ಕೆಎಸ್ ಆರ್ ಟಿಸಿ ನೌಕರರಿಗೆ ಸಿಹಿ ಸುದ್ದಿ: ಇದೇ ಮೊದಲ ಬಾರಿಗೆ 50 ಲಕ್ಷ ರೂ. ಅಪಘಾತ ವಿಮೆ ಜಾರಿ
ರಾಜ್ಯ ಸರ್ಕಾರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಆರ್ಟಿಸಿ)ಯ ನೌಕರರಿಗೆ ಬುಧವಾರ ಸಿಹಿ ಸುದ್ದಿ ನೀಡಿದ್ದು, ಇದೇ ಮೊದಲ ಬಾರಿಗೆ ಸಿಬ್ಬಂದಿಗೆ 50 ಲಕ್ಷ ರೂ. ಅಪಘಾತ ವಿಮೆ ಯೋಜನೆ ಜಾರಿ ಮಾಡಿದೆ.

ಬೆಂಗಳೂರು: ರಾಜ್ಯ ಸರ್ಕಾರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಆರ್ಟಿಸಿ)ಯ ನೌಕರರಿಗೆ ಬುಧವಾರ ಸಿಹಿ ಸುದ್ದಿ ನೀಡಿದ್ದು, ಇದೇ ಮೊದಲ ಬಾರಿಗೆ ಸಿಬ್ಬಂದಿಗೆ 50 ಲಕ್ಷ ರೂ. ಅಪಘಾತ ವಿಮೆ ಯೋಜನೆ ಜಾರಿ ಮಾಡಿದೆ.
ಈ ಅಪಘಾ ವಿಮಾ ಯೋಜನೆಗೆ ಸಂಬಂಧಿಸಿದಂತೆ ಕೆಎಸ್ಆರ್ಟಿಸಿ, ಎಸ್ಬಿಐನೊಂದಿಗೆ ಒಡಂಬಡಿಕೆ ಮಾಡಿಕೊಂಡಿದೆ. ಈ ಒಡಂಬಡಿಕೆಗೆ ಕೆಎಸ್ ಆರ್ ಟಿಸಿ ಅಧ್ಯಕ್ಷ ಎಂ.ಚಂದ್ರಪ್ಪ ಅವರ ಸಮ್ಮುಖದಲ್ಲಿ ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್ ಹಾಗೂ ಎಸ್ಬಿಐ ಡಿಜಿಎಂ ಪಂಕಜ್ ತಪ್ಲಿಯಾಲ್ ಸಹಿ ಹಾಕಿದರು.
ಇದುವರೆಗೂ ನಿಗಮದ ಸಿಬ್ಬಂದಿ ಅಪಘಾತದಲ್ಲಿ(ಕರ್ತವ್ಯದ ಮೇಲೆ ಅಥವಾ ಕರ್ತವ್ಯದಲ್ಲಿ ಇಲ್ಲದಿರುವಾಗಲೂ) ಮೃತಪಟ್ಟರೆ, ಶಾಶ್ವತ ಅಥವಾ ಭಾಗಶಃ ಅಂಗವೈಕಲ್ಯಕ್ಕೆ ತುತ್ತಾದರೆ ಯಾವುದೇ ದೊಡ್ಡ ಮೊತ್ತದ ಪರಿಹಾರದ ಹಣ ಅವರ ಅವಲಂಬಿತರಿಗಾಗಲಿ ಅಥವಾ ಅವರಿಗಾಗಲಿ ಲಭಿಸುತ್ತಿರಲಿಲ್ಲ. ಹೀಗಾಗಿ ಕೆಎಸ್ಆರ್ ಟಿಸಿ ಮೊದಲ ಬಾರಿಗೆ 50 ಲಕ್ಷ ರೂ. ಅಪಘಾತ ವಿಮೆ ಯೋಜನೆ ಜಾರಿ ಮಾಡಿದೆ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ವೇತನ ಖಾತೆಯನ್ನು ಹೊಂದಿರುವ ನಿಗಮದ ನೌಕರರಿಗೆ 'ಪ್ರೀಮಿಯಂ ರಹಿತ' ವೈಯುಕ್ತಿಕ ಅಪಘಾತ ವಿಮೆ ಜಾರಿಗೊಳಿಸಲಾಗಿದೆ. ಈ ವೈಯುಕ್ತಿಕ ವಿಮಾ ಯೋಜನೆಯಿಂದ ಪಾಲಿಸಿದಾರರು ಅಪಘಾತದಲ್ಲಿ ಮೃತಪಟ್ಟಲ್ಲಿ ಅವರ ಅವಲಂಬಿತರಿಗೆ 50 ಲಕ್ಷ ರೂ. ಪರಿಹಾರದ ಹಣ ಕೂಡಲೇ ದೊರೆಯಲಿದೆ.
ಅಪಘಾತದಲ್ಲಿ ಸಿಬ್ಬಂದಿ ಶಾಶ್ವತವಾಗಿ ಪೂರ್ಣ ಅಂಗವೈಕಲ್ಯಕ್ಕೆ ತುತ್ತಾದಲ್ಲಿ 20 ಲಕ್ಷ ರೂ. ಹ಼ಣ ಹಾಗೂ ಭಾಗಶಃ ಅಂಗವೈಕಲ್ಯ ಉಂಟಾದಲ್ಲಿ 10 ಲಕ್ಷ ರೂ. ವಿಮಾ ಪರಿಹಾರ ದೊರೆಯಲಿದೆ. ಈ ವಿಮಾ ಯೋಜನೆಯಲ್ಲಿ ಮತ್ತೊಂದು ಉಪಯಕ್ತ ಕ್ರಮವೆಂದರೆ ಕರ್ತವ್ಯನಿರತ ಹಾಗೂ ಕರ್ತವ್ಯದಲ್ಲಿ ಇಲ್ಲದ ಸಮಯದಲ್ಲೂ ಸಂಭವಿಸುವ ವೈಯಕ್ತಿಕ ಅಪಘಾತಗಳಿಗೂ ವಿಮೆ ಅನ್ವಯಿಸುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


