ಕುರುಬರಿಗೆ ಕಾಂಗ್ರೆಸ್ ಯಾವುದೇ ಸ್ಥಾನಮಾನ ನೀಡಿಲ್ಲ: ಸಮುದಾಯದ ಮುಖಂಡರ ಅಸಮಾಧಾನ
ಸತತ ಮೂರು ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕುರುಬರಿಗೆ ಯಾವುದೇ ಸ್ಥಾನ ನೀಡಿಲ್ಲ, ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಲ್ಲಿ ಸಮುದಾಯದ ಸದಸ್ಯರನ್ನು ಪರಿಗಣಿಸಲಾಗಿಲ್ಲ ಎಂದು ಕಾಂಗ್ರೆಸ್ ವಿರುದ್ಧ ಕುರುಬ ಸಮುದಾಯದ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ತುಮಕೂರು: ಸತತ ಮೂರು ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕುರುಬರಿಗೆ ಯಾವುದೇ ಸ್ಥಾನ ನೀಡಿಲ್ಲ, ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಲ್ಲಿ ಸಮುದಾಯದ ಸದಸ್ಯರನ್ನು ಪರಿಗಣಿಸಲಾಗಿಲ್ಲ ಎಂದು ಕಾಂಗ್ರೆಸ್ ವಿರುದ್ಧ ಕುರುಬ ಸಮುದಾಯದ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮುದಾಯದ ಮುಖಂಡರು, ಸಿದ್ದರಾಮಯ್ಯ ಅವರು ಪಕ್ಷಕ್ಕೆ ಸೇರ್ಪಡೆಗೊಂಡ ಬಳಿಕ ಕುರುಬ ಸಮುದಾಯದವರನ್ನು ಕಡೆಗಣಿಸಲಾಗಿಯೇ ಎಂಬ ಪ್ರಶ್ನೆಗೆ ಹೌದು ಎಂದು ಉತ್ತರಿಸಿದ್ದಾರೆ.
ಸತತ ಮೂರು ವಿಧಾನಸಭಾ ಚುನಾವಣೆಯಲ್ಲು ಕುರುಬರಿಗೆ ಕಾಂಗ್ರೆಸ್ ಸ್ಥಾನ ನೀಡಿಲ್ಲ. ಮಾಜಿ ಶಾಸಕ ಲಾಕಪ್ಪ, ಕುರುಬ ಸಂಘದ ಮುಖಂಡರಾದ ಬೈಲಪ್ಪ, ಸುರೇಶ್ ಸೇರಿದಂತೆ ಸಮಾಜದ ಮುಖಂಡರಿಗೆ ಚುನಾವಣೆಗೆ ಟಿಕೆಟ್ ನೀಡಿಲ್ಲ. ಕುರುಬ ಜನಾಂಗದ ಹೊಸ ತಲೆಮಾರಿನ ನಾಯಕರನ್ನು ಬೆಳೆಸಲು ಡಾ.ಜಿ.ಪರಮೇಶ್ವರ, ಟಿ.ಬಿ.ಜಯಚಂದ್ರ, ಕೆ.ಎನ್.ರಾಜಣ್ಣ ಸೇರಿದಂತೆ ಹಿರಿಯ ನಾಯಕರು ಆಸಕ್ತಿ ತೋರುತ್ತಿಲ್ಲ ಎಂದು ಆರೋಪಿಸಿದರು.
ಈ ಪರಿಸ್ಥಿತಿ ಹೀಗೆಯೇ ಮುಂದುವರಿದರೆ, ಸಾಕಷ್ಟು ಜನಸಂಖ್ಯೆಯನ್ನು ಹೊಂದಿರುವ ಶಿರಾ, ತಿಪಟೂರು ಮತ್ತು ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷವು ಸಮುದಾಯದ ಕೋಪವನ್ನು ಎದುರಿಸಬೇಕಾಗುತ್ತದೆ,'' ಎಂದು ಎಚ್ಚರಿಸಿದರು.
ಇದೇ ವೇಲೆ ಮಾತನಾಡಿದ ಕನಕ ಯುವ ಸೇನೆ ಮುಖಂಡ ಕೆಂಪರಾಜು ಅವರು, ಸಮುದಾಯದ ಸದಸ್ಯರನ್ನು ಸಂಘಟನಾ ಹುದ್ದೆಗಳಿಗೆ ಪರಿಗಣಿಸುತ್ತಿಲ್ಲ. ಈ ವಿಚಾರವನ್ನು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಮುಂದೆ ಮಂಡಿಸಿದ್ದೇವೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


