ರಾಜ್ಯ

ಮಂಗಳೂರಿನಲ್ಲಿ ಬೆಡ್‌ಶೀಟ್ ಮಾರಾಟಗಾರರ ಮೇಲೆ ಹಲ್ಲೆ ನಡೆಸಿದ 6 ಮಂದಿ ಬಂಧನ

ಕಳೆದ ವಾರ ಕಡಬ ತಾಲೂಕಿನ ಎಡಮಂಗಲದಲ್ಲಿ ಇಬ್ಬರು ಬೀದಿ ವ್ಯಾಪಾರಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಬೆಡ್‌ಶೀಟ್ ಮಾರಾಟಗಾರರ ಮೇಲೆ ಹಲ್ಲೆ ನಡೆಸಿದ 6 ಮಂದಿ ಬಂಧನ
ಪ್ರಾತಿನಿಧಿಕ ಚಿತ್ರ
Published On :

ಮಂಗಳೂರು: ಕಳೆದ ವಾರ ಕಡಬ ತಾಲೂಕಿನ ಎಡಮಂಗಲದಲ್ಲಿ ಇಬ್ಬರು ಬೀದಿ ವ್ಯಾಪಾರಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಪುನೀತ್, ರಾಜು, ಪ್ರಸಾದ್, ಕಿಶೋರ್, ಭವಿತ್ ಮತ್ತು ರಂಜಿತ್ ಎಂದು ಗುರುತಿಸಲಾಗಿದೆ ಎಂದು ತಿಳಿಸಿದ್ದಾರೆ.

ಬೆಡ್‌ಶೀಟ್ ಖರೀದಿಸುವ ವಿಚಾರವಾಗಿ ಕಡಬದ ಮನೆಯೊಂದರಲ್ಲಿ ಮಹಿಳೆಯೊಂದಿಗೆ ಜಗಳವಾಗಿತ್ತು. ಬಳಿಕ ಸ್ಥಳದಿಂದ ಹೊರಟು ಪುತ್ತೂರಿನ ಕಾಣಿಯೂರಿನತ್ತ ತೆರಳುತ್ತಿದ್ದ ವೇಳೆ ಗುಂಪೊಂದು ನಮ್ಮ ಮೇಲೆ ಹಲ್ಲೆ ನಡೆಸಿದೆ ಎಂದು ಇಬ್ಬರು ಮಾರಾಟಗಾರರಾದ ಮೊಹಮ್ಮದ್ ರಫೀಕ್ ಮತ್ತು ರಮಿಯಾಸುದ್ದೀನ್ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ಗುಂಪೊಂದು ನಿಂದಿಸಿ ಕಬ್ಬಿಣದ ರಾಡ್ ಮತ್ತು ದೊಣ್ಣೆಗಳಿಂದ ಥಳಿಸಿದ್ದು, ಕಾರಿಗೆ ಹಾನಿ ಮಾಡಿದೆ. ಹೀಗಾಗಿ 1.50 ಲಕ್ಷ ರೂಪಾಯಿ ನಷ್ಟವಾಗಿದೆ. 25,000 ಮೌಲ್ಯದ ಬೆಡ್‌ಶೀಟ್‌ಗಳು ಹರಿದುಹೋಗಿವೆ ಅಥವಾ ಹಾನಿಗೊಳಗಾಗಿವೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಕಡಬದ ಮಹಿಳೆ ನೀಡಿರುವ ಪ್ರತ್ಯೇಕ ದೂರಿನಲ್ಲಿ, ತಮ್ಮಿಂದ ಏನನ್ನೂ ಖರಿದಿಸಲು ನಿರಾಕರಿಸಿದ್ದಕ್ಕಾಗಿ ಇಬ್ಬರು ಮಾರಾಟಗಾರರು ಅಸಭ್ಯವಾಗಿ ವರ್ತಿಸಿದ್ದಾರೆ. ತಾನು ಎಚ್ಚರಿಕೆ ನೀಡಿದ ನಂತರ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಹೇಳಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಕಡಬ ಪೊಲೀಸರು ಇಬ್ಬರ ವಿರುದ್ಧವೂ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.