ರಾಜ್ಯ

ಹಾಸನಾಂಬ ದೇವಿ ದರ್ಶನಕ್ಕಾಗಿ ಸರತಿ ಸಾಲಿನಲ್ಲಿ ನಿಂತಿದ್ದ ಭಕ್ತ ಹೃದಯಾಘಾತದಿಂದ ಸಾವು!

ಹಾಸನದ ದೇವಸ್ಥಾನದ ಮುಂಭಾಗದಲ್ಲಿ ಹಾಸನಾಂಬ ದೇವಿಯ ಭಕ್ತರೊಬ್ಬರು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಹಾಸನಾಂಬ ದೇವಿ ದರ್ಶನಕ್ಕಾಗಿ ಸರತಿ ಸಾಲಿನಲ್ಲಿ ನಿಂತಿದ್ದ ಭಕ್ತ ಹೃದಯಾಘಾತದಿಂದ ಸಾವು!
ಸಂಗ್ರಹ ಚಿತ್ರ
Published On :

ಹಾಸನ: ಹಾಸನದ ದೇವಸ್ಥಾನದ ಮುಂಭಾಗದಲ್ಲಿ ಹಾಸನಾಂಬ ದೇವಿಯ ಭಕ್ತರೊಬ್ಬರು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮೃತರನ್ನು ಚನ್ನರಪಟ್ಟಣ ತಾಲೂಕಿನ ಬೊಮ್ಮನಹಳ್ಳಿಯ 40 ವರ್ಷದ ಗಿರೀಶ್ ಎಂದು ಗುರುತಿಸಲಾಗಿದೆ. ಹಾಸನಾಂಬ ದೇವಸ್ಥಾನಕ್ಕೆ ಪ್ರವೇಶ ಪಡೆಯಲು ಸರತಿ ಸಾಲಿನಲ್ಲಿ ನಿಂತಿದ್ದಾಗ ಈ ಘಟನೆ ನಡೆದಿದೆ. 

ಪೊಲೀಸರು ಮತ್ತು ಅಲ್ಲಿ ನರೆದಿದ್ದ ಭಕ್ತ ಸಮೂಹ ಗಿರೀಶ್ ಅವರನ್ನು ಹಾಸನ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ (ಹಿಮ್ಸ್) ಸ್ಥಳಾಂತರಿಸಿದರು. ಆದರೆ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು. 

ಹಾಸನಾಂಬ ದೇವಸ್ಥಾನದಲ್ಲಿ ಗುರುವಾರ ಅತಿ ಹೆಚ್ಚು ಜನರು ಸೇರಿದ್ದರು. ದೇವಸ್ಥಾನ ಪ್ರವೇಶಿಸಲು ಯತ್ನಿಸಿದ ಭಕ್ತರನ್ನು ತಪ್ಪಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.