ರಾಜ್ಯ

48 ವರ್ಷಗಳಲ್ಲಿ ನಂತರ ಇದೇ ಮೊದಲು: ರಾಜ್ಯದಿಂದ ತಮಿಳುನಾಡಿಗೆ ಅತಿ ಹೆಚ್ಚು ನೀರು ಬಿಡುಗಡೆ!

ಹಳೆ ಮೈಸೂರು ಭಾಗದಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆ ಹಾಗೂ ಕಾವೇರಿ ಜಲಾನಯನ ಪ್ರದೇಶಗಳಲ್ಲಿನ ಜಲಾಶಯಗಳು ಮತ್ತು ಕೆರೆಗಳು ಬಹುತೇಕ ಭರ್ತಿಯಾಗಿದ್ದರಿಂದ ರಾಜ್ಯ ಸರ್ಕಾರ ಈ ಬಾರಿ ತಮಿಳುನಾಡು ರಾಜ್ಯಕ್ಕೆ ಅತೀ ಹೆಚ್ಚು ನೀರನ್ನು ಬಿಡುಗಡೆ ಮಾಡಿದ್ದು, ಇದು ಕಳೆದ 48 ವರ್ಷಗಳಲ್ಲೇ ಅತೀ ಹೆಚ್ಚು ಎಂದು ಹೇಳಲಾಗುತ್ತಿದೆ.

48 ವರ್ಷಗಳಲ್ಲಿ ನಂತರ ಇದೇ ಮೊದಲು: ರಾಜ್ಯದಿಂದ ತಮಿಳುನಾಡಿಗೆ ಅತಿ ಹೆಚ್ಚು ನೀರು ಬಿಡುಗಡೆ!
ಸಂಗ್ರಹ ಚಿತ್ರ
Published On :

ಮೈಸೂರು: ಹಳೆ ಮೈಸೂರು ಭಾಗದಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆ ಹಾಗೂ ಕಾವೇರಿ ಜಲಾನಯನ ಪ್ರದೇಶಗಳಲ್ಲಿನ ಜಲಾಶಯಗಳು ಮತ್ತು ಕೆರೆಗಳು ಬಹುತೇಕ ಭರ್ತಿಯಾಗಿದ್ದರಿಂದ ರಾಜ್ಯ ಸರ್ಕಾರ ಈ ಬಾರಿ ತಮಿಳುನಾಡು ರಾಜ್ಯಕ್ಕೆ ಅತೀ ಹೆಚ್ಚು ನೀರನ್ನು ಬಿಡುಗಡೆ ಮಾಡಿದ್ದು, ಇದು ಕಳೆದ 48 ವರ್ಷಗಳಲ್ಲೇ ಅತೀ ಹೆಚ್ಚು ಎಂದು ಹೇಳಲಾಗುತ್ತಿದೆ. 

ಕಾವೇರಿ ನದಿ ನೀರು ಹಂಚಿಕೆಯಾದ ಬಳಿಕ ಇದೇ ಮೊದಲ ಬಾರಿಗೆ ರಾಜ್ಯ ಸರ್ಕಾರ ತಮಿಳುನಾಡಿಗೆ ಅತೀ ಹೆಚ್ಚಿನ ನೀರನ್ನು ಬಿಡುಗಡೆ ಮಾಡಿದೆ. 

ಕಾವೇರಿ ನ್ಯಾಯಾಧಿಕರಣದ ತೀರ್ಪಿನ ಪ್ರಕಾರ ಕರ್ನಾಟಕವು ತಮಿಳುನಾಡಿಗೆ 101 ಟಿಎಂಸಿ ಅಡಿ ನೀರನ್ನು ಬಿಡುಗಡೆ ಮಾಡಬೇಕು. ಆದರೆ, ಈ ಬಾರಿ ಅದಕ್ಕಿಂತಲೂ ಹೆಚ್ಚಿನ ನೀರನ್ನು ಬಿಡುಗಡೆ ಮಾಡಿದೆ. ಈ ವರ್ಷದ ಜೂನ್ ಮತ್ತು ಸೆಪ್ಟೆಂಬರ್ ನಡುವೆ ತಮಿಳುನಾಡಿಗೆ 452.5 ಟಿಎಂಸಿ ಅಡಿ ನೀರನ್ನು ಬಿಡುಗಡೆ ಮಾಡಲಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ. .

ಬಿಳಿಗುಂಡಲು ಗೇಜಿಂಗ್ ಸ್ಟೇಷನ್ ಜೂನ್‌ನಲ್ಲಿ 16.46 ಟಿಎಂಸಿ ಅಡಿ, ಜುಲೈನಲ್ಲಿ 106.93 ಟಿಎಂಸಿ ಅಡಿ, ಆಗಸ್ಟ್‌ನಲ್ಲಿ 223.57 ಟಿಎಂಸಿ ಮತ್ತು ಸೆಪ್ಟೆಂಬರ್‌ನಲ್ಲಿ 105.52 ಟಿಎಂಸಿ ಅಡಿ ನೀರನ್ನು ಬಿಡುಗಡೆ ಮಾಡಿದೆ. 

ಅಕ್ಟೋಬರ್‌ನಲ್ಲಿಯೂ ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ಮೆಟ್ಟೂರು ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಮೆಟ್ಟೂರು ಜಲಾಶಯ ಈಗ ಬಹುತೇಕ ಭರ್ತಿಯಾಗಿರುವುದರಿಂದ ತಮಿಳುನಾಡಿಗೆ ಹೆಚ್ಚಾಗಿ  ನೀರನ್ನು ಬಿಡುಗಡೆ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ. 

ಕಳೆದ ನಾಲ್ಕು ವರ್ಷಗಳಲ್ಲಿ ತಮಿಳುನಾಡಿಗೆ ನಿಗದಿಪಡಿಸಿದ ಪ್ರಮಾಣಕ್ಕಿಂತ ಹೆಚ್ಚಿನ ನೀರನ್ನು ಬಿಡುಗಡೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಕರ್ನಾಟಕವು 2018-2019ರಲ್ಲಿ 228 ಟಿಎಂಸಿ ಅಡಿ ಹೆಚ್ಚುವರಿ ನೀರು, 2019-2020ರಲ್ಲಿ 97 ಟಿಎಂಸಿ,  2020-2021ರಲ್ಲಿ 34 ಟಿಎಂಸಿ, 2021-2022 ಸೆಪ್ಟೆಂಬರ್‌ವರೆಗೆ 103 ಟಿಎಂಸಿ ಅಡಿ ಹಾಗೂ 275 ಅಡಿ ಹೆಚ್ಚುವರಿ ನೀರನ್ನು ಬಿಡುಗಡೆ ಮಾಡಿದೆ. 

67 ಟಿಎಂಸಿ ಅಡಿ ನೀರನ್ನು ಸಂಗ್ರಹಿಸಲು ರಾಜ್ಯ ಸರ್ಕಾರವು ಮೇಕೆದಾಟುವಿನಲ್ಲಿ ಸಮತೋಲನ ಜಲಾಶಯವನ್ನು ನಿರ್ಮಿಸಲು ಯೋಜಿಸಿದೆ. ಮೆಟ್ಟೂರು ಜಲಾಶಯದಲ್ಲಿ 93.47 ಟಿಎಂಸಿ ಅಡಿ ನೀರು ಸಂಗ್ರಹಿಸುವ ಸಾಮರ್ಥ್ಯ ಹೊಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.