರಿಸಿದರು. ಹಲ್ಲೆ ಮಾಡಿದವರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


