ಚಿತ್ರದುರ್ಗದಲ್ಲಿ ಭೀಕರ ರಸ್ತೆ ಅಪಘಾತ: ಸ್ಥಳದಲ್ಲೇ ಮೂವರ ದುರ್ಮರಣ; ಹಬ್ಬದ ಮನೆಯಲ್ಲಿ ಮುಗಿಲು ಮುಟ್ಟಿದ ಆಕ್ರಂದನ
ದೀಪಾವಳಿ ಹಬ್ಬದ ದಿನವೇ ಚಿತ್ರದುರ್ಗದ ಪ್ರವಾಸಿ ಮಂದಿರ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ. ಇಬ್ಬರು ಗಾಯಗೊಂಡಿದ್ದಾರೆ.

ಚಿತ್ರದುರ್ಗ: ದೀಪಾವಳಿ ಹಬ್ಬದ ದಿನವೇ ಚಿತ್ರದುರ್ಗದ ಪ್ರವಾಸಿ ಮಂದಿರ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ. ಇಬ್ಬರು ಗಾಯಗೊಂಡಿದ್ದಾರೆ.
ಚಳ್ಳಕೆರೆ ತಾಲೂಕಿನ ಕಾಮಸಮುದ್ರ ಗ್ರಾಮದ ಕಾರು ಚಾಲಕ ಮನು (21), ಚಿತ್ರದುರ್ಗ ತಾಲೂಕಿನ ಮೆದೇಹಳ್ಳಿ ಗ್ರಾಮದ ಹರೀಶ್ (25) ಮತ್ತು ಸಚಿನ್ (25)ಮೃತ ದುರ್ದೈವಿಗಳು.
ಇಂಡಿಕಾ ಕಾರಿನಲ್ಲಿ ಡ್ರೈವರ್ ಸೇರಿ ಐವರು ಪ್ರಯಾಣಿಸುತ್ತಿದ್ದರು. ಸೋಮವಾರ ಮಧ್ಯರಾತ್ರಿ ಚಿತ್ರದುರ್ಗದ ಪ್ರವಾಸಿ ಮಂದಿರ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಡಿವೈಡರ್ಗೆ ಡಿಕ್ಕಿಯಾಗಿದೆ. ಚಿತ್ರದುರ್ಗ ಸಂಚಾರಿ ಠಾಣೆ ಪೊಲೀಸರು ಮೃತದೇಹಗಳನ್ನು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಸಂಬಂಧ ಚಿತ್ರದುರ್ಗ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


