ರಾಜ್ಯ

ಕೋವಿಡ್- 19: ರಾಜ್ಯದಲ್ಲಿಂದು 119 ಹೊಸ ಪ್ರಕರಣ ಪತ್ತೆ, ಸಾವು ಶೂನ್ಯ

ರಾಜ್ಯದಲ್ಲಿ ಕೋವಿಡ್-19 ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 82 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟಾರೇ ಸೋಂಕಿತರ ಸಂಖ್ಯೆ 40,68,035ಕ್ಕೆ ಏರಿಕೆಯಾಗಿದೆ.

ಕೋವಿಡ್- 19: ರಾಜ್ಯದಲ್ಲಿಂದು 119 ಹೊಸ ಪ್ರಕರಣ ಪತ್ತೆ, ಸಾವು ಶೂನ್ಯ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 82 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟಾರೇ ಸೋಂಕಿತರ ಸಂಖ್ಯೆ 40,68,035ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಯಾವುದೇ ಸಾವಿನ ಪ್ರಕರಣ ವರದಿಯಾಗಿಲ್ಲ. ಹೀಗಾಗಿ ಸಾವಿನ ಸಂಖ್ಯೆ 40,254 ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ 61 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,74,001ಕ್ಕೆ ಏರಿಕೆಯಾಗಿದೆ. ರಾಜಧಾನಿಯಲ್ಲೂ ಕೊರೋನಾದಿಂದ ಯಾವುದೇ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 79  ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 40,25,410 ಕ್ಕೆ ಏರಿಕೆಯಾಗಿದೆ. ಇನ್ನು 2,329 ಸಕ್ರಿಯ ಪ್ರಕರಣಗಳಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.