ಹಿಂದುಳಿದ ವರ್ಗಗಳ ರಾಜ್ಯ ಮಟ್ಟದ ಸಮಾವೇಶ: ಮಧ್ಯಪ್ರದೇಶ ಸಿಎಂ ಚೌಹಾಣ್ ಭಾಗಿ ಸಾಧ್ಯತೆ
ಕಲಬುರಗಿಯಲ್ಲಿ ಅಕ್ಟೋಬರ್ 30 ರಂದು ರಾಜ್ಯಮಟ್ಟದ ಹಿಂದುಳಿದ ವರ್ಗಗಳ ಜಾಗೃತಿ ಸಮಾವೇಶ ಆಯೋಜಿಸಲಾಗಿದ್ದು, ಈ ಸಮಾವೇಶದಲ್ಲಿ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಪಾಲ್ಗೊಳ್ಳಲಿದ್ದಾರೆಂದು ಹೇಳಲಾಗುತ್ತಿದೆ.

ಬೆಂಗಳೂರು: ಕಲಬುರಗಿಯಲ್ಲಿ ಅಕ್ಟೋಬರ್ 30 ರಂದು ರಾಜ್ಯಮಟ್ಟದ ಹಿಂದುಳಿದ ವರ್ಗಗಳ ಜಾಗೃತಿ ಸಮಾವೇಶ ಆಯೋಜಿಸಲಾಗಿದ್ದು, ಈ ಸಮಾವೇಶದಲ್ಲಿ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಪಾಲ್ಗೊಳ್ಳಲಿದ್ದಾರೆಂದು ಹೇಳಲಾಗುತ್ತಿದೆ.
2023ರ ವಿಧಾನಸಭಾ ಚುನಾವಣೆಗೆ ಬಿಜೆಪಿ ಸಿದ್ಧತೆಗಳ ನಡೆಸಿದ್ದು, ಸಿದ್ಧತೆ ಹಿನ್ನೆಲೆಯಲ್ಲಿ ಕಲಬುರಗಿಯಲ್ಲಿ ರಾಜ್ಯಮಟ್ಟದ ಹಿಂದುಳಿದ ವರ್ಗಗಳ ಜಾಗೃತಿ ಸಮಾವೇಶವನ್ನು ಆಯೋಜಿಸಿದೆ. ಶಿವರಾಜ್ ಸಿಂಗ್ ಚೌಹಾಣ್ ಅವರು ಹಿಂದುಳಿದ ವರ್ಗ ಕಿರಾರ್ ಸಮುದಾಯಕ್ಕೆ ಸೇರಿದವರಾಗಿದ್ದು, ಈ ಹಿನ್ನೆಲೆಯಲ್ಲಿ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆಂದು ತಿಳಿದುಬಂದಿದೆ.
ಸಚಿವ ಸುನೀಲ್ ಕುಮಾರ್ ಜೌತೆಗೆ ಚೌಹಾಣ್ ಅವರನ್ನು ಒಬಿಸಿ ನಾಯಕ ಎಂದು ಬಿಂಬಿಸಲು ಬಿಜೆಪಿ ಚಿಂತನೆ ನಡೆಸಿದೆ. ರಾಜ್ಯದಲ್ಲಿ ಹಿಂದುಳಿದ ಕುರುಬ ಸಮುದಾಯವು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆ.ಎಸ್.ಈಶ್ವರಪ್ಪ ಪರವಾಗಿ ನಿಂತಿದ್ದು, ಬಿಜೆಪಿ ಒಲವು ಕಳೆದುಕೊಳ್ಳುತ್ತಿದೆ. ಹೀಗಾಗಿ ಕುರುಬರನ್ನು ಹೊರತುಪಡಿಸಿ ಸವಿತಾ ಸಮಾಜ, ಮಡಿವಾಳ, ಅಕ್ಕಸಾಲಿಗರು, ಬಡಗಿಗಳು ಸೇರಿದಂತೆ ನೂರು ಒಬಿಸಿ ಸಮುದಾಯಗಳನ್ನು ಸೆಳೆಯಲು ಬಿಜೆಪಿ ಯತ್ನಿಸುತ್ತಿದೆ.
"62 ವಿಧಾನಸಭಾ ಕ್ಷೇತ್ರಗಳಲ್ಲಿ ನೇಕಾರರು ನಿರ್ಣಾಯಕ ಪಾತ್ರ ವಹಿಸುತ್ತಾರೆ. ಅವರನ್ನು ಪಕ್ಷಕ್ಕಾಗಿ ಸಂಘಟಿಸಲಿದ್ದೇವೆ" ಎಂದು ಬಿಜೆಪಿ ಮುಖ್ಯ ವಕ್ತಾರ ಎಂಜಿ ಮಹೇಶ್ ತಿಳಿಸಿದ್ದಾರೆ.
ರಾಜ್ಯಾದ್ಯಂತ ಪ್ರತಿ 224 ವಿಧಾನಸಭಾ ಕ್ಷೇತ್ರಗಳಿಂದ ಐದು ಲಕ್ಷಕ್ಕೂ ಹೆಚ್ಚು ಜನರು ಈ ಬೃಹತ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಅಕ್ಟೋಬರ್ 30 ರ ಮುನ್ನಾದಿನದಂದು ಮೈಸೂರಿನಿಂದ ಕಲಬುರಗಿಗೆ ಹೊರಡುವ ರೈಲು ಏಳು ಹೆಚ್ಚುವರಿ ಬೋಗಿಗಳನ್ನು ಹೊಂದಿರುತ್ತದೆ. ಪಕ್ಷದ ಕಾರ್ಯಕರ್ತರು ಸ್ವಯಂಪ್ರೇರಣೆಯಿಂದ ಭಾಗವಹಿಸುವವರ ಟಿಕೆಟ್‌ಗಳನ್ನು ತಲಾ 800 ರೂಪಾಯಿಯಂತೆ ಪಾವತಿಸಿ ಬುಕ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


